ಸೈಟ್ ವಾಪಸ್ ಪಡೆದು ಕೋರ್ಟ್ ಆದೇಶ ಉಲ್ಲಂಘನೆ: ಮುಡಾ ಆಯುಕ್ತರ ಬಂಧನಕ್ಕೆ ಕುಮಾರಸ್ವಾಮಿ ಆಗ್ರಹ

ಮುಡಾ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಸ್ ನೀಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಸೈಟ್ ವಾಪಸ್ ಪಡೆದು ಕೋರ್ಟ್ ಆದೇಶ ಉಲ್ಲಂಘನೆ ಮಾಡಲಾಗಿದೆ. ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸೈಟ್ ವಾಪಸ್ ಪಡೆದು ಕೋರ್ಟ್ ಆದೇಶ ಉಲ್ಲಂಘನೆ: ಮುಡಾ ಆಯುಕ್ತರ ಬಂಧನಕ್ಕೆ ಕುಮಾರಸ್ವಾಮಿ ಆಗ್ರಹ
ಕುಮಾರಸ್ವಾಮಿ
Follow us
| Updated By: ಗಣಪತಿ ಶರ್ಮ

Updated on: Oct 02, 2024 | 3:11 PM

ಬೆಂಗಳೂರು, ಅಕ್ಟೋಬರ್ 2: ಮುಡಾ 14 ಸೈಟ್​ಗಳ ಖಾತೆ ರದ್ದು ಮತ್ತು ಸಿಎಂ ಸಿದ್ದರಾಮಯ್ಯ ಪಾರ್ವತಿ ಹೆಸರಿನಲ್ಲಿದ್ದ ಸೈಟ್​ಗಳು ಮುಡಾ ಪಾಲಾಗಿದ್ದರಿಂದ ಮುಡಾ ಹಗರಣಕ್ಕೆ ದೊಡ್ಡ ತಿರುವು ದೊರೆತಿದೆ. ಮಂಗಳವಾರ ಖುದ್ದು ಸಿಎಂ ಸಿದ್ದರಾಮಯ್ಯರ ಪತ್ನಿಯೇ ಮುಡಾ ಕಚೇರಿಗೆ ಬಂದು ಸೈಟ್ ವಾಪಸ್​ ಕೊಡೋದಾಗಿ ಹೇಳಿದ್ದರು. ಇದಾಗ್ತಿದ್ದಂತೆಯೇ ತಕ್ಷಣವೇ ಸಿಎಂ ಪತ್ನಿಯ ಹೆಸರಿನಲ್ಲಿದ್ದ ಸೈಟ್​ಗಳು ಮುಡಾ ಪಾಲಾಗಿದೆ. 14 ಸೈಟ್​ಗಳ ಕ್ರಮಪತ್ರ ರದ್ದಾಗಿದೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಈ ಮಧ್ಯೆ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಸೈಟ್​ ವಾಪಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಡಾ ಆಯುಕ್ತರ ಮೇಲೆ ಯಾಱರು ಪ್ರಭಾವ ಬೀರಿದ್ದಾರೆ ಅಂತಾ ಗೊತ್ತಾಗ್ಬೇಕಿದೆ ಎಂದು ಆಗ್ರಹಿಸಿದ್ದಾರೆ.

ಮುಡಾದಲ್ಲಿ ನೂರಾರು ಫಲಾನುಭವಿಗಳು ಇದ್ದಾರೆ: ಚಲುವರಾಯಸ್ವಾಮಿ

ಮುಡಾದಲ್ಲಿ ನೂರಾರು ಜನರು ಫಲಾನುಭವಿಗಳು ಇದ್ದಾರೆ. ಇದರಲ್ಲಿ ಬಿಜೆಪಿ, ಕಾಂಗ್ರೆಸ್​ನವರು ಎಲ್ಲ ಇದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ತನಿಖೆ ಆದ ಮೇಲೆ ಎಲ್ಲವೂ ಹೊರಗೆ ಬರುತ್ತೆ. ಎಲ್ಲರೂ ತಾಳ್ಮೆಯಿಂದ ಇರಿ ಎಂದು ಹೇಳಿದ್ದಾರೆ.

ಕೇಂದ್ರದ 29 ಸಚಿವರ ವಿರುದ್ಧ ಕ್ರಿಮಿನಲ್​ ಕೇಸ್​ಗಳಿವೆ: ಲಾಡ್ ಕಿಡಿ

ಸಿದ್ದರಾಮಯ್ಯ ರಾಜೀನಾಮೆ ಕೇಳ್ತಿರೋ ಬಿಜೆಪಿಗೆ ಸಚಿವ ಸಂತೋಷ್ ಲಾಡ್​ ಕೌಂಟರ್ ಕೊಟ್ಟಿದ್ದಾರೆ. ಕೇಂದ್ರ ಸಂಪುಟದ 29 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್​ಗಳಿವೆ. ಅವರು ರಾಜೀನಾಮೆ ಕೊಡ್ಬೇಕಲ್ವಾ? ಅಂತಾ ಪ್ರಶ್ನಿಸಿದ್ದಾರೆ. ಇನ್ನ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಸಿಎಂ ಪತ್ನಿ ಮುಜುಗರದಿಂದ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರು.

ಇತ್ತ ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟಿದ್ದನ್ನೇ ವಿಪಕ್ಷ ನಾಯಕರು ಅಸ್ತ್ರ ಮಾಡಿಕೊಂಡಿದ್ದಾರೆ. ಸಿಎಂ ಕುಟುಂಬ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ, ಸಿಎಂ ರಾಜೀನಾಮೆ ಕೊಟ್ಟೇ ಕೊಡ್ತಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ರೆಡ್​ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ, ರಾಜೀನಾಮೆ ಕೊಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ

ಒಟ್ಟಾರೆಯಾಗಿ ಸೈಟ್​ ವಾಪಸ್​ ಪಡೆದ ಮುಡಾ ಪ್ರಾಧಿಕಾರದ ನಡೆಯನ್ನೇ ವಿಪಕ್ಷ ನಾಯಕರ ಅನುಮಾನಿಸಿದ್ದಾರೆ. ಯಾರು ಪ್ರಭಾವ ಬೀರಿದ್ದಾರೆ ಅನ್ನೋದು ತನಿಖೆ ಆಗ್ಬೇಕು ಅಂತಾ ಆಗ್ರಹಿಸಿದ್ದಾರೆ. ಇತ್ತಾ ಮುಡಾದಲ್ಲಿ ಬಿಜೆಪಿಯವರು ಫಲಾನುಭವಿಗಳಾಗಿದ್ದಾರೆ, ತನಿಖೆಯಿಂದ ಮುಂದೆ ಗೊತ್ತಾಗುತ್ತೆ ಅಂತಾ ಕಾಂಗ್ರೆಸ್​ ತಿರುಗೇಟು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?