ಬೆಂಗಳೂರು, ಫೆ.10: ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮೇಕೆದಾಟು ಪಾದಯಾತ್ರೆ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಪೊಲೀಸರು ರಾಮಲಿಂಗಾರೆಡ್ಡಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿತಯಾಗಿದ್ದರೂ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಗೈರಾಗಿದ್ದರು. ಹೀಗಾಗಿ ಜಾಮೀನು ರಹಿತ ವಾರೆಂಟ್ ಜಾರಿಗೆ 42ನೇ ಎಸಿಎಂಎಂ ನ್ಯಾಯಾಧೀಶ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣ ಆ ದೇಗುಲಕ್ಕೇ ಬಳಕೆಯಾಗಬೇಕು: ರಾಮಲಿಂಗಾ ರೆಡ್ಡಿ ಮಹತ್ವದ ಘೋಷಣೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:10 pm, Sat, 10 February 24