ನಿಯಮ ಉಲ್ಲಂಘನೆ: ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಜಾರಿ ನಿರ್ದೇಶನಾಲಯದ ವಿರುದ್ಧ 2022 ರಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೋರ್ಟ್​ನಲ್ಲಿ ವಿಚಾರಣೆ ವೇಳೆ ಆಗಮಿಸದ ಹಿನ್ನೆಲೆ ಮೊಯ್ಲಿ ಹಾಗೂ ನಲಪಾಡ್​ ಅವರಿಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ನಿಯಮ ಉಲ್ಲಂಘನೆ: ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ಇಡಿ ವಿರುದ್ಧ ನಿಯಮ ಉಲ್ಲಂಘಿಸಿ ಪ್ರತಿಭಟನೆ: ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
Follow us
Ramesha M
| Updated By: Rakesh Nayak Manchi

Updated on:Feb 20, 2024 | 8:13 PM

ಬೆಂಗಳೂರು, ಫೆ.20: ಜಾರಿ ನಿರ್ದೇಶನಾಲಯದ ವಿರುದ್ಧ 2022 ರಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ (Veerappa Moily) ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ (Mohammed Nalapad) ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಜಾರಿ ನಿರ್ದೇಶನಾಲಯದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ವೀರಪ್ಪ ಮೊಯ್ಲಿ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್​​ನಲ್ಲಿ ತಾತ್ಕಾಲಿಕ ರಿಲೀಫ್​​ ಸಿಕ್ಕಿತ್ತು. ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: 2,800 ಕೋಟಿ ರೂ. ಲಾಟರಿ ಹಣ ಗೆದ್ದರು, ಈ ವ್ಯಕ್ತಿ ಕಂಪೆನಿಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದೇಕೆ? ಅಸಲಿ ವಿಚಾರ ಇಲ್ಲಿದೆ

ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರೊಂದಿಗೆ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ತುಸು ನಿರಾಳರಾಗುವಂತಾಗಿದೆ. ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿತ್ತು.

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್​ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್​​ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 pm, Tue, 20 February 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ