ಬೆಂಗಳೂರು: ನೆರೆಯ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ಬೆಳಗಿನ ಜಾವ ಘೋರ ಅನಿಲ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ಕೈಗಾರಿಕೋದ್ಯಮಿಗಳಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಲಾಕ್‌ಡೌನ್ ಬಳಿಕ ಏಕಾಏಕಿ ಕೈಗಾರಿಕೆಗಳನ್ನ ಆರಂಭಿಸುವ ಮುನ್ನ ಎಚ್ಚರವಹಿಸಿ:
ಕೊರೊನಾದಿಂದಾಗಿ ಲಾಕ್‌ಡೌನ್ ಹಿನ್ನೆಲೆ ರಾಜ್ಯದಲ್ಲಿ ಕೈಗಾರಿಕೆಗಳು ಬಂದ್ ಆಗಿವೆ. ಮುಂದೆ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಏಕಾಏಕಿ ಕೈಗಾರಿಕೆಗಳನ್ನು ಆರಂಭಿಸುವ ಮುನ್ನ ಎಚ್ಚರವಹಿಸಿ. ವಿಶಾಖಪಟ್ಟಣಂ ಅನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಎಲ್ಲಾ ಸುರಕ್ಷಿತ ಮುಂಜಾಗ್ರತಾ ಕ್ರಮ ಕೈಗೊಂಡು, ಖಾತರಿ ಪಡಿಸಿಕೊಂಡ ನಂತರವೇ ಉತ್ಪಾದನೆ ಆರಂಭಿಸಿ ಎಂದು ಕೈಗಾರಿಕೋದ್ಯಮಿಗಳಿಗೆ ಸಿಎಂ ಯಡಿಯೂರಪ್ಪ ಸಕಾಲದಲ್ಲಿ ಕಿವಿಮಾತು ಹೇಳಿದ್ದಾರೆ.