Sign In

By signing in or creating an account, you agree with Associated Broadcasting Company's Terms & Conditions and Privacy Policy.

Yatnal Expelled: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಯತ್ನಾಳ್​​ಗೆ ಹೈಕಮಾಂಡ್​ ಶಾಕ್ ಕೊಟ್ಟಿದೆ. ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.

Yatnal Expelled: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ
ಬಸನಗೌಡ ಪಾಟೀಲ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 26, 2025 | 5:55 PM

ನವದೆಹಲಿ, (ಮಾರ್ಚ್​ 26): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ (Basangowda Patil Yatnal)​ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್​ ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು(ಮಾರ್ಚ್ 26)  ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಅಲ್ಲದೇ ಇತರೆ ರೆಬೆಲ್​ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್​ ಸೈಲೆಂಟ್​ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಇದನ್ನೂ ಓದಿ: ದಿಲ್ಲಿಯಲ್ಲಿ ರಾಜಕೀಯ ಆಟವಾಡುತ್ತಿರುವ ಯತ್ನಾಳ್​ಗೆ ಮತ್ತೊಮ್ಮೆ ಬಿಗ್ ಶಾಕ್ ಕೊಟ್ಟ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ

ಉಚ್ಛಾಟನೆ ಆದೇಶದಲ್ಲೇನಿದೆ?

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ
Image
ಬಿಜೆಪಿಯ ಮೂವರು ಶಾಸಕರು, ಇಬ್ಬರು ಮಾಜಿ ಸಚಿವರಿಗೆ ಶೋಕಾಸ್ ನೋಟಿಸ್‌..!
Image
ಕರ್ನಾಟಕ ಬಿಜೆಪಿ ಗೊಂದಲಕ್ಕೆ ಬ್ರೇಕ್ ಹಾಕಲು ಕೂಡಿಬಂತು ಕಾಲ
Image
ನೋಟಿಸ್​​ಗೆ ಕೆರಳಿದ ಯತ್ನಾಳ್ ಬಣ: ಮೊದಲ ಪ್ರತಿಕ್ರಿಯೆಯಲ್ಲೇ ಖಡಕ್ ಉತ್ತರ
Image
ಯತ್ನಾಳ್​ಗೆ ಮತ್ತೊಮ್ಮೆ ಶಾಕ್ ಕೊಟ್ಟ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ!

ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಅವರು​ ದೆಹಲಿಯಲ್ಲಿ ಇರುವಾಗಲೇ ಉಚ್ಛಾಟನೆ ಆದೇಶ ಹೊರಬಿದ್ದಿದ್ದು ಅಚ್ಚರಿಗೆ ಕಾರಣವಾಗಿದೆ. ಇದರೊಂದಿಗೆ ಕೊನೆಗೂ  ವಿಜಯೇಂದ್ರ ಬಣ ಮೇಲುಗೈ ಸಾಧಿಸಿದಂತಾಗಿದೆ.

ಇನ್ನು ಇದೀಗ ವಿಜಯೇಂದ್ರ  ವಿರೋಧಿ ಬಣದ ನಾಯಕನನ್ನೇ ಹೈಕಮಾಂಡ್​ ಉಚ್ಛಾಟಿಸಿದ್ದು, ಇನ್ನುಳಿದ ನಾಯಕರು ಮುಂದೆ ಯಾವ ನಡೆ ಇಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:29 pm, Wed, 26 March 25

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ