AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ. ಕನಕಪುರದಲ್ಲಿ ಮಾತನಾಡಿರುವ ಅವರು ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎನ್ನುವ ತಮ್ಮದೇ ದಾಟಿಯಲ್ಲಿ ಟಾಂಗ್ ಕೊಟ್ಟಿದ್ದಾರೆ.

ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್
Dk Shivakumar
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jul 06, 2025 | 4:53 PM

Share

ಕನಕಪುರ, (ಜುಲೈ 06): “ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು (Vokkaliga) ಹಾಗೂ ಲಿಂಗಾಯತರು (Lingayat) ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದು ಓಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  (DK Shivakumar) ಅವರು ಹೇಳಿದರು.

ಕನಕಪುರದ ಬಿಜ್ಜಹಳ್ಳಿಯಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದ ಅವರು, ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ” ಎಂದರು.

ಇದನ್ನೂ ಓದಿ: ಒಬಿಸಿ ಸಮಿತಿಗೆ ನೇಮಕ: ಸಿದ್ದರಾಮಯ್ಯ ಬಗ್ಗೆ ಭವಿಷ್ಯ ನುಡಿದ ವಿಪಕ್ಷ ನಾಯಕರು

“ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ. ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ‌ ಸುಮಾರು 40 ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಶ್ರೀಮದ್ರಂಭಾಪುರಿ ವೀರಗಂಗಾಧರಜ್ಜಯ್ಯನವರು ‘ಧರ್ಮದಿಂದಲೇ ಶಾಂತಿ ವಿಶ್ವಕ್ಕೆ ಧರ್ಮಕ್ಕೆ ಜಯವಾಗಲಿ. ನಾಡು ಧರ್ಮ ಸಾಮ್ರಾಜ್ಯವಾಗಲಿ. ಭಕ್ತಿಯುತ ಬೀಡಾಗಲಿ. ಧರ್ಮಕ್ಕಾಗಿ ಏಳಿರಿ, ಧರ್ಮಕ್ಕಾಗಿ ಬಾಳಿರಿ, ಧರ್ಮಕ್ಕಾಗಿ ತಾಳಿರಿ’ ಎಂಬ ಅದ್ಭುತ ಸಂದೇಶ ಸಾರಿದ್ದಾರೆ ಎಂದರು.

ಧರ್ಮ- ದೇವರನ್ನು ನಾವು ಎಂದಿಗೂ ಮರೆಯಬಾರದು. ಹಿರಿಯರು ‘ಮನೆ ಹುಷಾರು, ಮಠ ಹುಷಾರು’ ಎಂದಿದ್ದಾರೆ. ತಾಯಿ- ತಂದೆ- ಗುರು ಸಮಾಜದ ಮೂರು ಕಣ್ಣುಗಳು. ಹುಟ್ಟುವಾಗ ಯಾರೂ ಇದೇ ಧರ್ಮದಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ‘ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು’. ಹೀಗಾಗಿ ಗುರುಗಳು ಹಾಕಿಕೊಟ್ಟ ಧರ್ಮದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದು ಹೇಳಿದರು.

ರಂಭಾಪುರಿ ಮಠಕ್ಕೆ ದೊಡ್ಡ ಇತಿಹಾಸವಿದೆ, ಪರಂಪರೆ ಇದೆ. ಈ ಮಠದೊಂದಿಗೆ ನನಗೆ ಭಕ್ತನಿಗೂ- ಭಗವಂತನಿಗೂ ಇರುವ ಸಂಬಂಧವಿದೆ. ರಂಭಾಪುರಿ ಶ್ರೀಗಳು ನಮ್ಮೂರಿಗೆ ಬರುತ್ತಾರೆನ್ನುವುದೇ ನಮ್ಮ ಭಾಗ್ಯ. ನಿಮ್ಮೆಲ್ಲರ ಸೇವಕನಾಗಿ ಈ ಬೆಟ್ಟದ ಅಭಿವೃದ್ಧಿಗೆ ನಿಮ್ಮೆಲ್ಲರ ಜೊತೆ ನಾನೂ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ