ಕೆಂಪೇಗೌಡರ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ, ಎಚ್​ಡಿಕೆಗೆ ಕೋಕ್: ಸರ್ಕಾರದ ವಿರುದ್ಧಒಕ್ಕಲಿಗರ ಸಂಘ ಕಿಡಿ

ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಸಿದ್ಧಪಡಿಸಲಾದ ಆಹ್ವಾನ ಪತ್ರಿಕೆಯಲ್ಲಿ ಒಕ್ಕಲಿಗ ನಾಯಕರಾದ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘವೇ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದೆ. ಈ ಬಗ್ಗೆ ರಾಜ್ಯ ಒಕ್ಕಲಿಗರ ಸಂಘ, ಸರ್ಕಾರದ ವಿರುದ್ಧ ಪತ್ರಿಕಾ ಪ್ರಕಟಣೆ ಹೊರಡಿಸಿ ಆಕ್ರೋಶ ಹೊರಹಾಕಿದೆ. ಅಲ್ಲದೇ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದೆ.

ಕೆಂಪೇಗೌಡರ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ, ಎಚ್​ಡಿಕೆಗೆ ಕೋಕ್: ಸರ್ಕಾರದ ವಿರುದ್ಧಒಕ್ಕಲಿಗರ ಸಂಘ ಕಿಡಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jun 26, 2024 | 10:40 PM

ಬೆಂಗಳೂರು (ಜೂ.26):  ಈ ಬಾರಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ದರಾಮಯ್ಯ ಸರ್ಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಸಾಧನೆಯನ್ನು ಕರ್ನಾಟಕದ ಎಲ್ಲ ಮಕ್ಕಳಿಗೂ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಚರ್ಚಾ ಸ್ಪರ್ಧೆ ಏರ್ಪಡಿಸಲು ಬಿಬಿಎಂಪಿ ವತಿಯಿಂದ 2.40 ಕೋಟಿ ರೂ. ಖರ್ಚು ಮಾಡಿಸಲಾಗುತ್ತಿದೆ. ಜೊತೆಗೆ, ರಾಜ್ಯ ಸರ್ಕಾರದಿಂದ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿರುವ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಒಕ್ಕಲಿಗ ನಾಯಕರಾದ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿಲ್ಲ ಎಂಬ ದೂರು ಕೇಳಿಬಂದಿದೆ. ಇದರಿಂದ ಒಕ್ಕಲಿಗರ ಸಂಘ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಡಿಸಿದೆ. ಅಲ್ಲದೇ ಸರ್ಕಾರದ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿ ರಾಜ್ಯ ಒಕ್ಕಲಿಗರ ಸಂಘ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ವತಿಯಿಂದ ಜೂನ್‌ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಆಚರಿಸುತ್ತಿರುವುದು ಸಂತೋಷದ ವಿಚಾರ. ಆದರೆ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘವು ತೀವ್ರ ಖಂಡಿಸುತ್ತದೆ ಎಂದು ಸಂಘ ತಿಳಿಸಿದೆ.

ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಕೈಬಿಟ್ಟಿದ್ದಕ್ಕೆ ಕುಮಾರಸ್ವಾಮಿ ಖಡಕ್ ಮಾತು

ಇನ್ನು ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಹಾಕದಿರುವುದರ ಹಿಂದೆ ಸೇಡಿನ ರಾಜಕೀಯವಿದೆ. ಸಿದ್ದರಾಮಯ್ಯ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

ಈ ಬಗ್ಗೆ ಸ್ವತಃ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ. ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ. ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ