AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ಮುಂದೂಡಲು ಸಲಹೆ ನೀಡಿ: ಒಕ್ಕಲಿಗರ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಒಕ್ಕಲಿಗ ಮುಖಂಡರು ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮುಂದೂಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ. ಸಮೀಕ್ಷೆಯಲ್ಲಿನ ದೋಷಗಳು ಮತ್ತು ಸಮಯಾವಕಾಶದ ಕೊರತೆಯನ್ನು ಆಧರಿಸಿ ಈ ಮನವಿ ಸಲ್ಲಿಸಲಾಗಿದೆ. ಖರ್ಗೆ ಅವರು ಈ ಮನವಿಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಈಗಾಗಲೇ ಗಣತಿ ಶುರುವಾಗಿದೆ ಎಂಬುದು ಗಮನಾರ್ಹ.

ಜಾತಿ ಗಣತಿ ಮುಂದೂಡಲು ಸಲಹೆ ನೀಡಿ: ಒಕ್ಕಲಿಗರ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ
ಜಾತಿ ಗಣತಿ ಮುಂದೂಡಲು ಸಲಹೆ ನೀಡಿ: ಒಕ್ಕಲಿಗರ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ
Ganapathi Sharma
|

Updated on: Sep 23, 2025 | 10:18 AM

Share

ಬೆಂಗಳೂರು, ಸೆಪ್ಟೆಂಬರ್ 23: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Karnataka Caste Census) ಮುಂದೂಡುವಂತೆ ಒಕ್ಕಲಿಗ ಮುಖಂಡರ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಮನವಿ ಮಾಡಿದೆ. ರಾಜ್ಯ ಒಕ್ಕಲಿಗ (Vokkaliga) ಮೀಸಲಾತಿ ಸಮಿತಿಯ ಮುಖ್ಯ ಸಂಚಾಲಕ ನಾಗರಾಜ್ ಯಲಚವಾಡಿ ನೇತೃತ್ವದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಕೆ ಮಾಡಿದೆ. ಈ ವಿಚಾರವಾಗಿ ನಂತರ ಪ್ರತಿಕ್ರಿಯೆ ನೀಡಿದ ನಿಯೋಗ, ‘ಸುಮಾರು 800 ಜಾತಿಗಳಿದ್ದವು. ಈಗ, ಹಿಂದುಳಿದ ವರ್ಗಗಳ ಆಯೋಗವು 1,561 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಯಾವುದೇ ವಿಚಾರಣೆ ಅಥವಾ ಮಾನವಶಾಸ್ತ್ರೀಯ ಅಧ್ಯಯನಗಳಿಲ್ಲದೆ ಜಾತಿಗಳನ್ನು ಸೇರಿಸಲಾಗಿದೆ. ಇದಲ್ಲದೆ, ಸರ್ಕಾರವು ಸಮೀಕ್ಷಾ ಅಪ್ಲಿಕೇಶನ್‌ನಲ್ಲಿ ಸರಿಯಾದ ತರಬೇತಿಯನ್ನು ನೀಡಿಲ್ಲ’ ಎಂದು ತಿಳಿಸಿದೆ.

ಈ ಎಲ್ಲ ಕಾರಣಗಳಿಂದಾಗಿ ನಾವು ಸಮೀಕ್ಷೆಯನ್ನು ಮುಂದೂಡಲು ಕೇಳಿದ್ದೇವೆ ಎಂದು ನಾಗರಾಜ್ ಯಲಚವಾಡಿ ಹೇಳಿದ್ದಾರೆ. ಈಗಾಗಲೇ ಸರ್ಕಾರ ಹೇಳಿರುವಂತೆ ಸಮೀಕ್ಷೆಯನ್ನು ಕೇವಲ 15 ದಿನಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮ ಅರ್ಜಿಯನ್ನು ಪರಿಶೀಲಿಸುವುದಾಗಿ ಖರ್ಗೆ ಭರವಸೆ ನೀಡಿದ್ದಾರೆ ಎಂದು ಯಲಚವಾಡಿ ಹೇಳಿದ್ದಾರೆ.

ನವರಾತ್ರಿ ಪ್ರಾರಂಭವಾಗುತ್ತಿರುವ ಈ ಸಮಯದಲ್ಲಿ ಸಮೀಕ್ಷೆ ನಡೆಸಿದರೆ ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗದು. ಆದ್ದರಿಂದ 45 ದಿನಗಳ ನಂತರ, 60 ದಿನಗಳ ಕಾಲ ಸಮೀಕ್ಷೆ ನಡೆಸಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀ ಶನಿವಾರ ಆಗ್ರಹಿಸಿದ್ದರು. ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ಒಕ್ಕಲಿಗ ಸಮುದಾಯದ ಬೃಹತ್ ಸಭೆ ನಡೆಸಲಾಗಿತ್ತು. ಅದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸೇರಿ ಸಮುದಾಯದ ಅನೇಕ ಗಣ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಕ್ರಿಶ್ಚಿಯನ್ ಜೊತೆ ಒಕ್ಕಲಿಗ ಕಾಲಂ ತೆಗೆಯದಿದ್ರೆ ಬೃಹತ್ ಹೋರಾಟ: ಒಕ್ಕಲಿಗರ ಒಕ್ಕೊರಲ ನಿರ್ಧಾರ

ಸಮೀಕ್ಷೆಯನ್ನು 45 ದಿನಗಳ ಕಾಲ ಮುಂದೂಡಿಕೆ ಮಾಡಬೇಕು ಎಂಬ ಒತ್ತಾಯ ಕೂಡ ಸಭೆಯಲ್ಲಿ ಒಕ್ಕೊರಲಿನಿಂದ ಮೂಡಿಬಂದಿತ್ತು. ಸಭೆಯ ಬಳಿಕ ಮಾತನಾಡಿದ್ದ ವಿಪಕ್ಷ ನಾಯಕ ಆರ್​.ಅಶೋಕ್, ಎಂಎಲ್​​ಸಿ ಸಿ.ಟಿ.ರವಿ, ಒಂದು ವೇಳೆ ಕ್ರಿಶ್ಚಿಯನ್ ಒಕ್ಕಲಿಗ ಎಂದು ಉಲ್ಲೇಖ ಮಾಡಿದರೆ, ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಇದೀಗ ಒಕ್ಕಲಿಗರ ನಿಯೋಗ ಎಐಸಿಸಿ ಅಧ್ಯಕ್ಷರಿಗೆ ಮನವಿ ಸಲ್ಲಿಕೆ ಮಾಡಿದೆ. ಮತ್ತೊಂದೆಡೆ, ಜಾತಿ ಗಣತಿ ಸೋಮವಾರದಿಂದ ಆರಂಭವಾಗಿದೆ. ಹಿಗಾಗಿ ಒಕ್ಕಲಿಗ ನಾಯಕರ ಮನವಿಗೆ ಖರ್ಗೆ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ