ಒಕ್ಕಲಿಕ ಅಭಿವೃದ್ಧಿ ನಿಗಮದ ಪದಾಧಿಕಾರಿಗಳ ನೇಮಕ; ಶಾಸಕ ಎಂ ಎಂ.ಕೃಷ್ಣಪ್ಪಗೆ ಒಲಿದ ಅಧ್ಯಕ್ಷ ಸ್ಥಾನ

Vokkaliga Development Corporation: ಒಟ್ಟು 500 ಕೋಟಿ ರೂಪಾಯಿಗಳನ್ನು ನಿಗಮದ ಚಟುವಟಿಕೆಗಳಿಗಾಗಿ ಮೀಸಲಿಡುವುದಾಗಿ ತಿಳಿಸಲಾಗಿದೆ. ಕಳೆದ ಬಜೆಟ್​ನಲ್ಲಿಯೇ ಒಕ್ಕಲಿಗ ಅಭಿವೃದ್ಧಿ ನಿಗಮದ ಸ್ಥಾಪನೆ ಕುರಿತು ಪ್ರಸ್ತಾವನೆ ಮಾಡಲಾಗಿತ್ತು. ಆ ಪ್ರಸ್ತಾವನೆಯಂತೆಯೇ ರಾಜ್ಯ ಸರ್ಕಾರ ಇದೀಗ ಅಧಿಕೃತ ಆದೇಶ ಪ್ರಕಟಿಸಿದೆ.

ಒಕ್ಕಲಿಕ ಅಭಿವೃದ್ಧಿ ನಿಗಮದ ಪದಾಧಿಕಾರಿಗಳ ನೇಮಕ; ಶಾಸಕ ಎಂ ಎಂ.ಕೃಷ್ಣಪ್ಪಗೆ ಒಲಿದ ಅಧ್ಯಕ್ಷ ಸ್ಥಾನ
ಬೆಂಗಳೂರು ದಕ್ಷಿಣ ಶಾಸಕ ಎಂ.ಕೃಷ್ಣಪ್ಪ
TV9kannada Web Team

| Edited By: guruganesh bhat

Jul 19, 2021 | 4:51 PM

ಬೆಂಗಳೂರು: ಇತ್ತೀಚಿಗಷ್ಟೇ ಘೋಷಣೆಯಾಗಿರುವ ಒಕ್ಕಲಿಗ ಅಭಿವೃದ್ಧಿ ನಿಗಮದ (Vokkaliga Development Corporation) ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರನ್ನು ನೇಮಿಸಲಾಗಿದೆ. ಅಭಿವೃದ್ಧಿ ನಿಗಮದ ಸದಸ್ಯರನ್ನಾಗಿ ಮಾಜಿ ಶಾಸಕ ಸುರೇಶ್​ಗೌಡ, ಸುರಭಿ ರಘು ನೇಮಕ ಅವರನ್ನು ನೇಮಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.

ಒಕ್ಕಲಿಗ ಅಭಿವೃದ್ಧಿ ನಿಗಮ (Vokkaliga Development Corporation) ಸ್ಥಾಪಿಸಿ ರಾಜ್ಯ ಸರ್ಕಾರ ಇತ್ತೀಚಿಗಷ್ಟೇ ಅಧಿಕೃತ ಆದೇಶ ಪ್ರಕಟಿಸಿತ್ತು. ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ  ಅಬಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದು ಸರ್ಕಾರದ ಅಧಿಕೃತ ಪ್ರಕಟನೆ  ತಿಳಿಸಿದ್ದು ಒಟ್ಟು 500 ಕೋಟಿ ರೂಪಾಯಿಗಳನ್ನು ನಿಗಮದ ಚಟುವಟಿಕೆಗಳಿಗಾಗಿ ಮೀಸಲಿಡುವುದಾಗಿ ತಿಳಿಸಲಾಗಿದೆ. ಕಳೆದ ಬಜೆಟ್​ನಲ್ಲಿಯೇ ಒಕ್ಕಲಿಗ ಅಭಿವೃದ್ಧಿ ನಿಗಮದ ಸ್ಥಾಪನೆ ಕುರಿತು ಪ್ರಸ್ತಾವನೆ ಮಾಡಲಾಗಿತ್ತು. ಆ ಪ್ರಸ್ತಾವನೆಯಂತೆಯೇ ರಾಜ್ಯ ಸರ್ಕಾರ ಇದೀಗ ಅಧಿಕೃತ ಆದೇಶ ಪ್ರಕಟಿಸಿದೆ.

ಒಕ್ಕಲಿಗ ಸಮುದಾಯದ ಹಿಂದುಳಿದ ವರ್ಗಗಳ ಮಿಸಲಾತಿ ಪಟ್ಟಿಯ ಪ್ರವರ್ಗ 3ಎನಲ್ಲಿಯ ಕ್ರಮ ಸಂಖ್ಯೆ 1ರ  ಎಯಿಂದ ಟಿ ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ನಾಮಧಾರ್ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ಸರ್ಪ ಒಕ್ಕಲಿಗ,  ಹಳ್ಳಿಕಾರ್ ಒಕ್ಕಲಿಗ, ಗಂಗಡ್​ಕಾರ್ ಒಕ್ಕಲಿಗ  ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ,  ಮರಸು ಒಕ್ಕಲಿಗ ಗೌಡ, (GOUDA) / ( GOWDA), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ರಡ್ಡಿ, ಗೌಂಡರ್, ನಾಮಧಾರಿ ಗೌಡ,  ಉಪ್ಪಿನ ಕೊಳಗ/ ಉತ್ತಮ ಕೊಳಗ ಜಾತಿಗಳಿಗೆ ಒಕ್ಕಲಿಗ ಅಭಿವೃದ್ಧಿ ನಿಗಮ ಶ್ರಮಿಸಲಿದೆ.

ಅನ್ನದಾತರೆನಿಸಿರುವ ಒಕ್ಕಲಿಗ ಸಮುದಾಯ ರಾಜ್ಯದ ಜನಸಂಖ್ಯೆಯಲ್ಲಿ ಶೇ. 17ರಷ್ಟಿದ್ದು ರಾಜ್ಯದ ಬೊಕ್ಕಸಕ್ಕೆ ಶೇ. 65ರಷ್ಟು ಆದಾಯವನ್ನು ಸಲ್ಲಿಸುವ ಮೂಲಕ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ತ್ವರಿತವಾಗಿ ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಮಾಡಬೇಕು ಎಂದು ಸಮುದಾಯ ಮತ್ತು ಸಮುದಾಯದ ಹಲವು ಸಂಘ ಸಂಸ್ಥೆಗಳ ಪರವಾಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

ಇದನ್ನೂ ಓದಿ: 

ಸಿಎಂ ನಾಯಕತ್ವ ಬದಲಾವಣೆ ಫೈಟ್ ಬಳಿಕ‌ ಬಿಜೆಪಿಯಲ್ಲಿ ಒಕ್ಕಲಿಗ ನಾಯಕತ್ವದ ಫೈಟ್?

ಜಮೀರ್ ಅಹ್ಮದ್ ಪರವಾಗಿ ಒಕ್ಕಲಿಗರು ಮತ್ತು ಎಚ್ ಡಿ ಕುಮಾರಸ್ವಾಮಿಯ ಕ್ಷಮೆ ಕೇಳಿದ ಸಿ ಎಂ ಇಬ್ರಾಹಿಂ

( Vokkaliga Development Corporation Bengaluru South MLA Krishnappa appointed as President)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada