ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ನೀಡಿರುವ ವಿಚಾರದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿಬಂದಿದೆ ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ವಿಧಾನಸೌಧದಲ್ಲಿ ಹೇಳಿದ್ದಾರೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರಕ್ಕೆ ಸ್ವಾಗತವಿದೆ. ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರು ಇಲ್ಲ. ಆದರೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಆಗ್ರಹಿಸಿದರು.
ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿಗಳನ್ನ ಒಕ್ಕಲಿಗ ಸಮುದಾಯದ ನಾಯಕರು ಭೇಟಿ ಮಾಡಿ ಒತ್ತಾಯ ಮಾಡ್ತೇವೆ. ವೀರಶೈವ ಲಿಂಗಾಯತ ಸಮುದಾಯ ದೊಡ್ಡದು, ಅದೇ ರೀತಿ ಒಕ್ಕಲಿಗ ಸಮುದಾಯವೂ ದೊಡ್ಡದು. ಅಲ್ಲದೆ ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಹಾಗಾಗಿ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೆ ನಾವೂ ಒತ್ತಾಯ ಹಾಕ್ತೀವಿ ಎಂದು ಎಸ್ ಆರ್ ವಿಶ್ವನಾಥ್ ಹೇಳಿದರು.