ಸಿಎಂ ನಾಯಕತ್ವ ಬದಲಾವಣೆ ಫೈಟ್ ಬಳಿಕ‌ ಬಿಜೆಪಿಯಲ್ಲಿ ಒಕ್ಕಲಿಗ ನಾಯಕತ್ವದ ಫೈಟ್?

ಭಾನುವಾರ ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ನಡೆಯಿತು. ಈ ವೇಳೆ ಕಾರ್ಯಕ್ರಮಕ್ಕೆ ನಾಲ್ವರು ಒಕ್ಕಲಿಗ ಸಚಿವರು ಗೈರಾಗಿದ್ದರು. ಸಿಎಂ ಯಡಿಯೂರಪ್ಪ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಪಾಲ್ಗೊಂಡಿದ್ದ ಅಧಿಕೃತ ಸರ್ಕಾರಿ ಕಾರ್ಯಕ್ರಮದಿಂದ ಬಿಜೆಪಿ ಒಕ್ಕಲಿಗ ಶಾಸಕರು, ಸಚಿವರು ಅಂತರ ಕಾಯ್ದುಕೊಂಡಿದ್ದಾರೆ.

ಸಿಎಂ ನಾಯಕತ್ವ ಬದಲಾವಣೆ ಫೈಟ್ ಬಳಿಕ‌ ಬಿಜೆಪಿಯಲ್ಲಿ ಒಕ್ಕಲಿಗ ನಾಯಕತ್ವದ ಫೈಟ್?
ಸಂಗ್ರಹ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 29, 2021 | 8:34 AM

ಬೆಂಗಳೂರು: ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾವಣೆ ಫೈಟ್ ಬಳಿಕ‌ ಈಗ ಒಕ್ಕಲಿಗ ನಾಯಕತ್ವದ ಫೈಟ್ ಶುರುವಾಗಿದೆ. ಕೆಂಪೇಗೌಡ ಜಯಂತಿ ಕಮಲ ಪಕ್ಷದಲ್ಲಿನ ಒಕ್ಕಲಿಗ ಫೈಟ್ ಬಿಚ್ಚಿಟ್ಟಿದೆ.

ಭಾನುವಾರ ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ನಡೆಯಿತು. ಈ ವೇಳೆ ಕಾರ್ಯಕ್ರಮಕ್ಕೆ ನಾಲ್ವರು ಒಕ್ಕಲಿಗ ಸಚಿವರು ಗೈರಾಗಿದ್ದರು. ಸಿಎಂ ಯಡಿಯೂರಪ್ಪ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಪಾಲ್ಗೊಂಡಿದ್ದ ಅಧಿಕೃತ ಸರ್ಕಾರಿ ಕಾರ್ಯಕ್ರಮದಿಂದ ಬಿಜೆಪಿ ಒಕ್ಕಲಿಗ ಶಾಸಕರು, ಸಚಿವರು ಅಂತರ ಕಾಯ್ದುಕೊಂಡಿದ್ದಾರೆ. ಈ ಒಕ್ಕಲಿಗ ಸಚಿವರ ಅನುಪಸ್ಥಿತಿ ಆಡಳಿತ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಚಿವರಾದ ಆರ್. ಅಶೋಕ್, ಸಿ.ಪಿ. ಯೋಗೇಶ್ವರ್, ಎಸ್.ಟಿ. ಸೋಮಶೇಖರ್ ಮತ್ತು‌ ಡಾ. ಸುಧಾಕರ್ ಕೆಂಪೇಗೌಡ ಜಯಂತಿ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಬೆಂಗಳೂರಿನಲ್ಲೇ ಇದ್ದರೂ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಿಂದ ದೂರ ಇದ್ದದ್ದು ಚರ್ಚೆಗೆ ಕಾರಣವಾಗಿದೆ. ಕೆ.ಆರ್. ಪುರಂನಲ್ಲಿ ನಡೆದ ಪ್ರತ್ಯೇಕ ಕೆಂಪೇಗೌಡ ಜಯಂತಿಯಲ್ಲಿ ಸಚಿವರಾದ ಅಶೋಕ್ ಮತ್ತು ಎಸ್.ಟಿ. ಸೋಮಶೇಖರ್ ಪಾಲ್ಗೊಂಡಿದ್ದರು. ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕೂಡಾ ಕೆ.ಆರ್. ಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ವಿಧಾನಸೌಧದಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಭಾಗಿಯಾಗಿಲ್ಲ.

ಇನ್ನು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಡಿಸಿಎಂ ಡಾ. ಅಶ್ವಥ್ ನಾರಾಯಣ ವಿಧಾನಸೌಧದಲ್ಲಿ ನಡೆದ ಕೆಂಪೇಗೌಡ ಜಯಂತಿ ನೇತೃತ್ವ ವಹಿಸಿಕೊಂಡಿದ್ದರು. ಒಕ್ಕಲಿಗ ನಾಯಕತ್ವದ ಮುಸುಕಿನ ಗುದ್ದಾಟದಿಂದಾಗಿ ಒಕ್ಕಲಿಗ ಸಚಿವರು ಗೈರು ಎಂದು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಡಿಸಿಎಂ ಅಶ್ವಥ್ ನಾರಾಯಣ ಮತ್ತು ಸಚಿವ ಅಶೋಕ್ ನಡುವಿನ ಒಕ್ಕಲಿಗ ನಾಯಕತ್ವದ ಫೈಟ್ ಕೆಂಪೇಗೌಡ ಜಯಂತಿ ಮೂಲಕ ಬಹಿರಂಗವಾಗಿದೆ.

ಇದನ್ನೂ ಓದಿ: ಒಂದೂವರೆ ವರ್ಷದಲ್ಲಿ 150ಕ್ಕೂ ಹೆಚ್ಚು ಕೃಷಿ ಹೊಂಡಗಳ ನಿರ್ಮಾಣ; ಧಾರವಾಡ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ