AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಗಳ್ಳತನ ಆರೋಪ: ಚುನಾವಣೆ ಕಚೇರಿಗೆ ಬಿಗಿ ಭದ್ರತೆ, ದೂರು ಸಲ್ಲಿಸಲು 6 ಜನರಿಗೆ ಅವಕಾಶ

ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಕಳ್ಳತನವಾಗಿದೆ ಎಂದು ಗುರುವಾರ ದೆಹಲಿಯಲ್ಲಿ ದಾಖಲೆ ಬಿಡುಗಡೆ ಮಾಡಿರುವ ರಾಹುಲ್ ಗಾಂಧಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಲಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ಕಾಂಗ್ರೆಸ್​ನ 6 ನಾಯಕರಿಗಷ್ಟೇ ಅನುಮತಿ ನೀಡಿದ್ದಾರೆ. ​

ಮತಗಳ್ಳತನ ಆರೋಪ: ಚುನಾವಣೆ ಕಚೇರಿಗೆ ಬಿಗಿ ಭದ್ರತೆ, ದೂರು ಸಲ್ಲಿಸಲು 6 ಜನರಿಗೆ ಅವಕಾಶ
ರಾಜ್ಯ ಚುನಾವಣಾ ಆಯೋಗ
Kiran HV
| Edited By: |

Updated on: Aug 08, 2025 | 11:33 AM

Share

ಬೆಂಗಳೂರು, ಆಗಸ್ಟ್​ 08: ಮತಗಳ್ಳತನ ಆರೋಪ‌ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಕಾಂಗ್ರೆಸ್ (congress) ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಪೊಲೀಸ್ ಸರ್ಪಗಾವಲೇ ಏರ್ಪಟ್ಟಿದೆ. ಇತ್ತ ಚುನಾವಣೆ ಮುಖ್ಯ ಕಚೇರಿಗೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.  ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಲಿದ್ದು, 6 ನಾಯಕರಿಗಷ್ಟೇ ಅನುಮತಿ ನೀಡಲಾಗಿದೆ.

ರಾಜ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ನಾಯಕರಿಂದ ದೂರು ಹಿನ್ನೆಲೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ಗಷ್ಟೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ ದೂರು ಸಲ್ಲಿಸಲು ಅನುಮತಿ ನೀಡಿದ್ದಾರೆ.

ಕುತೂಹಲ ಕೆರಳಿಸಿದ ರಾಹುಲ್​ ಗಾಂಧಿ ಮುಂದಿನ ನಡೆ

ಇನ್ನು ದೂರು ಸಲ್ಲಿಕೆ ವೇಳೆ ರಾಹುಲ್​ ಗಾಂಧಿ ಡಿಕ್ಲರೇಶನ್ ಕಾಪಿಗೆ ಸಹಿ ಹಾಕುತ್ತಾರಾ ಅಥವಾ ಇಲ್ಲವಾ ಎಂಬ ಕುತೂಹಲ ಸೃಷ್ಟಿಯಾಗಿದೆ. ಏಕೆಂದರೆ ಡಿಕ್ಲರೇಶನ್​ಗೆ ಸಹಿ ಹಾಕುವಂತೆ ಚುನಾವಣಾ ಆಯೋಗ ತಾಕೀತು ಮಾಡಿತ್ತು. ಡಿಕ್ಲರೇಶನ್​​ ಮಾದರಿಯನ್ನು ಚುನಾವಣಾ ಆಯೋಗ ತಾವೇ ಸ್ವತಃ ರಾಹುಲ್ ಗಾಂಧಿಗೆ ರವಾನಿಸಿದ್ದು, ಕಾನೂನು ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಒಂದು ವೇಳೆ ರಾಹುಲ್​ ಗಾಂಧಿ ಡಿಕ್ಲರೇಶನ್​ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆಗಳು ಎದುರಿಸಬೇಕಾಗಬಹುದು.

ಇದನ್ನೂ ಓದಿ
Image
ರಾಹುಲ್ ಗಾಂಧಿ ಪ್ರತಿಭಟನೆಗೆ ಟ್ವೀಟ್​ ಮೂಲಕ ಹೆಚ್​ಡಿ ಕುಮಾರಸ್ವಾಮಿ ಕಿಡಿ
Image
ನಾಳೆ ಬೆಂಗಳೂರಿನಲ್ಲಿ ರಾಹುಲ್ ಪ್ರತಿಭಟನಾ ಸಮಾವೇಶ:ಇಲ್ಲಿದೆ ಸಂಪೂರ್ಣ ಮಾಹಿತಿ
Image
ಮತಗಳ್ಳತನ ಸಂಖ್ಯೆ ಬಿಡುಗಡೆ ಮಾಡಿದ ರಾಹುಲ್​ಗೆ ಚುನಾವಣಾ ಆಯೋಗ ತಿರುಗೇಟು!
Image
ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್ ಗೋಡೆ ನೆಲಸಮ:  ಬಿಜೆಪಿ ದೂರು

ಇದನ್ನೂ ಓದಿ: ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಹೆಚ್​ಡಿ ಕುಮಾರಸ್ವಾಮಿ

  • ಚುನಾವಣಾ ಪಟ್ಟಿ ತಿದ್ದುಪಡಿ, ಸಿದ್ದತೆ ಅಥವಾ ಶುದ್ಧೀಕರಣ ಸಂಬಂಧ ನೀಡುವ ತಪ್ಪು ಘೋಷಣೆಯು 1950 ರ ಪ್ರಜಾಪ್ರಭುತ್ವ ಪ್ರತಿನಿಧಿ ಕಾಯ್ದೆಯ ಕಲಂ 31 ರಂತೆ ಶಿಕ್ಷಾರ್ಹವಾಗಿದ್ದು, ಅದಕ್ಕೆ ಗರಿಷ್ಠವಾಗಿ ಒಂದು ವರ್ಷದವರೆಗೆ ಜೈಲುಶಿಕ್ಷೆ ಅಥವಾ ದಂಡ ಅಥವಾ ಎರಡೂ ವಿಧಿಸಲಾಗಬಹುದು ಎಂಬುದನ್ನು ನಾನು ಅರಿತಿದ್ದೇನೆ.
  • ನ್ಯಾಯಾಲಯ ಅಥವಾ ಅಧಿಕೃತ ದಾಖಲೆಗಳಲ್ಲಿ ಸುಳ್ಳು ಸಾಕ್ಷ್ಯ ಅಥವಾ ಪ್ರಮಾಣಪತ್ರ ನೀಡುವುದು 2023ರ ಭಾರತೀಯ ನ್ಯಾಯ ಸಂಹಿತೆಯ ಕಲಂ 227 ರಂತೆ ಶಿಕ್ಷಾರ್ಹವಾಗಿದೆ.
  • ಇದಕ್ಕೆ ಹೆಚ್ಚು ಕಠಿಣ ಶಿಕ್ಷೆಗಳು ವಿಧಿಸಲಾಗುತ್ತವೆ. ವಿಶೇಷವಾಗಿ ನ್ಯಾಯಾಂಗ ಅಥವಾ ಅಧಿಕೃತ ಪ್ರಕರಣಗಳಲ್ಲಿ ಸುಳ್ಳು ಹೇಳಿಕೆ ಅಥವಾ ವಂಚನೆ ಮಾಡಿದರೆ ಎಂಬ ಮಾಹಿತಿ ಕೂಡ ಇದೆ. ಹೀಗೆಂದು ಡಿಕ್ಲರೇಶನ್​ನಲ್ಲಿ ಸಹಿ ಮಾಡುವಂತೆ ಚುನಾವಣಾ ಆಯೋಗ ಸೂಚಿಸಿದೆ.
  • ಸಲ್ಲಿಕೆಯಾದ ದಾಖಲೆಗಳ ಪರಿಶೀಲನೆ ನಡೆಸುವುದಾಗಿ ಸ್ಪಷ್ಟ ಪಡಿಸಿರುವ ಚುನಾವಣಾ ಆಯೋಗ, ನಿನ್ನೆ ಬಹಿರಂಗ ಪಡಿಸಿದ ದಾಖಲೆಗಳು ಸುಳ್ಳು ಅಥವಾ ತಪ್ಪು ಎಂದಾದರೆ ಕಾನೂನಾತ್ಮಕ ಕಟ್ಟಳೆ ಎದುರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯ ನಡೆ ಮುಂದೇನು ಎಂಬ ಬಗ್ಗೆ ಭಾರೀ ಚರ್ಚೆ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್