
ಬೆಂಗಳೂರು, ಆಗಸ್ಟ್ 08: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಕಾಂಗ್ರೆಸ್ (congress) ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಪೊಲೀಸ್ ಸರ್ಪಗಾವಲೇ ಏರ್ಪಟ್ಟಿದೆ. ಇತ್ತ ಚುನಾವಣೆ ಮುಖ್ಯ ಕಚೇರಿಗೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಲಿದ್ದು, 6 ನಾಯಕರಿಗಷ್ಟೇ ಅನುಮತಿ ನೀಡಲಾಗಿದೆ.
ರಾಜ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ನಾಯಕರಿಂದ ದೂರು ಹಿನ್ನೆಲೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ಗಷ್ಟೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ದೂರು ಸಲ್ಲಿಸಲು ಅನುಮತಿ ನೀಡಿದ್ದಾರೆ.
ಇನ್ನು ದೂರು ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಡಿಕ್ಲರೇಶನ್ ಕಾಪಿಗೆ ಸಹಿ ಹಾಕುತ್ತಾರಾ ಅಥವಾ ಇಲ್ಲವಾ ಎಂಬ ಕುತೂಹಲ ಸೃಷ್ಟಿಯಾಗಿದೆ. ಏಕೆಂದರೆ ಡಿಕ್ಲರೇಶನ್ಗೆ ಸಹಿ ಹಾಕುವಂತೆ ಚುನಾವಣಾ ಆಯೋಗ ತಾಕೀತು ಮಾಡಿತ್ತು. ಡಿಕ್ಲರೇಶನ್ ಮಾದರಿಯನ್ನು ಚುನಾವಣಾ ಆಯೋಗ ತಾವೇ ಸ್ವತಃ ರಾಹುಲ್ ಗಾಂಧಿಗೆ ರವಾನಿಸಿದ್ದು, ಕಾನೂನು ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಒಂದು ವೇಳೆ ರಾಹುಲ್ ಗಾಂಧಿ ಡಿಕ್ಲರೇಶನ್ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆಗಳು ಎದುರಿಸಬೇಕಾಗಬಹುದು.
ಇದನ್ನೂ ಓದಿ: ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಹೆಚ್ಡಿ ಕುಮಾರಸ್ವಾಮಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.