ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ಅಕ್ರಮ ಮತದಾನವನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರ ಒತ್ತಾಯ
ಬೇರೆ ಕಡೆ ವಾಸಿಸುವವರು ಎರಡೆರಡು ಕಡೆ ಮತದಾರರ ಗುರುತಿನ ಚೀಟಿ ಹೊಂದಿರುವ ಜೊತೆಗೆ ಎರಡೂ ಕಡೆ ಮತದಾನ ಮಾಡುತ್ತಿದ್ದಾರೆ.
ರಾಯಚೂರು: ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ವಕ್ರಾಣಿ ಗ್ರಾಮದಲ್ಲಿ ಕಂಡುಬಂದಿದೆ.
ಕೊಪ್ಪಳ ಜಿಲ್ಲೆಯ ಕಿಲ್ಲಾರಹಟ್ಟಿ ಹಾಗೂ ರಾಯಚೂರು ಜಿಲ್ಲೆಯ ವಕ್ರಾಣಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿದ್ದು, ಈ ರೀತಿಯ 100ಕ್ಕೂ ಅಧಿಕ ಮತದಾರರ ಹೆಸರು ಪತ್ತೆಯಾಗಿದೆ. ಬೇರೆ ಕಡೆ ವಾಸಿಸುವವರು ಎರಡೆರಡು ಕಡೆ ಮತದಾರರ ಗುರುತಿನ ಚೀಟಿ ಹೊಂದಿರುವ ಜೊತೆಗೆ ಎರಡೂ ಕಡೆ ಮತದಾನ ಮಾಡುತ್ತಿದ್ದಾರೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಅಕ್ರಮ ಮತದಾನವನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರ ಒತ್ತಾಯಿಸಿದ್ದಾರೆ.
ಸಾವಿರಾರು ಜನರನ್ನು ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದ ಆರೋಪ; ಗ್ರಾಮಸ್ಥರಿಂದ ಪ್ರತಿಭಟನೆ