Hangal, Sindgi Bypoll Voting: ಇಂದು ಹಾನಗಲ್, ಸಿಂದಗಿ ಉಪಚುನಾವಣೆಗೆ ಮತದಾನ

ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ನಡೆದಿದೆ. ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಮತದಾನ ನಡೆಯಲಿದೆ.

Hangal, Sindgi Bypoll Voting: ಇಂದು ಹಾನಗಲ್, ಸಿಂದಗಿ ಉಪಚುನಾವಣೆಗೆ ಮತದಾನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Oct 30, 2021 | 9:23 AM

ವಿಜಯಪುರ: ಇಂದು ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಪ್ರಕ್ರಿಯೆ ಆರಂಭವಾಗಿದೆ. ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ್, ಕಾಂಗ್ರೆಸ್​ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್​ನಿಂದ ನಿಯಾಜ್ ಶೇಖ್ ಸ್ಪರ್ಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್​ನಿಂದ ನಾಜಿಯಾ ಅಂಗಡಿ, ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ ಕಣಕ್ಕಿಳಿದಿದ್ದಾರೆ.

ಹಾನಗಲ್ ಉಪಚುನಾವಣೆ ವಿವರ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆ ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ನಡೆದಿದೆ. ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಮತದಾನ ನಡೆಯಲಿದೆ. 1,05,525 ಪುರುಷರು, 98,953 ಮಹಿಳೆಯರು, 83 ಸೇವಾ ಮತದಾರರು, ಮೂವರು ಇತರೆ ಮತದಾರರು ಸೇರಿದಂತೆ ಒಟ್ಟು 2.04,564 ಮತದಾರರು ಹಕ್ಕು ಚಲಾಯಿಸುತ್ತಾರೆ. 239 ಮೂಲ ಮತಗಟ್ಟೆಗಳು ಮತ್ತು 24 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 263 ಮತಗಟ್ಟೆಗಳು ಸಿದ್ಧವಾಗಿವೆ. 263 ಮತಗಟ್ಟೆಗಳಲ್ಲಿ ಒಟ್ಟು 1,155 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಹಾನಗಲ್ ಕ್ಷೇತ್ರದಲ್ಲಿ 33 ಸೂಕ್ಷ್ಮ ಮತ್ತು 3 ಅತಿಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 121 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಒದಗಿಸಲಾಗಿದೆ. ಒಂದು ವಿಕಲಚೇತನ ಸ್ನೇಹಿ ಮತಗಟ್ಟೆ ಮತ್ತು ಎರಡು ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 610 ಪೊಲೀಸ್ ಸಿಬ್ಬಂದಿ, ನಾಲ್ಕು ಡಿವೈಎಸ್​ಪಿ, 11 ಸಿಪಿಐಗಳು, 29 ಪಿಎಸ್ಐಗಳು, 85 ಎಎಸ್ಐಗಳು, 481 ಕಾನ್​ಸ್ಟೇಬಲ್​, 30 ಮಹಿಳಾ ಸಿಬ್ಬಂದಿಗಳು, 90 ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಆರ್​ಪಿಎಫ್ ಮತ್ತು 90 ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಐಎಸ್ಎಫ್ ತಂಡವನ್ನು ನೇಮಕ ಮಾಡಲಾಗಿದೆ.

ಸಿಂದಗಿ ಉಪಚುನಾವಣೆ ವಿವರ ಇನ್ನು ಸಿಂದಗಿ ವಿಧಾನಸಭಾ ಉಪಚುನಾವಣೆ ಒಟ್ಟು 2,34,584 ಜನರು ಮತದಾನ ಮಾಡಲಿದ್ದಾರೆ. 1,20,844 ಪುರುಷರು, 1,13561 ಮಹಿಳೆಯರು ಮತದಾನ ಮಾಡುತ್ತಾರೆ. ಇತರೆ 32 ಮತದಾರರು ಹಾಗೂ 147 ಸರ್ವಿಸ್ ವೋಟರ್​ಗಳು ಮತ ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 297 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಅಕ್ರಮ ತಡೆಗೆ 7 ಚೆಕ್ ಪೋಸ್ಟ್​ಗಳು ಕಾರ್ಯ ನಿರ್ವಹಿಸುತ್ತಿವೆ.ಸಿಂದಗಿ ಕ್ಷೇತ್ರಕ್ಕೆ 22 ಸೆಕ್ಟರ್ ಆಫೀಸರ್​ಗಳು, 18 ಫ್ಲೈಯಿಂಗ್ ಸ್ಕ್ವೇಡ ತಂಡಗಳು, 21 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಓರ್ವ ಸಹಾಯಕ ಎಕ್ಸ್ಪೆಂಡಿಚರ್ ಅಬ್ಸರ್ವರ್, 1 ಅಕೌಂಟಿಂಗ್ ತಂಡ, 6 ವಿಡಿಯೋ ಸರ್ವೆಲೆನ್ಸ್ ತಂಡಗಳು, 2 ವಿವಿಂಗ್ ತಂಡಗಳು, 2 ಜಿಲ್ಲಾಮಟ್ಟದ ಮಾಸ್ಟರ್ ಟ್ರೈನರ್​ಗಳು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ 23 ಮಾಸ್ಟರ್ ಟ್ರೈನರ್​ಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಮತದಾನ ಕರ್ತವ್ಯಕ್ಕೆ 1,308 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದರಲ್ಲಿ 327 ಪಿಆರ್ಓ, 327 ಎಪಿಆರ್​ಒ ಹಾಗೂ 654 ಪಿಓಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮತದಾನದ ಚಿತ್ರೀಕರಣಕ್ಕೆ 20 ವಿಡಿಯೋಗ್ರಾಫರ್​ಗಳನ್ನು ನಿಯೋಜಿಸಲಾಗಿದೆ. ಮತದಾನ ಕೇಂದ್ರದಲ್ಲಿ 37 ಸಿಎಪಿಎಫ್ ನಿಯೋಜನೆ ಮಾಡಲಾಗಿದೆ.

2 ಸಖಿ ಮತದಾನ ಕೇಂದ್ರ, 1 ಪಿಡಬ್ಲ್ಯೂಡಿ ಮತದಾನ ಕೇಂದ್ರ, 180 ವೆಬ್ ಕಾಸ್ಟಿಂಗ್ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಡಿವೈಎಸ್​ಪಿ 2, 4 ಸಿಪಿಐ, 22 ಪಿಎಸ್ಐ, 70 ಎಎಸ್ಐ, 477 ಪೊಲೀಸ್ ಕಾನ್ಸ್​ಟೇಬಲ್​, 40ಡಿಎಆರ್, 180 ಐಆರ್​ಬಿ, 185 ಸಿಐಎಸ್ಎಫ್ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಮತದಾನ ಮುಕ್ತಾಯದ ಬಳಿಕ ವಿದ್ಯುನ್ಮಾನ ಮತ ಪೆಟ್ಟಿಗೆಗಳನ್ನು ಇರಿಸಲು ಸಿಂದಗಿ ಪಟ್ಟಣದ ಆರ್​ಡಿ ಪಾಟೀಲ್ ಕಾಲೇಜಿನಲ್ಲಿ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ

National Defence: ಸುಖೋಯ್ ಯುದ್ಧ ವಿಮಾನ: ಭಾರತೀಯ ವಾಯುಪಡೆಯ ಸುದೀರ್ಘ ಭರವಸೆ

ಲಸಿಕಾ ಅಭಿಯಾನಕ್ಕೆ ಭಾರತ ಏಷ್ಯಾದ ಎರಡು ಬ್ಯಾಂಕ್​ಗಳಲ್ಲಿ ರೂ, 15,000 ಕೋಟಿ ಸಾಲಕ್ಕೆ ಅರ್ಜಿ ಸಲ್ಲಿಸಿದೆ

Published On - 9:10 am, Sat, 30 October 21

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು