AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VTU Exams 2021: ವಿಟಿಯು ಮೊದಲ ಸೆಮಿಸ್ಟರ್​ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ವಿವರ

ಜುಲೈ 27 ರಿಂದ ಪ್ರಥಮ ಸೆಮಿಸ್ಟರ್ ಪರೀಕ್ಷೆ ಆರಂಭವಾಗಲಿದ್ದು, ಅಗಸ್ಟ್ 3ರವರೆಗೆ ಪರೀಕ್ಷೆಗಳು ನಡೆಯಲಿವೆ. ಅಗಸ್ಟ್ 4 ರಿಂದ ಅಗಸ್ಟ್13ರವರೆಗೆ ವೈವಾ ಮತ್ತು ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ.

VTU Exams 2021: ವಿಟಿಯು ಮೊದಲ ಸೆಮಿಸ್ಟರ್​ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
TV9 Web
| Updated By: guruganesh bhat|

Updated on: Jul 12, 2021 | 3:12 PM

Share

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಬಾಕಿ ಉಳಿದ ಮೊದಲ ಸೆಮಿಸ್ಟರ್ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ನಿಗದಿಯಾಗಿದ್ದ ಪರೀಕ್ಷೆ ಕೊರೊನಾ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿತ್ತು. ಆದರೆ ಇದೀಗ ವಿಟಿಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಜುಲೈ 27 ರಿಂದ ಪ್ರಥಮ ಸೆಮಿಸ್ಟರ್ ಪರೀಕ್ಷೆ ಆರಂಭವಾಗಲಿದ್ದು, ಅಗಸ್ಟ್ 3ರವರೆಗೆ ಪರೀಕ್ಷೆಗಳು ನಡೆಯಲಿವೆ. ಅಗಸ್ಟ್ 4 ರಿಂದ ಅಗಸ್ಟ್13ರವರೆಗೆ ವೈವಾ ಮತ್ತು ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ.

ಜನವರಿ, ಮಾರ್ಚ್​​ನಲ್ಲಿ ನಡೆದಿದ್ದ ಸೆಮಿಸ್ಟರ್ ಪರೀಕ್ಷೆಯ ಈಗಾಗಲೇ ಪ್ರಕಟವಾಗಿರುವ ಫಲಿತಾಂಶವನ್ನು ಮರು ಮೌಲ್ಯಮಾಪನಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಫಲಿತಾಂಶದಲ್ಲಿ ತಕರಾರಿದ್ದರೆ ಅರ್ಜಿ ಸಲ್ಲಿಸಬಹುದು ಎಂದು ವಿಟಿಯು ತಿಳಿಸಿದೆ. ನಾಳೆಯಿಂದ ಜುಲೈ 14ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಉತ್ತರ ಪತ್ರಿಕೆ ಫೋಟೋ ಕಾಪಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮರುಮೌಲ್ಯಮಾಪನ ಅರ್ಜಿ ಆಯಾ ಕಾಲೇಜಿಗೆ ಸಲ್ಲಿಸಬೇಕು. http://prexamblr.Vtu.Ac.inನಲ್ಲಿ ಅರ್ಜಿ ವೀಕ್ಷಿಸಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟಿಸಲಾಗಿದೆ.

VTU Exams Timetable

                                                                                           ಪರೀಕ್ಷಾ ವೇಳಾಪಟ್ಟಿ

ಶೀಘ್ರದಲ್ಲೇ ವಿಟಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದ್ದು, ಬಾಕಿ ಉಳಿದಿದ್ದ ಸೆಮಿಸ್ಟರ್​ ಪರೀಕ್ಷೆ ನಡೆಸಲು ವಿಟಿಯು ಮುಂದಾಗಿದೆ. ಜುಲೈ 26ರಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಪರೀಕ್ಷೆ ಆರಂಭವಾಗಲಿದ್ದು, ಪ್ರಥಮ ಸೆಮಿಸ್ಟರ್​ ಯುಜಿ, ಪಿಜಿ ಪರೀಕ್ಷೆ ದಿನಾಂಕ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆನ್​ಲೈನ್​ನಲ್ಲಿ ವರದಿ ಸಲ್ಲಿಸಬೇಕಿದ್ದು, ಸಿಡಿ ಮೂಲಕ ಪ್ರಾಜೆಕ್ಟ್, ಸೆಮಿನಾರ್​ ವರದಿ ಸಲ್ಲಿಸಬೇಕು. ಜುಲೈ 19ರಿಂದ ಪ್ರಥಮ ಸೆಮಿಸ್ಟರ್​ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಓದಿನ ರಜೆ ಘೋಷಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆ ಬಳಿಕ 2ನೇ ಸೆಮಿಸ್ಟರ್​ ಆರಂಭವಾಗಲಿದ್ದು, ಅಟಾನಮಸ್​ ಕಾಲೇಜುಗಳಿಗೆ ಈ ನಿಯಮ ಅನ್ವಯವಾಗಲಿದೆ. ಈ ಕುರಿತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸುತ್ತೋಲೆ ಪ್ರಕಟಿಸಿದೆ.

ಇದನ್ನೂ ಓದಿ: 

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

2nd PUC Results 2021: ದ್ವಿತೀಯ ಪಿಯುಸಿ ಅಂಕ ನಿಗದಿ ಹೇಗೆ? ವಿದ್ಯಾರ್ಥಿಗಳೇ, ತಪ್ಪದೇ ಈ ಸುದ್ದಿ ಓದಿ

(VTU Exam 2021 first sem time table announced here is the details)

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್