ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Apr 26, 2021 | 10:49 PM

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ ಎಂದು ಹೇಳಲಾಗಿತ್ತು. ಇದಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಸರ್ಕಾರ ಲಾಕ್​ಡೌನ್​ ಘೋಷಣೆ ನಿರ್ಧಾರದ ಬೆನ್ನಲ್ಲೇ ವಿಟಿಯು ಪರೀಕ್ಷೆಯನ್ನು ಮುಂದೂಡಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ. ಎಲ್ಲ ಪ್ರಾಯೋಗಿಕ ಪರೀಕ್ಷೆಗಳು ಸಹ ಮುಂದೂಡಲ್ಪಟ್ಟಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಬೇಕಿತ್ತು. ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದರು.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಮಾಹಾಮಾರಿ ಓಟಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಕಠಿಣಾತಿ ಕಠಿಣ ರೂಲ್ಸ್ ಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂವನ್ನ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದರೆ, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸೋದು ಎಷ್ಟು ಸರಿ ಎನ್ನುವ ಪ್ರಶ್ನೆ ಮೂಡಿತ್ತು.

ಇದನ್ನೂ ಓದಿ: ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ