ಬೆಂಗಳೂರು: ಜನವರಿ, ಮಾರ್ಚ್ನಲ್ಲಿ ನಡೆದಿದ್ದ ಸೆಮಿಸ್ಟರ್ ಪರೀಕ್ಷೆಯ ಈಗಾಗಲೇ ಪ್ರಕಟವಾಗಿರುವ ಫಲಿತಾಂಶವನ್ನು ಮರು ಮೌಲ್ಯಮಾಪನಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಫಲಿತಾಂಶದಲ್ಲಿ ತಕರಾರಿದ್ದರೆ ಅರ್ಜಿ ಸಲ್ಲಿಸಬಹುದು ಎಂದು ವಿಟಿಯು ತಿಳಿಸಿದೆ. ನಾಳೆಯಿಂದ ಜುಲೈ 14ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಉತ್ತರ ಪತ್ರಿಕೆ ಫೋಟೋ ಕಾಪಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮರುಮೌಲ್ಯಮಾಪನ ಅರ್ಜಿ ಆಯಾ ಕಾಲೇಜಿಗೆ ಸಲ್ಲಿಸಬೇಕು. http://prexamblr.Vtu.Ac.inನಲ್ಲಿ ಅರ್ಜಿ ವೀಕ್ಷಿಸಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟಿಸಲಾಗಿದೆ.
ಶೀಘ್ರದಲ್ಲೇ ವಿಟಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದ್ದು, ಬಾಕಿ ಉಳಿದಿದ್ದ ಸೆಮಿಸ್ಟರ್ ಪರೀಕ್ಷೆ ನಡೆಸಲು ವಿಟಿಯು ಮುಂದಾಗಿದೆ. ಜುಲೈ 26ರಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಪರೀಕ್ಷೆ ಆರಂಭವಾಗಲಿದ್ದು, ಪ್ರಥಮ ಸೆಮಿಸ್ಟರ್ ಯುಜಿ, ಪಿಜಿ ಪರೀಕ್ಷೆ ದಿನಾಂಕ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ವರದಿ ಸಲ್ಲಿಸಬೇಕಿದ್ದು, ಸಿಡಿ ಮೂಲಕ ಪ್ರಾಜೆಕ್ಟ್, ಸೆಮಿನಾರ್ ವರದಿ ಸಲ್ಲಿಸಬೇಕು. ಜುಲೈ 19ರಿಂದ ಪ್ರಥಮ ಸೆಮಿಸ್ಟರ್ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಓದಿನ ರಜೆ ಘೋಷಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆ ಬಳಿಕ 2ನೇ ಸೆಮಿಸ್ಟರ್ ಆರಂಭವಾಗಲಿದ್ದು, ಅಟಾನಮಸ್ ಕಾಲೇಜುಗಳಿಗೆ ಈ ನಿಯಮ ಅನ್ವಯವಾಗಲಿದೆ. ಈ ಕುರಿತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸುತ್ತೋಲೆ ಪ್ರಕಟಿಸಿದೆ.
ಇದನ್ನೂ ಓದಿ:
ಕಾನೂನು ವಿವಿ ವಿದ್ಯಾರ್ಥಿಗಳ ಸಾರಾಸಗಟು ತೇರ್ಗಡೆ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ
(VTU invites application for revaluation of Semester results)