ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ

ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ ನೋಟಿಸ್ ವಿಚಾರ ಸದ್ಯ ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್​ ಸಮರಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಾತನಾಡಿದ್ದು, ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು 1973-74ರಲ್ಲಿ ನೋಟಿಫಿಕೇಷನ್​ ಆಗಿದೆ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ
ವಿಜಯಪುರದಲ್ಲಿ ವಕ್ಫ್​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Oct 28, 2024 | 6:55 PM

ಬೆಂಗಳೂರು, ಅಕ್ಟೋಬರ್​​ 28: ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ (Waqf land dispute) ನೋಟಿಸ್ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಮಧ್ಯೆ ವಾಕ್​ ಸಮರಕ್ಕೂ ಕಾರಣವಾಗಿದೆ. ಇದೀಗ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿದ್ದು, ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು 1973-74ರಲ್ಲಿ ನೋಟಿಫಿಕೇಷನ್ ಆಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೈಕಿ 700 ಎಕರೆ ಮಾತ್ರ ವಕ್ಫ್‌ ಬೋರ್ಡ್‌ನ ಸ್ವಾಧೀನದಲ್ಲಿದೆ. ಉಳಿದ ಆಸ್ತಿಗಳು ಕೆಲವು ಮುಸ್ಲಿಂ ಸಂಸ್ಥೆಗಳ ವಶದಲ್ಲಿವೆ. ಕೆಲವು ಆಸ್ತಿ ಈದ್ಗಾ ಮೈದಾನ ಆಗಿದೆ, ದರ್ಗಾ ಹೆಸರಲ್ಲಿದೆ. 1319 ಎಕರೆ ಯಾವುದೇ ವೈಯಕ್ತಿಕ ಅನುಭೋಗದಲ್ಲಿ ಇಲ್ಲ. 1319 ಎಕರೆ ಯಾರಿಗೂ ಮಂಜೂರು ಆಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: 433 ರೈತರಿಗೆ ನೋಟಿಸ್: ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸಚಿವ ಎಂಬಿ ಪಾಟೀಲ್​

ಇವುಗಳನ್ನು ಇಂದೀಕರಣ ಮಾಡಬಹುದು ಅಂತಾ ತೀರ್ಮಾನಿಸಲಾಗಿದೆ. ಇಂದೀಕರಣ ಮಾಡುವುದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ. 11,835 ಎಕರೆ ಉಳುವವನೇ ಭೂಒಡೆಯ ಅಡಿ ಮಂಜೂರಾಗಿದೆ. ಬೇರೆ ಬೇರೆ ಯೋಜನೆಗಳಿಗೂ ಭೂಸ್ವಾಧೀನ ಆಗಿದೆ. ಇದು ಯಾವುದಕ್ಕೂ ನೋಟಿಸ್ ಕೊಟ್ಟಿಲ್ಲ, ಕೊಡುವ ಉದ್ದೇಶವೂ ಇಲ್ಲ. ವಕ್ಫ್ ಇಲಾಖೆಯ ಸಚಿವ ಜಮೀರ್‌ ಕೂಡ ಇದಕ್ಕೆ ಸೂಚನೆ ನೀಡಿಲ್ಲ. ರೈತರಿಗೆ ಮಂಜೂರಾದ ಜಮೀನಿಗೆ ಯಾರಿಗೂ ನೋಟಿಸ್‌ ನೀಡಿಲ್ಲ. 121 ನೋಟಿಸ್ ನೀಡಿರುವುದು ನಿಜ ಎಂದಿದ್ದಾರೆ.

ಇದನ್ನೂ ಓದಿ: ಸಮಿತಿಯಲ್ಲಿ ಹೆಸರು ಸೇರಿಸದೆ ವಿಜಯೇಂದ್ರರಿಂದ ನನ್ನನ್ನು ತುಳಿಯುವ ಪ್ರಯತ್ನ: ಬಸನಗೌಡ ಯತ್ನಾಳ್

ಇಂಡಿ ತಾಲೂಕಿನ ಕೆಲವು ಕಡೆ ತಹಶೀಲ್ದಾರ್‌ ಕೆಲವು ಕಡೆ ನೋಟಿಸ್ ನೀಡದೆ ಮಾಡಿದ್ದಾರೆ. ಇದನ್ನು ವಾಪಸ್ ಮಾಡುತ್ತೇವೆ. ಉದ್ದೇಶಪೂರ್ವಕವಾಗಿ ಗಲಭೆ ಹುಟ್ಟಿಸಬೇಕು ಎಂದೇ ಹೊರಟಿದ್ದಾರೆ. 1977ರಲ್ಲೇ ಹೊನವಾಡ ಗ್ರಾಮವನ್ನು ವಕ್ಫ್‌ನಿಂದ ತೆಗೆದುಹಾಕಲಾಗಿದೆ. ಹೊನವಾಡ ಗ್ರಾಮದಲ್ಲಿ 11 ಎಕರೆ ಮಾತ್ರ ವಕ್ಫ್‌ ಆಸ್ತಿ ಇದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹೊನವಾಡದಲ್ಲಿರುವ ಗ್ರಾಮದ ಯಾವ ರೈತರಿಗೂ ನೋಟಿಸ್ ನೀಡಿಲ್ಲ. ಇದು ವಕ್ಫ್‌ ಹಾಗೂ ರೈತರ ನಡುವೆ ಇರುವ ಸಮಸ್ಯೆಯಲ್ಲ. ಇದು ಕೇವಲ ಯತ್ನಾಳ್‌, ವಿಜಯೇಂದ್ರ ನಡುವೆ ಇರುವ ಸಮಸ್ಯೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ