ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್

ವಿಜಯಪುರದ ರೈತರು ತಮ್ಮ ಭೂಮಿಯನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡಿರುವ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಎಕರೆ ಭೂಮಿ ವಕ್ಫ್ ಹೆಸರಿನಲ್ಲಿ ದಾಖಲಾಗಿದೆ ಎಂದು ಆರೋಪಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಬೆಂಬಲ ಸೂಚಿಸಿದ್ದು, ಧರಣಿಯಲ್ಲಿ ಭಾಗಿಯಾಗಲಿದ್ದಾರೆ.

ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್
ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 30, 2024 | 9:58 AM

ಹುಬ್ಬಳ್ಳಿ, ಅಕ್ಟೋಬರ್​​ 30: ವಿಜಯಪುರದಲ್ಲಿ ರೈತರು ಸರ್ಕಾರದ ವಿರುದ್ಧ ಬಂಡೆದ್ದಿದಾರೆ. ವಕ್ಫ್‌ ಆಸ್ತಿ (Waqf) ವಿವಾದ ಕುರಿತಂತೆ ರೈತರು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಾಥ್ ನೀಡಲಿದ್ದಾರೆ.

ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಧರಣಿ ಆರಂಭಿಸಿದ್ದು, ಇಂದು ಧರಣಿ ನಿರತ ರೈತರನ್ನು ಭೇಟಿ ಮಾಡಿ ಬಳಿಕ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ವಿಜಯಪುರ ವಕ್ಫ್​ ಆಸ್ತಿ ವಿವಾದ: ವಿಶೇಷ ಹೋರಾಟಕ್ಕೆ ಸಿದ್ಧವಾದ ರೈತ ಸಂಘಟನೆಗಳು

ರೈತರ ಜಮೀನುಗಳನ್ನು ವಕ್ಫ್ ಆಸ್ತಿಯಾಗಿ ಕಬಳಿಸುವುದರ ಹಿಂದೆ ಕಾಂಗ್ರೆಸ್ ಮತ್ತು ಸಚಿವ ಜಮೀರ್ ಕುಮ್ಮಕ್ಕು ಕೆಲಸ ಮಾಡಿರುವುದು ಸ್ಪಷ್ಟ. ಇವರೆಲ್ಲರೂ ಸೇರಿ, ರೈತರನ್ನು ಭಯಭೀತರನ್ನಾಗಿ ಮಾಡಿ ಅವರ ಜಮೀನನ್ನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಪ್ರಲ್ಹಾದ್​ ಜೋಶಿ ಆರೋಪಿಸಿದ್ದಾರೆ.

ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್ 

ರೈತರ ಜಮೀನು ಖಾತೆಯಿಂದ ವಕ್ಫ್ ಬೋರ್ಡನ ಹೆಸರು ತೆಗೆಸುವವರೆಗೆ ನಮ್ಮ ಹೋರಾಟ ನಡೆಯಲಿದೆ. ವಕ್ಫ್ ಬೋರ್ಡ್ ವಂಚನೆಯಲ್ಲಿ ಸಿಲುಕಿದ ರಾಜ್ಯದ ಪ್ರತಿ ರೈತರಿಗೆ ನ್ಯಾಯ ಸಿಗುವವರೆಗೆ ಹಾಗೂ ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಸಿಗುವವರೆಗೆ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ