ತೀವ್ರಗೊಂಡ ವಕ್ಫ್​ ಭೂ ವಿವಾದ: ಶಾ ಸೇರಿದಂತೆ ಸಂಸತ್‌ ಜಂಟಿ ಸದನ ಸಮಿತಿಗೆ ಅಶೋಕ್ ಪತ್ರ

ಕರ್ನಾಟಕದಲ್ಲಿ ವಕ್ಫ್ ಮಂಡಳಿಯ ಭೂಮಿ ಒತ್ತುವರಿಯಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಸಾವಿರಾರು ಎಕರೆ ಭೂಮಿಯನ್ನು ವಕ್ಫ್ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವುದರಿಂದ ರೈತರು ತಮ್ಮ ಜಮೀನುಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇದೀಗ ಆರ್​ ಅಶೋಕ್​ ಅಮಿತ್ ಶಾ ಗೆ ಪತ್ರ ಬರೆದಿದ್ದು, ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

ತೀವ್ರಗೊಂಡ ವಕ್ಫ್​ ಭೂ ವಿವಾದ: ಶಾ ಸೇರಿದಂತೆ ಸಂಸತ್‌ ಜಂಟಿ ಸದನ ಸಮಿತಿಗೆ ಅಶೋಕ್ ಪತ್ರ
ತೀವ್ರಗೊಂಡ ವಕ್ಫ್​ ಭೂ ವಿವಾದ: ಶಾ ಸೇರಿದಂತೆ ಸಂಸತ್‌ ಜಂಟಿ ಸದನ ಸಮಿತಿಗೆ ಅಶೋಕ್ ಪತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 04, 2024 | 2:47 PM

ಬೆಂಗಳೂರು, ನವೆಂಬರ್​ 04: ರೈತರಿಗೆ ವಕ್ಫ್ (Waqf)​ ನೋಟಿಸ್​ ಖಂಡಿಸಿ ಜಿಲ್ಲೆ ಜಿಲ್ಲೆಯಲ್ಲೂ ಪ್ರತಿಭಟನೆ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದಿದೆ. ಇದರ ಮಧ್ಯೆ ಕರ್ನಾಟಕದಲ್ಲಿ ವಕ್ಫ್ ಮಂಡಳಿಗೆ ಸಂಬಂಧಪಟ್ಟಂತೆ ನಡೆಯುತ್ತಿರುವ ಎಲ್ಲ ಆಸ್ತಿ ನೋಂದಣಿ, ತಿದ್ದುಪಡಿಗಳನ್ನು ಈ ಕೂಡಲೇ ನಿಲ್ಲಿಸಿವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಕ್ಫ್ (ತಿದ್ದುಪಡಿ) ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ವಿಪಕ್ಷ ನಾಯಕ ಆರ್​ ಅಶೋಕ್​ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್‌ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್​​ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರಂಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.

ಆರ್​ ಅಶೋಕ್​ ಟ್ವೀಟ್​

ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ನೋಟಿಸ್‌ ನೀಡಲಾಗಿದೆ ಎಂದು ನೂರಾರು ರೈತರು ಹೇಳಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ. ಎಲ್ಲಾ ಜಿಲ್ಲೆಗಳಲ್ಲಿ ತಲಾ 10,000 ಎಕರೆ ಜಮೀನನ್ನು ವಕ್ಫ್​ ನೋಂದಣಿ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗಿದೆ. ವಕ್ಫ್​ ಮಂಡಳಿಯು ದೇವಸ್ಥಾನ, ಮಠ ಹಾಗೂ ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ಕೂಡ ತನ್ನದು ಎಂದು ಹೇಳಿಕೊಂಡಿದೆ. ಹಿಂದೂ ಸ್ಮಶಾನ ಕೂಡ ತನ್ನದು ಎಂದು ವಕ್ಫ್​ ಉಲ್ಲೇಖಿಸಿರುವುದು ಇನ್ನಷ್ಟು ಆಘಾತದ ಸಂಗತಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಕ್ಫ್​ ಬೋರ್ಡ್​ ವಿವಾದ: ಕರ್ನಾಟಕದಾದ್ಯಂತ ಬಿಜೆಪಿ ಪ್ರತಿಭಟನೆ, ರಾಜ್ಯ ಸರ್ಕಾರ ಆದೇಶ ಹಿಂಪಡೆದರೂ ಪಟ್ಟು ಬಿಡದ ಕೇಸರಿ ಪಡೆ

13ನೇ ಶತಮಾನದಷ್ಟು ಇತಿಹಾಸ ಹೊಂದಿರುವ ವಿರಕ್ತ ಮಠಕ್ಕೆ ಸೇರಿದ ಸಿಂದಗಿಯ 1.28 ಎಕರೆ ಜಮೀನು, ವಿಜಯಪುರದ ಐತಿಹಾಸಿಕ ಸೋಮೇಶ್ವರ ದೇವಾಲಯ, ಕಲಬುರ್ಗಿಯ ಬೀರದೇವರ ಗುಡಿ ಸೇರಿದಂತೆ ಅನೇಕ ಜನಪ್ರಿಯ ಸ್ಥಳಗಳನ್ನು ಕೂಡ ವಕ್ಫ್​ ತನ್ನದೆಂದು ಘೋಷಿಸಿಕೊಂಡಿದೆ. ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿ ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಬೇಕು. ವಕ್ಫ್​ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕು ಎಂದು ಪತ್ರದ ಮೂಲಕ ಆರ್‌.ಅಶೋಕ್ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಗುರುಪ್ರಸಾದ್ ಕಾಲ್ ರಿಸೀವ್ ಮಾಡದೇ ಇದ್ರೂ ಯಾರಿಗೂ ಅನುಮಾನ ಬಂದಿಲ್ಲವೇಕೆ?
ಗುರುಪ್ರಸಾದ್ ಕಾಲ್ ರಿಸೀವ್ ಮಾಡದೇ ಇದ್ರೂ ಯಾರಿಗೂ ಅನುಮಾನ ಬಂದಿಲ್ಲವೇಕೆ?
ಅಡುಗೆ ವಿಚಾರಕ್ಕೆ ಜಗಳ; ಜೊತೆಗಿದ್ದವನನ್ನು ರೂಂನಲ್ಲೇ ಹೊಡೆದು ಕೊಂದ ಯುವಕ
ಅಡುಗೆ ವಿಚಾರಕ್ಕೆ ಜಗಳ; ಜೊತೆಗಿದ್ದವನನ್ನು ರೂಂನಲ್ಲೇ ಹೊಡೆದು ಕೊಂದ ಯುವಕ
ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್