ವಕ್ಫ್ ಬೋರ್ಡ್​ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ: ಇದು ರಾಜಕೀಯ ದುರುದ್ದೇಶ ಎಂದ ಸಿಎಂ

ಕರ್ನಾಟಕದಲ್ಲಿ ವಕ್ಫ್ ಭೂಮಿ ವಿವಾದದಲ್ಲಿ ರೈತರಿಗೆ ನೀಡಲಾದ ನೋಟಿಸ್‌ಗಳನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇಷ್ಟಾದರೂ ನಾಳೆ ಬಿಜೆಪಿ ಪ್ರತಿಭಟನೆ ಮುಂದಾಗಿದೆ. ಹೀಗಾಗಿ ಸರ್ಕಾರದ ನಿರ್ಧಾರದ ನಂತರವೂ ಪ್ರತಿಭಟನೆ ಮುಂದುಗಿರುವುದನ್ನು ಸಿಎಂ ವಿರೋಧಿಸಿದ್ದಾರೆ. ಈ ವಿವಾದದಲ್ಲಿ ರೈತರ ಹಿತಾಸಕ್ತಿಯನ್ನು ರಕ್ಷಿಸುವುದು ಮುಖ್ಯ ಎಂದಿದ್ದಾರೆ.

ವಕ್ಫ್ ಬೋರ್ಡ್​ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ: ಇದು ರಾಜಕೀಯ ದುರುದ್ದೇಶ ಎಂದ ಸಿಎಂ
ವಕ್ಫ್ ಬೋರ್ಡ್​ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ: ಇದು ರಾಜಕೀಯ ದುರುದ್ದೇಶ ಎಂದ ಸಿಎಂ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 03, 2024 | 8:55 PM

ಬೆಂಗಳೂರು, ನವೆಂಬರ್​ 03: ರೈತರ ಜಮೀನಿನಲ್ಲಿ ನಮೂದಾಗಿರುವ ವಕ್ಫ್ ಹೆಸರು ತಿದ್ದುಪಡಿಗೆ ಸಿಎಂ ಸೂಚಿಸಿದ್ದಾರೆ. ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್‌ಗೆ ಆದೇಶ ನೀಡಿದ್ದಾರೆ. ಹೀಗಿದ್ದರೂ ವಕ್ಫ್ ವಿವಾದ ತಣ್ಣಗಾಗಿಲ್ಲ. ಇದರ ಮಧ್ಯೆ ನಾಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ. ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಯ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು, ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ರಾಜ್ಯದ ಜನತೆಗೆ ಸಿದ್ದರಾಮಯ್ಯ ಮನವಿ

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್​ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್​​ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯ ರಾಜಕೀಯ ಪುಡಾರಿ ಎಂದ ಸಿದ್ದರಾಮಯ್ಯಗೆ ಪಲಾಯನವಾದಿ ಎಂದು ವಿಜಯೇಂದ್ರ ತಿರುಗೇಟು

ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ. ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದಗೌಡ ಮತ್ತು ಜಗದೀಶ್​ ಶೆಟ್ಟರ್​ ಹಾಗೂ ಜೆಡಿಎಸ್ ಪಕ್ಷದ ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿಯೂ ನೋಟಿಸ್ ನೀಡಲಾಗಿತ್ತು. ಈ ವಿವರಗಳನ್ನು ನನ್ನ ಸಹದ್ಯೋಗಿಗಳಾಗಿರುವ ಎಂಬಿ ಪಾಟೀಲ್​, ಪ್ರಿಯಾಂಕ್ ಖರ್ಗೆ ಮೊದಲಾದವರು ಮಾಧ್ಯಮಗಳಿಗೆ ನೀಡಿದ್ದಾರೆ.

ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ‘‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು, ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತಿರಿ’’ ಎಂದು ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ ಎಂದಿದ್ದಾರೆ.

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್​ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ

ರಾಜ್ಯ ಬಿಜೆಪಿ ಪಕ್ಷದಲ್ಲಿ ಸರಣಿ ಪಟಾಕಿಗಳಂತೆ ಪ್ರತಿನಿತ್ಯ ಭಿನ್ನಮತ ಸ್ಪೋಟಗೊಳ್ಳುತ್ತಿದೆ. ಪರಸ್ಪರ ಆರೋಪಗಳನ್ನು ಮಾಡುವ ಮೂಲಕ ಈ ಪಕ್ಷದ ನಾಯಕರು ರಾಜ್ಯದ ಜನರ ಎದುರು ಬೆತ್ತಲಾಗುತ್ತಿದ್ದಾರೆ. ಈ ಜಗಳ ಬಗೆಹರಿಸುವ ಯಾವ ಪ್ರಯತ್ನವನ್ನೂ ಮಾಡದ ಅವರ ಪಕ್ಷದ ಹೈಕಮಾಂಡ್ ದೂರ ನಿಂತು ಚಂದ ನೋಡುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಎಲ್ಲ ಜಾತಿ ಮತ್ತು ಧರ್ಮದಲ್ಲಿರುವ ಬಡವರು, ರೈತರು, ಮಹಿಳೆಯರು, ಕಾರ್ಮಿಕರು ಫಲಾನುಭವಿಗಳಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ ಎಂದು ಆರೋಪಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ

ಇದಕ್ಕಾಗಿ ಒಂದೆಡೆ ಪ್ರಧಾನಿ ಮೋದಿ ಅವರಿಂದ ಹಿಡಿದು ರಾಜ್ಯದ ಸಣ್ಣಪುಟ್ಟ ನಾಯಕರ ವರೆಗೆ ಎಲ್ಲರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ, ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ನ್ಯಾಯಬದ್ಧವಾಗಿ ನಮಗೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯಲ್ಲಿನ ಪಾಲು ಮತ್ತು ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ. ಇಂತಹ ಬೆದರಿಕೆ ಮತ್ತು ಒತ್ತಡದ ತಂತ್ರಕ್ಕೆ ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನುಡಿದಂತೆ ನಡೆಯುತ್ತೇವೆ ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಎಷ್ಟೇ ಸುಳ್ಳು ಆರೋಪಗಳನ್ನು ಮಾಡಿದರೂ ಈ ಯೋಜನೆಗಳಿಂದ ಸಂತೃಪ್ತರಾಗಿರುವ ಫಲಾನುಭವಿಗಳು ಇದಕ್ಕೆ ಕಿವಿಗೊಡದೆ ಇರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ಸುಳ್ಳು ಪ್ರೊಪಗಾಂಡದ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಕೋಮು ಸಂಘರ್ಷವನ್ನು ಸೃಷ್ಟಿ ಮಾಡಿ, ಅದರಿಂದ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ವಕ್ಫ್ ವಿವಾದ: ಸಿಎಂ ಕೇವಲ ನೋಟಿಸ್ ವಾಪಸ್ ಪಡೆದರೆ ಸಮಸ್ಯೆ ಬಗೆಹರಿಯಲ್ಲ ಎಂದ ತೇಜಸ್ವಿ ಸೂರ್ಯ

ಇದರ ಹೊರತಾಗಿ ಈ ಪ್ರತಿಭಟನೆಯಲ್ಲಿ ಯಾವ ರೈತರ ಹಿತಾಸಕ್ತಿಯ ರಕ್ಷಣೆಯ ಸದುದ್ದೇಶ ಇಲ್ಲ. ಈ ಪ್ರತಿಭಟನೆಯಿಂದ ರಾಜ್ಯದ ಸೌಹಾರ್ದತೆಗೆ ಭಂಗ ಉಂಟಾಗಬಹುದೇ ಹೊರತು ರೈತರಿಗೆ ಯಾವ ಲಾಭವೂ ಇಲ್ಲ ಎನ್ನುವುದನ್ನು ಜನತೆ ಅರ್ಥಮಾಡಿಕೊಳ್ಳಬೇಕು. ರಾಜ್ಯದ ಪ್ರಜ್ಞಾವಂತ ಜನತೆ ಇಂತಹ ಕಿಡಿಗೇಡಿತನದ ರಾಜಕೀಯವನ್ನು ತಿರಸ್ಕರಿಸಿ ನಮ್ಮ ಅಭಿವೃದ್ದಿ ಪರ ರಾಜಕೀಯದ ಪರವಾಗಿ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್