ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ವಾರದೊಳಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಧರಣಿ ಮಾಡ್ತೀವಿ: ತೇಜಸ್ವಿ ಸೂರ್ಯ

ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ. ಇನ್ನೊಂದು ವಾರದೊಳಗೆ ಕ್ರಮಕೈಗೊಳ್ಳದಿದ್ದರೆ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ವಾರದೊಳಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಧರಣಿ ಮಾಡ್ತೀವಿ: ತೇಜಸ್ವಿ ಸೂರ್ಯ
ಜಲಮಂಡಳಿ ಜೊತೆ ತೇಜಸ್ವಿ ಸೂರ್ಯ ಸಭೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Mar 06, 2024 | 9:01 PM

ಬೆಂಗಳೂರು, ಮಾರ್ಚ್​​ 06: ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಬುಧವಾರ ಬಿಡಬ್ಲ್ಯೂಎಸ್​ಎಸ್​​ಬಿ ಚೇರ್ಮನ್​​ರನ್ನು ಭೇಟಿ ಮಾಡಿರುವ ಸಂಸದ ತೇಜಸ್ವಿ ಸೂರ್ಯ (Tejasvi Surya) ಚರ್ಚಿಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ನೀರಿನ ಅಭಾವ ಬರುತ್ತೆ ಎಂದು ಗೊತ್ತಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಇನ್ನೊಂದು ವಾರದೊಳಗೆ ಸರ್ಕಾರ ತಾತ್ಕಾಲಿಕ ಪರಿಹಾರ ನೀಡಬೇಕು. ವಾರದೊಳಗೆ ಕ್ರಮಕೈಗೊಳ್ಳದಿದ್ದರೆ ವಿಧಾನಸೌಧದ ಎದುರು ಧರಣಿ ಮಾಡುತ್ತೇವೆ ಎಂದು ವಾಗ್ದಾಳಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟಿಸುತ್ತೇವೆ ಎಂದು ಹೇಳಿದ್ದಾರೆ.

ಈವರೆಗೂ ಸರ್ಕಾರ ಒಂದು ಏರಿಯಾಗೂ ಒಂದು ಹನಿ ನೀರು ಕೊಟ್ಟಿಲ್ಲ. ಸರ್ಕಾರ ಪರಿಹಾರ ಕೊಡುವ ಬದಲು ಜನರಿಗೆ ಸಮಸ್ಯೆ ಸೃಷ್ಟಿ ಮಾಡುತ್ತಿದೆ. ಈಗ ನೀರಿನ ಟ್ಯಾಂಕರ್​ಗಳನ್ನ ಸುಪರ್ದಿಗೆ ತೆಗೆದುಕೊಳ್ಳುತ್ತೇವೆ ಅಂತಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​

ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bangalore Water Crisis: ಬೆಂಗಳೂರಿನ ಹೌಸಿಂಗ್ ಸೊಸೈಟಿಯಲ್ಲಿ ನೀರು ದುರ್ಬಳಕೆ ತಡೆಯಲು ಭದ್ರತಾ ಸಿಬ್ಬಂದಿ, 5000 ರೂ. ದಂಡ!

ಬೆಂಗಳೂರು ನಗರದ ಬಹುತೇಕ ಭಾಗಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರ ಅವೈಜ್ಞಾನಿಕ ತೀರ್ಮಾನ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕಿದೆ ಎಂದು ಹೇಳಿದ್ದಾರೆ.

ಬಿಡಬ್ಲ್ಯೂಎಸ್​ಎಸ್​​ಬಿಗೆ ಸಂಸದ ತೇಜಸ್ವಿ ಸೂರ್ಯ ಕೊಟ್ಟ ಸಲಹೆ ಏನು?

  1. ಕೈಗಾರಿಕೆಗಳು, ಕಟ್ಟಡ ನಿರ್ಮಾಣಕ್ಕೆ ಕುಡಿಯಲು ಯೋಗ್ಯವಲ್ಲದ ನೀರನ್ನು ಬಳಸಬೇಕು.
  2. ಕುಡಿಯುವ ನೀರನ್ನು ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿಗೆ ಸರಬರಾಜು ಮಾಡಬೇಕು.
  3. ಸಂಸ್ಕರಣೆಯ ನೀರಿನ ಪ್ರಮಾಣ 1300 MLD ರಷ್ಟು ಇದ್ದು, ಇದನ್ನು ನೀರಿನ ಮರುಪೂರಣ ಜಾಲಕ್ಕೆ ಬಳಸಬಹುದಾಗಿದೆ.
  4. ಭೂ ವಿಜ್ಞಾನಿಗಳ ಸಲಹೆ ಮೇರೆಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಬೋರ್ ವೆಲ್ ಕೊರೆಸಿ, ನೀರಿನ ವ್ಯವಸ್ಥೆ ಕಲ್ಪಿಸಬೇಕು.
  5. ಕಳೆದ ಕೆಲ ತಿಂಗಳುಗಳಿಂದ ನಿಷ್ಕ್ರಿಯ ಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೊರೆಯಿಸಬೇಕಿದೆ.
  6. ಪ್ರಸ್ತುತ ಚಾಲ್ತಿಯಲ್ಲಿರುವ ಟ್ಯಾಂಕರ್ ವ್ಯವಸ್ಥೆಯನ್ನು ಮುಂದುವರೆಸುವುದು.
  7. ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಸ್ಥಳಗಳಲ್ಲಿ ಬೆಂಗಳೂರಿನ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದು.

ಇವೆಲ್ಲ ಪರಿಹಾರಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಮನವಿ ಸಲ್ಲಿಸಲಾಗಿದ್ದು, ಇಲ್ಲದಿದ್ದಲ್ಲಿ ವಿಧಾನಸೌಧದ ಮುಂದೆ ಬೆಂಗಳೂರಿನ ಜನತೆಯ ಪರವಾಗಿ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.

ವರದಿ: ಶಾಂತಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 pm, Wed, 6 March 24

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!