ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ; ಮಹತ್ವದ ಮಾಹಿತಿ ನೀಡಿದ ಬಸವರಾಜ ಬೊಮ್ಮಾಯಿ

ಮಹದಾಯಿ ಅಧಿಸೂಚನೆ ಹೊರಡಿಸುವಂತೆ ಮನವಿ ನೀಡಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡುವಂತೆ ಮನವಿ ಮಾಡಲಾಗಿದೆ. ಮೇಕೆದಾಟು ಯೋಜನೆ ಬಗ್ಗೆ ಸರಕಾರ ತೆಗೆದುಕೊಂಡ ನಿಲುವಿನ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ವಿವರಣೆ ನೀಡಿದ್ದಾರೆ.

ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ; ಮಹತ್ವದ ಮಾಹಿತಿ ನೀಡಿದ ಬಸವರಾಜ ಬೊಮ್ಮಾಯಿ
ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ
Follow us
TV9 Web
| Updated By: ganapathi bhat

Updated on:Apr 05, 2022 | 11:28 PM

ದೆಹಲಿ: ಕೇಂದ್ರ ಸಚಿವರ ಭೇಟಿ ವೇಳೆ ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮೇಕೆದಾಟು ಯೋಜನೆ ಡಿಪಿಆರ್​ ಅನುಮೋದನೆಗೆ ಮನವಿ ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಮನವಿ ಮಾಡಿದ್ದೇವೆ. ಮಹದಾಯಿ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆ ನಂತರ ಘೋಷಣೆ ಮಾಡಲಿದ್ದಾರೆ. ಯೋಜನೆಗೆ ಅಗತ್ಯ ಅನುದಾನ ನೀಡುವಂತೆ ಮನವಿ ಮಾಡಿದ್ದೇವೆ. ಮೇಕೆದಾಟು ಯೋಜನೆ ಬಗ್ಗೆ ಸರ್ಕಾರದ ನಿಲುವಿನ ಬಗ್ಗೆ ಮಾಹಿತಿ ನೀಡಲಾಗಿದೆ. ಗ್ರೀನ್​ ಕಾರಿಡಾರ್ ಬಗ್ಗೆ ಇಂಧನ ಸಚಿವರ ಜತೆ ಚರ್ಚೆ ನಡೆಸಿದ್ದೇವೆ. ಹೆಚ್ಚುವರಿ ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇಂದು (ಏಪ್ರಿಲ್ 5) ಹೇಳಿಕೆ ನೀಡಿದ್ದಾರೆ.

ರಾಜ್ಯದ ಯೋಜನೆಗಳ ಬಗ್ಗೆ ಸಚಿವರೊಂದಿಗೆ ಚರ್ಚೆ ಮಾಡಿದ್ದೇವೆ. ಮೇಕೆದಾಟು ಡಿಪಿಆರ್ ಒಪ್ಪಿಗೆ ನೀಡುವಂತೆ ಮನವಿ ಮಾಡಲಾಗಿದೆ. ಮಹದಾಯಿ ಅಧಿಸೂಚನೆ ಹೊರಡಿಸುವಂತೆ ಮನವಿ ನೀಡಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡುವಂತೆ ಮನವಿ ಮಾಡಲಾಗಿದೆ. ಮೇಕೆದಾಟು ಯೋಜನೆ ಬಗ್ಗೆ ಸರಕಾರ ತೆಗೆದುಕೊಂಡ ನಿಲುವಿನ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ವಿವರಣೆ ನೀಡಿದ್ದಾರೆ.

ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನನ್ನನ್ನು ಕರೆದಿಲ್ಲ: ಬೊಮ್ಮಾಯಿ ಸ್ಪಷ್ಟನೆ

ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನನ್ನನ್ನು ಕರೆದಿಲ್ಲ. ರಾಜ್ಯದ ಯೋಜನೆಗಳ ಕುರಿತು ಚರ್ಚೆ ಮಾಡಲು ಬಂದಿದ್ದೇನೆ. ಈ ಮಧ್ಯೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ. ಮತ್ತೆ ಏನು ಚರ್ಚೆ ಆಗುತ್ತೆ ನೋಡಬೇಕು. ನ್ಯಾಯಸಮ್ಮತವಾಗಿ ಮೇಕೆದಾಟು ಯೋಜನೆ ಮಾಡುತ್ತಿದ್ದೇವೆ. ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ. ತಮಿಳುನಾಡಿಗೆ ಹೆಚ್ಚುವರಿ ನೀರನ್ನು ಬಿಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೌನ ಬಸವರಾಜ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೆಚ್​.ಡಿ. ಕುಮಾರಸ್ವಾಮಿ ಯಾವಾಗ ಮೂಕರಾಗಿದ್ದರು, ಯಾವಾಗ ಮಾತನಾಡಿದ್ದಾರೆ ನನಗೆ ಗೊತ್ತಿದೆ. ಯಾರು ಏನಾದ್ರೂ ಅಂದುಕೊಳ್ಳಲಿ, ಜನ ತೀರ್ಮಾನಿಸುತ್ತಾರೆ. ಹೇಳಿಕೆ ನೀಡುವುದೇ ಆಡಳಿತವಲ್ಲ. ಹಿಜಾಬ್ ವಿವಾದದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಈಗಲೂ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ನಾನು ಯಾವಾಗ ಪ್ರತಿಕ್ರಿಯೆ ನೀಡಬೇಕೋ ನೀಡಿದ್ದೇನೆ. ವೈಯಕ್ತಿಕವಾಗಿ ಹೇಳಿಕೆ ನೀಡಿದರೆ ನಾನು ಪ್ರತಿಕ್ರಿಯಿಸಲ್ಲ. ಇದಕ್ಕೆ ರಾಜ್ಯದ ಜನರು ಪ್ರತಿಕ್ರಿಯೆಯನ್ನು ನೀಡುತ್ತಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೋಲಿಕೆಯೇ ಅಸಂಬದ್ಧ: ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬರಲು ಉದ್ಯಮಿಗಳನ್ನು ಆಹ್ವಾನಿಸಿದ್ದಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು

ಇದನ್ನೂ ಓದಿ: ಪೂರ್ಣ ಅಧಿಕಾರ ಕೊಟ್ರೆ ನೀರಾವರಿ ಯೋಜನೆ ಪೂರ್ತಿ ಮಾಡ್ತೇನೆ; ಇಲ್ಲಾಂದ್ರೆ ಜೆಡಿಎಸ್ ವಿಸರ್ಜನೆ ಮಾಡ್ತೇನೆ- ಹೆಚ್ ಡಿ ಕುಮಾರಸ್ವಾಮಿ

Published On - 9:03 pm, Tue, 5 April 22