AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು
ಹೇಮಾವತಿ ನದಿ, ಹಾಸನ
TV9 Web
| Edited By: |

Updated on:Apr 05, 2022 | 12:57 PM

Share

ಹಾಸನ: ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಬಾಲಕ ನೀರುಪಾಲಾದ ದುರ್ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿತೀರದಲ್ಲಿ ಸಂಭವಿಸಿದೆ. ಹೇಮಾವತಿ ನದಿಯಲ್ಲಿ ಮುಳುಗಿ 17 ವರ್ಷದ ಬಾಲಕ ಪ್ರತೀಶ್ ದುರ್ಮರಣವನ್ನಪ್ಪಿದ್ದಾನೆ. ಹಾಸನದ ಸರ್ಕಾರಿ ಡಿಪ್ಲೊಮಾ ಕಾಲೇಜು ವಿದ್ಯಾರ್ಥಿಯಾಗಿದ್ದ ಪ್ರತೀಶ್ ಹಾಸ್ಟೆಲ್​ನಲ್ಲಿ ನೀರಿನ ಕೊರತೆ ಹಿನ್ನೆಲೆ ನದಿಗೆ ಬಟ್ಟೆ ತೊಳೆಯಲು ತೆರಳಿದ್ದ ಎಂದು ತಿಳಿದುಬಂದಿದೆ.

ಸ್ನೇಹಿತರ ಜತೆ ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ಬಾಲಕನ ಸಾವಿಗೆ ಹಾಸ್ಟೆಲ್​ ಸಿಬ್ಬಂದಿ ಹೊಣೆ ಎಂದು ಆಕ್ರೋಶ ವ್ಯಕ್ತವಾಗಿದೆ. ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಕೇಳಿಬಂದಿದೆ. ಹೊಳೆನರಸೀಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

(Water Scarcity in Diploma College Student Prathish drowned in Hemavati river Hassan GBD)

ಇದನ್ನೂ ಓದಿ: ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು

ಇದನ್ನೂ ಓದಿ: ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟದ ಪ್ರದರ್ಶನ; ಹಾಸನ ಜಿಲ್ಲೆಯ ಶಾಲೆಯ ಬೆಳ್ಳಿ ಹಬ್ಬದಲ್ಲಿ ಮಕ್ಕಳಾದ ಪೋಷಕರು!

Published On - 11:35 pm, Fri, 2 April 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​