ರಾಜ್ಯದಲ್ಲಿ ನೀರಿನ ಬಿಕ್ಕಟ್ಟು: 14 ಅಣೆಕಟ್ಟೆಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಕೇವಲ ಶೇ 56

ಕೃಷ್ಣಾ ಜಲಾನಯನ ಪ್ರದೇಶದಲ್ಲಿನ ಅಣೆಕಟ್ಟೆಗಳಲ್ಲಿ ಶೇ 63 ಸಂಗ್ರಹವಿದ್ದು, ತಕ್ಕ ಮಟ್ಟಿಗೆ ಉತ್ತರ ಕರ್ನಾಟಕದ ಜಿಲ್ಲೆಗಳ ಜನಸಂಖ್ಯೆಯ ಬೇಡಿಕೆಗಳನ್ನು ಪೂರೈಸಲಿದೆ ಎಂದು ವರದಿಯೊಂದು ತಿಳಿಸಿದೆ. ಆದರೆ ಕಾವೇರಿ ಜಲಾನಯನ ಪ್ರದೇಶವು ಶೂನ್ಯ ಒಳಹರಿವು ಮತ್ತು ಪ್ರತಿದಿನ 8,117 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವುದರಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುತ್ತಿದೆ.

ರಾಜ್ಯದಲ್ಲಿ ನೀರಿನ ಬಿಕ್ಕಟ್ಟು: 14 ಅಣೆಕಟ್ಟೆಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಕೇವಲ ಶೇ 56
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Oct 28, 2023 | 1:31 PM

ಬೆಂಗಳೂರು, ಅಕ್ಟೋಬರ್ 28: ನೈಋತ್ಯ ಮುಂಗಾರು ಮಳೆಯ ಕೊರತೆಯ ಪರಿಣಾಮ ಕರ್ನಾಟಕದ ಎಲ್ಲಾ 14 ಪ್ರಮುಖ ಅಣೆಕಟ್ಟೆಗಳಲ್ಲಿ (Karnataka Dams) ನೀರಿನ ಮಟ್ಟ ಕಡಿಮೆಯಾಗಿದೆ. ರಾಜ್ಯವು ನೀರಿನ ಕೊರತೆ(Water Scarcity) ಬಿಕ್ಕಟ್ಟಿನ ಸುಳಿಗೆ ಸಿಲುಕಿದೆ. ಅಕ್ಟೋಬರ್ 26 ರ ಅಂಕಿಅಂಶಗಳ ಪ್ರಕಾರ, 14 ಪ್ರಮುಖ ಅಣೆಕಟ್ಟೆಗಳಲ್ಲಿನ ಒಟ್ಟಾರೆ ನೀರಿನ ಸಾಮರ್ಥ್ಯವು ಅದರ ಸಾಮರ್ಥ್ಯದ ಶೇ 56ರಷ್ಟು ಆಗಿತ್ತು. 2024 ರಲ್ಲಿ ಮುಂದಿನ ಮುಂಗಾರು ಋತುವಿನವರೆಗೆ ಬಳಕೆಗೆ ಕೇವಲ 502 ಟಿಎಂಸಿ ಅಡಿ ನೀರು ಮಾತ್ರವೇ ಉಳಿದಿದೆ. ಅಂದರೆ, ಮುಂದಿನ ಎಂಟು ತಿಂಗಳ ಕಾಲ ಅದೇ ನೀರಿನ ಸಂಗ್ರಹವನ್ನು ಕೃಷಿ, ಗೃಹಬಳಕೆ ಮತ್ತು ಕೈಗಾರಿಕಾ ಬಳಕೆಗಾಗಿ ನಿರ್ವಹಿಸಬೇಕಾಗಿದೆ. ಸರ್ಕಾರಿ ಅಧಿಕಾರಿಗಳು ಪರಿಸ್ಥಿತಿಯನ್ನು ಗಂಭೀರ ಎಂದು ಪರಿಗಣಿಸಿದ್ದಾರೆ. ಮುಂದಿನ ಎರಡು ಮೂರು ತಿಂಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿನ ಅಣೆಕಟ್ಟೆಗಳಲ್ಲಿ ಶೇ 63 ಸಂಗ್ರಹವಿದ್ದು, ತಕ್ಕ ಮಟ್ಟಿಗೆ ಉತ್ತರ ಕರ್ನಾಟಕದ ಜಿಲ್ಲೆಗಳ ಜನಸಂಖ್ಯೆಯ ಬೇಡಿಕೆಗಳನ್ನು ಪೂರೈಸಲಿದೆ ಎಂದು ವರದಿಯೊಂದು ತಿಳಿಸಿದೆ. ಆದರೆ ಕಾವೇರಿ ಜಲಾನಯನ ಪ್ರದೇಶವು ಶೂನ್ಯ ಒಳಹರಿವು ಮತ್ತು ಪ್ರತಿದಿನ 8,117 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವುದರಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುತ್ತಿದೆ.

114.6 ಟಿಎಂಸಿ ಅಡಿ ನೀರಿನ ಸಾಮರ್ಥ್ಯವಿದ್ದರೂ ಹಾರಂಗಿ, ಹೇಮಾವತಿ, ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಲ್ಲಿ 61.6 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಇದರಲ್ಲಿ, ಗೃಹ ಮತ್ತು ಕೈಗಾರಿಕಾ ಉದ್ದೇಶಗಳಿಗಾಗಿ 34 ಟಿಎಂಸಿ ಅಡಿ ನೀರು ಬೇಕಾಗುತ್ತದೆ, ಮತ್ತು ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾದರೆ ಕಷ್ಟವಾಗಲಿದೆ. ಇದರಿಂದಾಗಿ ರೈತರಿಗೆ ಮತ್ತು ಕೃಷಿಗೆ ನೀರಿನ ಸಮಸ್ಯೆಯಾಗಲಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಈ ಮಧ್ಯೆ, ಅಕ್ಟೋಬರ್ 30 ರ ನಂತರ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಮ್ಮ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರೂ, ನಾವು ಇನ್ನೂ ಸುರಕ್ಷಿತವಾಗಿದ್ದೇವೆ. ಬೆಳೆ ಋತುವಿನ ಕೊನೆಯಲ್ಲಿ ಸ್ವಲ್ಪ ಸಮಸ್ಯೆಯಾಗಬಹುದು ಎಂದು ಅಂದಾಜಿಸಿದ್ದೇವೆ. ಆದರೆ ಕುಡಿಯುವ ನೀರಿನ ಹಂಚಿಕೆಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಇದನ್ನೂ ಓದಿ: ನಿಗಮ ಮಂಡಳಿ ನೇಮಕಾತಿ, ಯಾವ ಹುದ್ದೆಗೆ ಎಷ್ಟು ಕಮಿಷನ್? ಪಟ್ಟಿ ಬಿಡುಗಡೆ ಮಾಡಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಬಿಜೆಪಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪ್ರತಿ ಎರಡು ವಾರಗಳಿಗೊಮ್ಮೆ ಗ್ರಾಮೀಣ ನೀರು ಸರಬರಾಜಿಗೆ ನೀರಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಪ್ರಾರಂಭಿಸಿದೆ. ಜತೆಗೆ, ಕುಡಿಯುವ ನೀರಿನ ಬೇಡಿಕೆಗಳನ್ನು ಪೂರೈಸಲು ಪ್ರಮುಖ ಬರಪೀಡಿತ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ನೀರು ಸಂಗ್ರಹಿಸಲು ಪ್ರಾರಂಭಿಸಲು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚನೆಗಳನ್ನು ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ