ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್
ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ. ಅವರು ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದು ಸಿದ್ದರಾಮಯ್ಯ ಬೆನ್ನಿಗೆ ನಿಂತುಕೊಂಡಿದ್ದಾರೆ. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ ಎಂದಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 25: ಮುಡಾ ಪ್ರಕರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿರಬಹುದು. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ. ಆದರೆ ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನಿಖೆಗೆ ಕೋರ್ಟ್ ಆದೇಶ ಕೊಟ್ಟಿದೆ, ತನಿಖೆಯಾಗಲಿ. ಸಿಎಂ ಸಿದ್ದರಾಮಯ್ಯ ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದಿದ್ದಾರೆ.
ಯಾವ ಬ್ಲ್ಯಾಕ್ಮಾರ್ಕ್ ಸಹ ಆಗಿಲ್ಲ. ಮಾರ್ಕೇ ಆಗಿಲ್ಲ, ಬ್ಲ್ಯಾಕ್ಮಾರ್ಕ್ ಎಲ್ಲಿಂದ ಬರುತ್ತೆ. ಚುನಾವಣಾ ಪ್ರಚಾರ ವೇಳೆ ಪ್ರಧಾನಿ ನರೇಂದ್ರ ಮೋದಿ ಮುಡಾ ಪ್ರಸ್ತಾಪ ವಿಚಾರವಾಗಿ ಮಾತನಾಡಿದ್ದು, ರಾಜಕಾರಣ ಮಾಡುವವರು ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಮುಂದಿನ ಹೋರಾಟದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು
ಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಡ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಕೇಂದ್ರ ಸಚಿವರೆಲ್ಲಾ ಅಧಿಕಾರದಲ್ಲಿ ಮುಂದು ಬರುತ್ತಿದ್ದಾರೆ. ಯಾರು ಅಂತ ಮುಂದೆ ಪಟ್ಟಿ ಹೇಳುತ್ತೇನೆ ಎಂದಿದ್ದಾರೆ.
ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ ಎಂದ ಜಮೀರ್
ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ. ಪ್ರಾಸಿಕ್ಯೂಷನ್ ಅನುಮತಿ ರದ್ದು ಮಾಡಿ ಎಂದು ಕೇಳಿದ್ದೆವು. ಗವರ್ನರ್ ಪ್ರಾಸಿಕ್ಯೂಷನ್ಗೆ ಕೊಟ್ಟಿಲ್ಲ ಎಂದು ಬಂದಿದೆ. ತನಿಖೆ ಆಗಲಿ, ಸತ್ಯಾಂಶ ಹೊರಗೆ ಬರುತ್ತೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡಾ ಮಾಡಬಹುದು: ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ
ಬಿಜೆಪಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಸಹಿಸಲಾಗುತ್ತಿಲ್ಲ. ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ. 5 ವರ್ಷ ಸಿದ್ದರಾಮಯ್ಯರನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಮೊದಲು ಹೆಚ್ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ: ಎಂ.ಬಿ.ಪಾಟೀಲ್
ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶದ ಪ್ರತಿ ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಮುಖ್ಯಮಂತ್ರಿ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ ವಿಚಾರವಾಗಿ ಮಾತನಾಡಿದ್ದು, ಮೊದಲು ಹೆಚ್ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ ಆಮೇಲೆ ನೋಡೋಣ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.