ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ. ಅವರು ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದು ಸಿದ್ದರಾಮಯ್ಯ ಬೆನ್ನಿಗೆ ನಿಂತುಕೊಂಡಿದ್ದಾರೆ. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ ಎಂದಿದ್ದಾರೆ.

ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್
ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್
Edited By:

Updated on: Sep 25, 2024 | 6:16 PM

ಬೆಂಗಳೂರು, ಸೆಪ್ಟೆಂಬರ್​ 25: ಮುಡಾ ಪ್ರಕರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿರಬಹುದು. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ. ಆದರೆ ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನಿಖೆಗೆ ಕೋರ್ಟ್ ಆದೇಶ ಕೊಟ್ಟಿದೆ, ತನಿಖೆಯಾಗಲಿ. ಸಿಎಂ ಸಿದ್ದರಾಮಯ್ಯ ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದಿದ್ದಾರೆ.

ಯಾವ ಬ್ಲ್ಯಾಕ್​ಮಾರ್ಕ್ ಸಹ ಆಗಿಲ್ಲ. ಮಾರ್ಕೇ ಆಗಿಲ್ಲ, ಬ್ಲ್ಯಾಕ್​ಮಾರ್ಕ್​ ಎಲ್ಲಿಂದ‌ ಬರುತ್ತೆ. ಚುನಾವಣಾ ಪ್ರಚಾರ ವೇಳೆ ಪ್ರಧಾನಿ ನರೇಂದ್ರ ಮೋದಿ ಮುಡಾ ಪ್ರಸ್ತಾಪ ವಿಚಾರವಾಗಿ ಮಾತನಾಡಿದ್ದು, ರಾಜಕಾರಣ ಮಾಡುವವರು ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಮುಂದಿನ ಹೋರಾಟದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು

ಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಡ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಕೇಂದ್ರ‌ ಸಚಿವರೆಲ್ಲಾ ಅಧಿಕಾರದಲ್ಲಿ ಮುಂದು ಬರುತ್ತಿದ್ದಾರೆ. ಯಾರು ಅಂತ ಮುಂದೆ ಪಟ್ಟಿ ಹೇಳುತ್ತೇನೆ ಎಂದಿದ್ದಾರೆ.

ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ ಎಂದ ಜಮೀರ್​

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ. ಪ್ರಾಸಿಕ್ಯೂಷನ್ ಅನುಮತಿ ರದ್ದು ಮಾಡಿ ಎಂದು ಕೇಳಿದ್ದೆವು. ಗವರ್ನರ್ ಪ್ರಾಸಿಕ್ಯೂಷನ್​ಗೆ ಕೊಟ್ಟಿಲ್ಲ ಎಂದು ಬಂದಿದೆ. ತನಿಖೆ ಆಗಲಿ, ಸತ್ಯಾಂಶ ಹೊರಗೆ ಬರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡಾ ಮಾಡಬಹುದು: ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ

ಬಿಜೆಪಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಸಹಿಸಲಾಗುತ್ತಿಲ್ಲ. ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ. 5 ವರ್ಷ ಸಿದ್ದರಾಮಯ್ಯರನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಮೊದಲು ಹೆಚ್​ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ: ಎಂ.ಬಿ.ಪಾಟೀಲ್

ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶದ ಪ್ರತಿ ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಮುಖ್ಯಮಂತ್ರಿ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ ವಿಚಾರವಾಗಿ ಮಾತನಾಡಿದ್ದು, ಮೊದಲು ಹೆಚ್​ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ ಆಮೇಲೆ ನೋಡೋಣ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us