AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ವಿಐಪಿ ಟಿಕೆಟ್‌ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್!

ಐಪಿಎಲ್ ಪಂದ್ಯಗಳಿಗೆ ಶಾಸಕರಿಗೆ 5 ವಿಐಪಿ ಟಿಕೆಟ್ ನೀಡಬೇಕು ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾದ ಸದನದಲ್ಲಿ ಐಪಿಎಲ್ ಟಿಕೆಟ್​ಗೆ ಬೇಡಿಕೆ ಇಡುವುದು ವಿಧಾನಸಭೆಯ ಘನತೆಗೆ ಕುಂದು ಉಂಟುಮಾಡಿದಂತೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲೂ ಜನರಿಂದ ಆಕ್ರೋಶ ವ್ಯಕ್ತವಾಗಿದೆ.

ಐಪಿಎಲ್ ವಿಐಪಿ ಟಿಕೆಟ್‌ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್!
ಐಪಿಎಲ್ ಟಿಕೆಟ್‌ಗಾಗಿ ಶಾಸಕರ ಪಟ್ಟು: ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್Image Credit source: tv9
ಗಣಪತಿ ಶರ್ಮಾ
|

Updated on:Mar 27, 2026 | 12:21 PM

Share

ಬೆಂಗಳೂರು, ಮಾರ್ಚ್ 27: ಬೆಂಗಳೂರಿನಲ್ಲಿ (Bangalore) ಐಪಿಎಲ್ (IPL 2026) ಕ್ರೇಜ್ ಆರಂಭವಾಗುತ್ತಿದ್ದಂತೆಯೇ, ಇತ್ತ ವಿಧಾನಸೌಧದ ಒಳಗೂ ಟಿಕೆಟ್ ಕಿರಿಕ್ ಶುರುವಾಗಿದೆ. ‘ನಾವು ವಿಐಪಿಗಳು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಪ್ರತಿ ಶಾಸಕರಿಗೂ 5 ವಿಐಪಿ ಟಿಕೆಟ್ ನೀಡಬೇಕು’ ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ಈಗ ರಾಜ್ಯಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ವಿಜಯಾನಂದ ಕಾಶಪ್ಪನವರ್ ಹೇಳಿದ್ದೇನು?

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ವಿಧಾನಸಭೆಯಲ್ಲಿ ಕೆಎಸ್‌ಸಿಎ (KSCA) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಾವು ಜನಪ್ರತಿನಿಧಿಗಳು, ನಮಗೆ ಗೌರವ ಕೊಡಬೇಕು. ಕಳೆದ ಬಾರಿ ನಮ್ಮನ್ನು ಸಾಮಾನ್ಯ ಗ್ಯಾಲರಿಯಲ್ಲಿ ಕೂರಿಸಲಾಗಿತ್ತು. ಕೆಎಸ್‌ಸಿಎ ಸರ್ಕಾರದಿಂದ ಭದ್ರತೆ ಸೇರಿದಂತೆ ಎಲ್ಲಾ ಸೌಲಭ್ಯ ಪಡೆಯುತ್ತದೆ, ಆದರೆ ಶಾಸಕರಿಗೆ ಟಿಕೆಟ್ ನೀಡಲು ಹಿಂದೇಟು ಹಾಕುತ್ತಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಪಡೆಯುವುದು ಒಂದು ನಾಟಕ, ಅಲ್ಲಿ ಬ್ಲಾಕ್ ಮಾರ್ಕೆಟ್ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಕಾಶಪ್ಪನವರ್ ಬೇಡಿಕೆಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಹ ದನಿಗೂಡಿಸಿದ್ದಾರೆ.

ವಿಧಾನಸೌಧದ ಘನತೆಗೆ ತಕ್ಕುದಲ್ಲ: ತೇಜಸ್ವಿ ಸೂರ್ಯ ಖಂಡನೆ

ಶಾಸಕರ ಈ ವಿಐಪಿ ಟಿಕೆಟ್ ಬೇಡಿಕೆಯನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕಟುವಾಗಿ ಟೀಕಿಸಿದ್ದಾರೆ. ಶಾಸಕರ ಈ ಬೇಡಿಕೆ ಅವರ ಆದ್ಯತೆಗಳು ಏನಾಗಿವೆ ಎಂಬುದನ್ನು ತೋರಿಸುತ್ತದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾದ ಸದನದಲ್ಲಿ ಐಪಿಎಲ್ ಟಿಕೆಟ್‌ಗಾಗಿ ಪಟ್ಟು ಹಿಡಿಯುವುದು ವಿಧಾನಸೌಧದ ಘನತೆಗೆ ತಕ್ಕುದಲ್ಲ. ಜನಸಾಮಾನ್ಯರು ಹಣ ನೀಡಿ ಟಿಕೆಟ್ ಖರೀದಿಸುವಾಗ ಶಾಸಕರಿಗೆ ಯಾಕೆ ಉಚಿತವಾಗಿ ನೀಡಬೇಕು? ಇದು ಅವರಲ್ಲಿರುವ ಅಹಂಕಾರದ ಪರಮಾವಧಿ ಎಂದು ಖಂಡಿಸಿದ್ದಾರೆ.

ತೇಜಸ್ವಿ ಸೂರ್ಯ ಎಕ್ಸ್ ಸಂದೇಶ

ಐಪಿಎಲ್ ಟಿಕೆಟ್ ಬೇಡಿಕೆಗೆ ಡಿಕೆಶಿ ಶಿವಕುಮಾರ್ ಬೆಂಬಲ

ಆದರೆ, ಈ ವಿಚಾರದಲ್ಲಿ ಶಾಸಕರ ಬೆಂಬಲಕ್ಕೆ ನಿಂತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರು ಸರ್ಕಾರದ ವ್ಯವಸ್ಥೆಯ ಒಂದು ಭಾಗ. ಅವರಿಗೆ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ನಾನು ಈ ಬಗ್ಗೆ ಕೆಎಸ್‌ಸಿಎ ಪದಾಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ತೇಜಸ್ವಿ ಸೂರ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿ, ಸೂರ್ಯ ಮೊದಲು ಅವರ ಪಕ್ಷದ ಶಾಸಕರಿಗೆ ಬುದ್ಧಿ ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸದನದಲ್ಲೂ ಐಪಿಎಲ್ ಟಿಕೆಟ್ ಬಗ್ಗೆ ಚರ್ಚೆ: ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರವನ್ನು ಬೇಡಿದ ಶಾಸಕರು!

ಈ ಬೆಳವಣಿಗೆಯ ಬೆನ್ನಲ್ಲೇ, ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ನೀಡುವ ನಿಟ್ಟಿನಲ್ಲಿ ಕೆಎಸ್‌ಸಿಎಗೆ ಸೂಚನೆ ನೀಡಿ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:10 pm, Fri, 27 March 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ