ಬೆಂಗಳೂರು ಗ್ರಾಮಾಂತರ: ಸಿದ್ದರಾಮಯ್ಯ ಆಡಳಿತದಲ್ಲಿ ಜಾರಿಗೆ ತಂದಿದ್ದ ವಿವಾದಿತ ಟಿಪ್ಪು ಜಯಂತಿಯನ್ನು ಇತ್ತೀಚೆಗಷ್ಟೇ ಬಿಜೆಪಿ ಸರ್ಕಾರ ರದ್ದು ಮಾಡಿತ್ತು. ಇದೇ ಬೆನ್ನಲ್ಲೇ ಇದೀಗ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಟಿಪ್ಪು ಜಯಂತಿ ಆಚರಿಸುವುದಾಗಿ ವಿವಾದಿತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.
ಹಲವು ಬಾರಿ ನನಗೆ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸಾಕಷ್ಟು ಜನ ಹೇಳಿದ್ರು. ಆದ್ರೆ ಈ ಬಾರಿ ಟಿಪ್ಪು ಜಯಂತಿಯನ್ನ ನಾವೇ ಮುಂದೆ ನಿಂತು ಮಾಡುತ್ತೇವೆ. ಹೊಸಕೋಟೆ ಬಳಿಯ ತಮ್ಮರಸನಹಳ್ಳಿಯಲ್ಲಿ ಟಿಪ್ಪು ಜಯಂತಿ ಆಚರಿಸುವುದಾಗಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಹೇಳಿದ್ದಾರೆ.
ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಈ ರೀತಿ ಹೇಳುತ್ತಿದ್ದಂತೆ ಶರತ್ ಮೇಲೆ ಹಣ ಸುರಿದು ಅಭಿಮಾನಿ ಹರ್ಷ ವ್ಯಕ್ತಪಡಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶರತ್ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
Published On - 10:22 am, Fri, 25 October 19