KSRTC Logo: ಯಾರಿಗೆ ಟ್ರೇಡ್​ಮಾರ್ಕ್​: ನಮಗೆ ಯಾವ ಆದೇಶವೂ ಬಂದಿಲ್ಲ ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ ಸ್ಪಷ್ಟನೆ

ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ. ಇಂಥ ಯಾವುದೇ ಸೂಚನೆ ಅಥವಾ ಆದೇಶ ನಮಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

KSRTC Logo: ಯಾರಿಗೆ ಟ್ರೇಡ್​ಮಾರ್ಕ್​: ನಮಗೆ ಯಾವ ಆದೇಶವೂ ಬಂದಿಲ್ಲ ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 04, 2021 | 7:10 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಟ್ರೇಡ್​ ಮಾರ್ಕ್​ ಬಳಸುವಂತಿಲ್ಲ ಎಂಬ ಆದೇಶವನ್ನು ಕೇಂದ್ರದ ಟ್ರೇಡ್​ ಮಾರ್ಕ್ ನೋಂದಣಿ ಇಲಾಖೆ ನೀಡಿರುವ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಟ್ರೇಡ್​ ಮಾರ್ಕ್ ರಿಜಿಸ್ಟ್ರಿ ಸಂಸ್ಥೆಯು ಬುಧವಾರ ಅಂತಿಮ ತೀರ್ಪು ತೀರ್ಪು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ. ಇಂಥ ಯಾವುದೇ ಸೂಚನೆ ಅಥವಾ ಆದೇಶ ನಮಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್​ಟಿಸಿಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುಧ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ ಮುಂದೆ ಮನವಿ ಸಲ್ಲಿಸಿದೆ. ಆದರೆ ಈ ಕುರಿತು ಈವರೆಗೆ ಯಾವುದೇ ಅಂತಿಮ ಆದೇಶ ಹೊರಡಿಸಿಲ್ಲ ಎಂದು ಅವರು ಹೇಳಿದ್ದಾರೆ.

ಈ ಮಂಡಳಿಯನ್ನು ಏಪ್ರಿಲ್ 4ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಿದೆ. ಮಂಡಳಿಯ ಎದುರು ಬಾಕಿಯಿರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್‌ಆರ್‌ಟಿಸಿ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ. ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲು ಅವಕಾಶವಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾದವು. ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧ ಇರುವುದಿಲ್ಲ. ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ ಸಂಸ್ಥೆಗೆ ಅಥವಾ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತ ಉತ್ತರ ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

(We Dont Get Any Orders from Trade Mark Registry Says KSRTC MD Shivayogi Kalasad)

ಇದನ್ನೂ ಓದಿ: KSRTC Logo: ನಮ್ಮ ಕೆಎಸ್​ಆರ್​ಟಿಸಿಯಿಂದ ಕೇರಳದ ಸಾರಿಗೆಗೆ ನಷ್ಟವೇನಿಲ್ಲ, ನಾವು ಪ್ರತಿಸ್ಪರ್ಧಿಗಳೂ ಅಲ್ಲ; ವಿವಾದ ಅನಗತ್ಯ ಎಂದ ಲಕ್ಷ್ಮಣ ಸವದಿ

ಇದನ್ನೂ ಓದಿ: KSRTC Logo: ಕೆಎಸ್​ಆರ್​ಟಿಸಿಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಹೆಸರಿಡಲು ಸಂಸದೆ ಸುಮಲತಾ ಅಂಬರೀಷ್ ಸಲಹೆ

Published On - 7:09 pm, Fri, 4 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್