ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ದಾಖಲೆಗಳ ನೋಂದಣಿಗೆ ಕಾವೇರಿ-2 ಜಾರಿ

ನೊಂದಣಿ ಇಲಾಖೆಯಲ್ಲಿ ಬಹಳ ಅಸ್ತವ್ಯಸ್ತತೆ ಇದೆ. ರಿಜಿಸ್ಟ್ರೇಷನ್ ಸಂದರ್ಭದಲ್ಲಿ ಬಹಳಷ್ಟು ವಿಳಂಬ ಆಗುತ್ತಿದೆ. ಜನರು ಅವರ ಆಸ್ತಿ ಅವರು ಮಾರಾಟ ಮಾಡುವುದಕ್ಕೆ ಪಡಬಾರದ ಯಾತನೆ ಅನುಭವಿಸುತ್ತಿದ್ದಾರೆ. ಹಾಗೇ ಜಮೀನು ಅಕ್ರಮಗಳನ್ನು ಕೂಡ ತಡೆಯುವ ನಿಟ್ಟಿನಲ್ಲಿ ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ತರಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ದಾಖಲೆಗಳ ನೋಂದಣಿಗೆ ಕಾವೇರಿ-2 ಜಾರಿ
ಸಚಿವ ಕೃಷ್ಣಭೈರೇಗೌಡ
Follow us
ವಿವೇಕ ಬಿರಾದಾರ
|

Updated on: Jun 19, 2023 | 12:00 PM

ಬೆಂಗಳೂರು: ನೋಂದಣಿ ಇಲಾಖೆಯಲ್ಲಿ (Registration Department) ಕೆಲವು ಬದಲಾವಣೆ ತರಲಾಗಿದೆ. ಏಪ್ರಿಲ್​ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದ್ದು, 251 ನೋಂದಣಿ ಕಚೇರಿಗಳಲ್ಲಿ ಇಂದು (ಜೂ.19) ಸಂಜೆಯೊಳಗೆ ಕಾವೇರಿ-2 (Kaveri-2) ಜಾರಿಯಾಗಲಿದೆ. ಎಲ್ಲಾ ದಾಖಲೆಗಳನ್ನು ಕಾವೇರಿ-2ನಲ್ಲೇ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಆನ್​​ಲೈನ್​​ನಲ್ಲೇ ದಾಖಲೆ ಪರಿಶೀಲಿಸ್ತಾರೆ. ನೋಂದಣಿ ಶುಲ್ಕವನ್ನೂ ಆನ್​​ಲೈನ್​​ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ರಾಜ್ಯ ಸರ್ಕಾರಕ್ಕೂ ಕೂಡ ರಿಜಿಸ್ಟ್ರೇಷನ್ ಬಗ್ಗೆ ಮಾಹಿತಿ ಸಿಗಲಿದೆ. ಅಲ್ಲದೇ ಜಮೀನು ಅಕ್ರಮಗಳನ್ನು ಕೂಡ ತಡೆಯಬಹುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ (Krishnabai Gowda) ಹೇಳಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯಾರದ್ದೋ ಜಮೀನನ್ನು ಇನ್ನಾರಿಗೋ ನೋಂದಣಿ ಮಾಡಲು ಆಗಲ್ಲ. ಆಡಳಿತ ಸುಧಾರಣೆ ಆಗಬೇಕು, ಜನರಿಗೆ ಸರ್ಕಾರದ ಜೊತೆಗೆ ಸಂಪರ್ಕ ಇದ್ದಾಗ ವಿಳಂಬ ಇಲ್ಲದೆ ಕೆಲಸ ಆಗಬೇಕು ಎಂಬುದು ಸರ್ಕಾರದ ಆಧ್ಯತೆ. ಜನರು ಹಾಗೂ ಸರ್ಕಾರದ ನಡುವೆ ರಿಜಿಸ್ಟ್ರೇಷನ್ ಅತ್ಯಂತ ಪ್ರಮುಖ ಭಾಗ. ನೊಂದಣಿ ಇಲಾಖೆಯಲ್ಲಿ ಬಹಳ ಅಸ್ತವ್ಯಸ್ತತೆ ಇದೆ. ರಿಜಿಸ್ಟ್ರೇಷನ್ ಸಂದರ್ಭದಲ್ಲಿ ಬಹಳಷ್ಟು ವಿಳಂಬ ಆಗುತ್ತಿದೆ. ಜನರು ಅವರ ಆಸ್ತಿ ಅವರು ಮಾರಾಟ ಮಾಡುವುದಕ್ಕೆ ಪಡಬಾರದ ಯಾತನೆ ಅನುಭವಿಸಿದ್ದಾರೆ. ಬಹಳ ವರ್ಷಗಳ ಸುಧಾರಣೆಯಿಂದ ಇದನ್ನು ಬಗೆಹರಿಸಲು ಕಾವೇರಿ-2 ಎಂಬ ಪದ್ದತಿ ತರಲಾಗಿದೆ. ಕಾವೇರಿ-೨ ವ್ಯವಸ್ಥೆ ಬಗ್ಗೆ ಅನುಕೂಲ-ಅನಾನುಕೂಲ ಎರಡೂ ಆಗುತ್ತಿದೆ ಎಂಬ ಮಾಹಿತಿ ಇದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಕಾವೇರಿ-1 ಇರುವಾಗ ಸರಾಸರಿ 65 ನೋಂದಣಿ ಆಗುತ್ತಿತ್ತು. ಕಾವೇರಿ-2 ಬಂದ ಮೇಲೆ ಸರಾಸರಿ 65 ನೋಂದಣಿ ಆಗಿದೆ. ಒಂದು ದಿನ 132 ಡಾಕ್ಯುಮೆಂಟ್ ಕೂಡ ರಿಜಿಸ್ಟ್ರೇಷನ್ ಆಗಿವೆ. ಸಿಸ್ಟಮ್​ನಲ್ಲಿ ಕೆಪ್ಯಾಸಿಟಿ ಇದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಎಂದು ತಿಳಿಸಿದರು.

ಇದನ್ನೂ ಓದಿ: ಸರ್ಕಾರಕ್ಕೆ ಶಾಕ್​ ನೀಡಿದ ಗುತ್ತಿಗೆದಾರರ ಸಂಘ: ಬಾಕಿ ಬಿಲ್​ ಪಾವತಿಸದಿದ್ದರೆ ಎಲ್ಲ ಕಾಮಗಾರಿಗಳು ಬಂದ್

ನೋಂದಣಿ ಪ್ರಕ್ರಿಯೆಯಿಂದ 2022 ಮೇ 1024 ಕೋಟಿ ರೂ. ಆದಾಯ ಬಂದಿತ್ತು. 2023 ರ ಮೇ ನಲ್ಲಿ 1357 ಕೋಟಿ ರೂ. ಆದಾಯ ಬಂದಿದೆ. ಕಳೆದ ಜೂನ್ ತಿಂಗಳಲ್ಲಿ 721 ಕೋಟಿ ರೂ. ಆದಾಯ ಬಂದಿತ್ತು. ಈ ಜೂನ್ ತಿಂಗಳಲ್ಲಿ 840 ಕೋಟಿ ರೂ. ಆದಾಯ ಬಂದಿದೆ ಎಂದು ತಿಳಿಸಿದ್ದಾರೆ.

ಗೈಡೆನ್ಸ್ ವ್ಯಾಲ್ಯೂ 2018 ರಿಂದ ಇದುವರೆಗೆ ರಿವೈಸ್ ಆಗಿಲ್ಲ. ಇದರಿಂದ ರೈತರಿಗೂ ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಗೈಡೆನ್ಸ್ ವ್ಯಾಲ್ಯೂ ರಿವಿಷನ್ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ತೇವೆ. ಮಾರ್ಕೆಟ್ ವ್ಯಾಲ್ಯೂಗೆ ತಕ್ಕಂತೆ ಗೈಡೆನ್ಸ್ ವ್ಯಾಲ್ಯೂ ಬದಲಾವಣೆ ಮಾಡುತ್ತೇವೆ. ಒಂದೇ ಸಲ ಹೆಚ್ಚಳ ಮಾಡಲು ಸಾಧ್ಯವಿಲ್ಲ. ನಾವಿನ್ನೂ ಕೂಡ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ