PU Exams 2021: ಪಿಯು ಪರೀಕ್ಷೆಯನ್ನು ಜುಲೈನಲ್ಲಿ ನಡೆಸಲು ಸಿದ್ಧತೆ ನಡೆಸಿದ್ದೇವೆ; ಕೇಂದ್ರ ಸರ್ಕಾರಕ್ಕೆ ತಿಳಿಸಿದ ರಾಜ್ಯ
Karnataka PUC Board Exam 2021: ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳಲು 75 ದಿನಗಳ ಅಗತ್ಯವಿದೆ. ಪರೀಕ್ಷೆ ಪಠ್ಯ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗ ಮತ್ತೊಮ್ಮೆ ಪಠ್ಯ ಕಡಿತ, ಪ್ರಶ್ನೆಪತ್ರಿಕೆ ಬದಲಾವಣೆ ಮಾಡುವುದು ಕಷ್ಟಕರವಾಗುತ್ತದೆ.
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮತ್ತು ಸಿಇಟಿ ನಡೆಸುವ ಬಗ್ಗೆ ಕರ್ನಾಟಕದ ಅಭಿಪ್ರಾಯ ಕೇಳಿದ್ದ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯಗಳನ್ನು ತಿಳಿಸಿದೆ. ರಾಜ್ಯದಲ್ಲಿ ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳಲು 75 ದಿನಗಳ ಅಗತ್ಯವಿದೆ. ಪರೀಕ್ಷೆ ಪಠ್ಯ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗ ಮತ್ತೊಮ್ಮೆ ಪಠ್ಯ ಕಡಿತ, ಪ್ರಶ್ನೆಪತ್ರಿಕೆ ಬದಲಾವಣೆ ಮಾಡುವುದು ಕಷ್ಟಕರವಾಗುತ್ತದೆ. ಕೇಂದ್ರದ ಸಲಹೆ, ಸಭೆ ನಂತರ ಪರೀಕ್ಷಾ ಪದ್ಧತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಮೇ 23ರಂದು ಕೇಂದ್ರ ಶಿಕ್ಷಣ ಮಂತ್ರಿ ರಮೇಶ್ ಫೋಖ್ರಿಯಾಲ್ ನಿಶಾಂಕ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಲು ಕೈಗೊಂಡಿದ್ದ ಸಭೆಯಲ್ಲಿ ರಾಜ್ಯದ ಶಿಕ್ಷಣ ಮಂತ್ರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಕೇಂದ್ರದ ಸಲಹೆ ಹಾಗೂ ಸಭೆ ಬಳಿಕ ಪರೀಕ್ಷಾ ಪದ್ದತಿ ಹಾಗೂ ಪಠ್ಯ ಕಡಿತದ ಬಗ್ಗೆ ಚಿಂತನೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜತೆಗೆ ಪಠ್ಯವನ್ನೂ ಸಹ ರೂಪಿಸಲಾಗಿದೆ. ಮತ್ತೆ ಈಗ ಪಠ್ಯ ಕಡಿತ ಪ್ರಶ್ನೆ ಪತ್ರಿಕೆ ಬದಲಾವಣೆ ಮಾಡುವುದು ಕಷ್ಟವಾಗುತ್ತದೆ ಎಂದು ತಿಳಿಸಿರುವ ರಾಜ್ಯ ಸರ್ಕಾರ, ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆಯ ನಂತರವೇ ವೃತ್ತಿಪರ ಕೋರ್ಸ್‌ಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವಂತೆ ಮನವಿ ಮಾಡಿದೆ. ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೀಡಿದ ಸಲಹೆಯನ್ನು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಒಂದೇ ಬಾರಿ ಬಳಸುವ ಪ್ಲಾಸ್ಟಿಕ್ ನಿವಾರಣೆಗೆ ಟಾಸ್ಕ್ಫೋರ್ಸ್ ರಚನೆ ಕರ್ನಾಟಕದಲ್ಲಿ ಒಂದೇ ಬಾರಿ ಬಳಸುವ ಪ್ಲಾಸ್ಟಿಕ್ ನಿವಾರಣೆಗೆ ವಿಶೇಷ ಟಾಸ್ಕ್ಫೋರ್ಸ್ ರಚಿಸಲಾಗಿದೆ. ಈ ಕುರಿತು ಕಾರ್ಯ ಯೋಜನೆ ಸಿದ್ಧಪಡಿಸಲು 15 ಇಲಾಖೆಗಳ ಉನ್ನತ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ.
ಇದನ್ನೂ ಓದಿ: ಕೊವಿಡ್ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಕಾಳಜಿ ವಹಿಸಿ; ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ
(We prepared to conduct PUC exams in July says Karnataka govt to Centre)
Published On - 9:40 pm, Tue, 25 May 21