ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರು ನವೆಂಬರ್ ತಿಂಗಳಿನಿಂದ ಪೂರೈಕೆ: ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿಗಳು ನೀಡಿದ ಭರವಸೆ ನವೆಂಬರ್​​ನಲ್ಲಿ ಜಾರಿಗೆ ಬರಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.​

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರು ನವೆಂಬರ್ ತಿಂಗಳಿನಿಂದ ಪೂರೈಕೆ: ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Feb 06, 2024 | 11:35 AM

ಮೈಸೂರು, ಫೆಬ್ರವರಿ 06: ಸರ್ಕಾರಿ ಶಾಲೆಗಳಿಗೆ (Government School) ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು (Free Electricity and water) ನವೆಂಬರ್​ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ (Mysore) ಸುದ್ದಿಗೋಷ್ಠಿ ಮಾತನಾಡಿದ ಅವರು, ಇದರಿಂದ ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದು. ಎಷ್ಟೋ ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಉಚಿತವಾಗಿ ವಿದ್ಯುತ್​ ಹಾಗೂ ನೀರು ನೀಡಿದರೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ. ಎಷ್ಟೋ ಶಾಲೆಗಳು ವಿದ್ಯುತ್ ಬಿಲ್‌ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ. ಇದೀಗ ಇದೆಲ್ಲಕ್ಕೂ ಸಹಾಯವಾಗಲಿದೆ. ಇನ್ನು ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಕೊಡುತ್ತೇವೆ. ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಹಾಕಿ ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ. ಮಕ್ಕಳ ಪೌಷ್ಟಿಕಾಂಶ ಜಾಸ್ತಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ನನ್ನ ಇಲಾಖೆ ತುಂಬಾ ದೊಡ್ಡದು. ಮುಖ್ಯಮಂತ್ರಿಗಳು ನನಗೆ ಬೇರೆ ಖಾತೆ ನಿಗದಿ ಮಾಡಿದ್ದರು. ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಟಫ್ ಇಲಾಖೆ ಕೊಡಿ ಅಂತ ಹೇಳಿದರು. ಇದಕ್ಕೆ ರಣದೀಪ್​ ಸಿಂಗ್​ ಸುರ್ಜೇವಾಲ ಅವರೂ ಒಪ್ಪಿದರು. ಡಿಕೆ ಶಿವಕುಮಾರ್​ ಅವರು ನಮ್ಮ ತಂದೆಯವರಿಗೆ ಆತ್ಮೀಯರು. ನನ್ನ ಇಲಾಖೆ ಸವಾಲಿನ ಇಲಾಖೆ, ಸಮಸ್ಯೆಗಳೂ ಇವೆ ಎಂದರು.

ಇದನ್ನೂ ಓದಿ: ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋದ ಸರ್ಕಾರಿ ಶಾಲೆಯ ಹೆಡ್​ ಮಾಸ್ಟರ್, ವಿಡಿಯೋ ವೈರಲ್​​

ರಾಜ್ಯದಲ್ಲಿ ಸರ್ಕಾರಿ ಶಾಲೆಗಳೇ 58,000 ಶಾಲೆಗಳಿವೆ. ಒಟ್ಟು 1.20 ಕೋಟಿ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣದಲ್ಲಿ ಅವಕಾಶ ಬಹಳ ಮುಖ್ಯ. ಮೂರು ಪರೀಕ್ಷೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ದ್ವಿತೀಯ ಪಿಯುಸಿಯಲ್ಲಿ ಮೂರನೇ ಪರೀಕ್ಷೆಗೆ 1.20 ಲಕ್ಷ ವಿದ್ಯಾರ್ಥಿಗಳು ಹಾಜರಾದರು. ಈ ಪೈಕಿ 42,000 ವಿದ್ಯಾರ್ಥಿಗಳು ಪಾಸಾದರು. ಎಸ್‌ಎಸ್‌ಎಲ್‌‌ಸಿಗೂ ಇದೇ ವ್ಯವಸ್ಥೆ ಜಾರಿಗೆ ತಂದಿದ್ದೇವೆ ಮಾರ್ಕ್ಸ್ ಕಾರ್ಡ್‌ನಲ್ಲಿ ಸಪ್ಲಿಮೆಂಟರಿ ಅನ್ನುವ ಪದ ಬಳಕೆ ನಿಷೇಧಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಫೆ.06) ಮೈಸೂರಿನಲ್ಲಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ‌ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್​ ಆವರಣದಲ್ಲಿ ಕಾರ್ಯಕ್ರಮ ನಡೆದಿದೆ.

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ​& ನೀರು ಘೋಷಿಸಿದ್ದ ಸಿದ್ದರಾಮಯ್ಯ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆ ಬರುವ ನವೆಂಬರ್​ಗೆ ಈಡೇರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು