ಅಡಕೆ ಬೆಳೆಗೆ ನಿಗದಿ ಪಡಿಸಿದ ಅಂದಾಜು ವೆಚ್ಚ ಹೆಚ್ಚಳಕ್ಕೆ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ದೆಹಲಿಗೆ ನಿಯೋಗ: ಆರಗ ಜ್ಞಾನೇಂದ್ರ

ಕೇಂದ್ರ ಸರಕಾರವು ನಿಗದಿಪಡಿಸಿದ ಅಡಕೆ ಬೆಲೆಯ ಅಂದಾಜು ವೆಚ್ಚವನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ, ಒತ್ತಾಯಿಸಲು ಕೇಂದ್ರಕ್ಕೆ ನಿಯೋಗವನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

ಅಡಕೆ ಬೆಳೆಗೆ ನಿಗದಿ ಪಡಿಸಿದ ಅಂದಾಜು ವೆಚ್ಚ ಹೆಚ್ಚಳಕ್ಕೆ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ದೆಹಲಿಗೆ ನಿಯೋಗ: ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 18, 2022 | 7:05 PM

ಬೆಂಗಳೂರು: ಕೇಂದ್ರ ಸರಕಾರವು (Central Government) ನಿಗದಿಪಡಿಸಿದ ಅಡಕೆ ಬೆಲೆಯ (Arecanut Price) ಅಂದಾಜು ವೆಚ್ಚವನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ, ಒತ್ತಾಯಿಸಲು ಕೇಂದ್ರಕ್ಕೆ ನಿಯೋಗವನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga jnanendra) ಹೇಳಿದ್ದಾರೆ.  ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ-ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಯನ್ನೊದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಕೆ ಅಂದಾಜು ವೆಚ್ಚ ರೂಪಾಯಿ 25 ರಸ್ಟಿದ್ದು, ಸುಮಾರು ಆರು ವರ್ಷಗಳ ಹಿಂದೆ ನಿಗದಿ ಪಡಿಸಲಾಗಿದೆ ಹಾಗೂ ಪುನಃ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು. ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಅಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿದೆ ಎಂದು ತಿಳಿಸಿದರು.

ಇದನ್ನು ಓದಿ: ವೇದಿಕೆಯ ಮೇಲೆ ಪಠ್ಯಪುಸ್ತಕ ಪ್ರತಿ ಹರಿದು ಬಿಸಾಕಿದ ಡಿಕೆ ಶಿವಕುಮಾರ್

ವಿದೇಶದಿಂದ ಆಮದಾಗುವ ಅಡಿಕೆ, ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟ ವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಆತ್ಯುಕೃಷ್ಟ ವಾಗಿದೆ ಮತ್ತು ಪ್ರಮಾಣೀಕೃತ. ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು, ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:05 pm, Sat, 18 June 22

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್