ವಕ್ಫ್ ವಿರುದ್ಧ ಯತ್ನಾಳ್ ಪ್ರತ್ಯೇಕ ಹೋರಾಟದ ಬಗ್ಗೆ ಅಚ್ಚರಿ ಮಾತುಗಳನ್ನಾಡಿದ ವಿಜಯೇಂದ್ರ

ಬಿಜೆಪಿ ರಾಜ್ಯದ ರೈತರ ಪರ ಹೋರಾಟ ನಡೆಸುವುದಾಗಿ ಘೋಷಿಸಿದೆ. ವಕ್ಫ್ ನೋಟಿಸ್‌ಗಳ ವಿಚಾರದಲ್ಲೂ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ವಕ್ಫ್​​​​​​, ರೈತರ ವಿಚಾರವಾಗಿ ಯಾರೇ ಹೋರಾಟ ಮಾಡಿದ್ರೂ ಬೆಂಬಲವಿದೆ. ಬಸನಗೌಡ ಯತ್ನಾಳ್​ ಕೂಡ ನಮ್ಮ ಪಕ್ಷದವರೇ ತಾನೇ ಎಂದು ಹೇಳಿದ್ದಾರೆ.

ವಕ್ಫ್ ವಿರುದ್ಧ ಯತ್ನಾಳ್ ಪ್ರತ್ಯೇಕ ಹೋರಾಟದ ಬಗ್ಗೆ ಅಚ್ಚರಿ ಮಾತುಗಳನ್ನಾಡಿದ ವಿಜಯೇಂದ್ರ
ವಕ್ಫ್ ವಿರುದ್ಧ ಯತ್ನಾಳ್ ಪ್ರತ್ಯೇಕ ಹೋರಾಟದ ಬಗ್ಗೆ ಅಚ್ಚರಿ ಮಾತುಗಳನ್ನಾಡಿದ ವಿಜಯೇಂದ್ರ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 15, 2024 | 3:36 PM

ಬೆಂಗಳೂರು, ನವೆಂಬರ್ 15: ವಕ್ಫ್​​​​​​, ರೈತರ ವಿಚಾರವಾಗಿ ಯಾರೇ ಹೋರಾಟ ಮಾಡಿದರೂ ಬೆಂಬಲವಿದೆ. ಶಾಸಕ ಬಸನಗೌಡ ಯತ್ನಾಳ್​ ಕೂಡ ನಮ್ಮ ಪಕ್ಷದವರೇ ತಾನೇ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ (by Vijayendra) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ವಾರದಿಂದ ವಕ್ಫ್ ನೋಟಿಸ್​​​​ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಎರಡು ಹಂತದಲ್ಲಿ ಹೋರಾಟ ಮಾಡಲು ಬಿಜೆಪಿ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.

ಬಿಜೆಪಿ ರೈತರ ವಿಚಾರದಲ್ಲಿ ಹೋರಾಟದಿಂದ ಹಿಂದೆ ಸರಿಯಲ್ಲ

ಅಧಿವೇಶನ ಆರಂಭದ ದಿನ ಬೆಳಗಾವಿಯಲ್ಲಿ ರೈತರ ಜೊತೆ ಹೋರಾಟ ಮಾಡುತ್ತೇವೆ. 2ನೇ ಹಂತದಲ್ಲಿ ಹೋರಾಡಲು ಮೂರು ತಂಡಗಳನ್ನು ರಚಿಸಲಾಗಿದೆ. ರೈತರ ಪರವಾಗಿ ಯಾರುಬೇಕಾದರೂ ಹೋರಾಟ ಮಾಡಬಹುದು. ಅದಕ್ಕೆ ಯಾವುದೇ ಮುಜುಗರ ಇಲ್ಲ, ನಮ್ಮ ತಕರಾರರು ಕೂಡ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ರೈತರಿಗೆ ವಕ್ಫ್ ನೋಟಿಸ್: ಬಿಜೆಪಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ

ರಾಜ್ಯದ ರೈತರ ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರ ಸ್ಪಷ್ಟ ಉತ್ತರ ನೀಡುವವರೆಗೂ ನಮ್ಮ ಹೋರಾಟ ನಿರಂತರ. ತಂಡದಲ್ಲಿ ಎಲ್ಲ ಹಿರಿಯರು, ಶಾಸಕರು, ಕೇಂದ್ರ ಸಚಿವರು ಇರುತ್ತಾರೆ. ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು. ಬಿಜೆಪಿ ರೈತರ ವಿಚಾರದಲ್ಲಿ ಹೋರಾಟದಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ನೇರವಾಗಿ ಬಿಜೆಪಿ ಮೇಲೆ ಆರೋಪ ಹೊರಿಸಿದ್ದಾರೆ. ವಾಸ್ತವಿಕವಾಗಿ ಸಿಎಂ ಮತ್ತು ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. 5-6 ಹಿರಿಯ ಮುಖಂಡರಿಂದ ಸಿದ್ದರಾಮಯ್ಯರನ್ನು ಇಳಿಸಬೇಕು ಅಂತಾ ಕಾಂಗ್ರೆಸ್​ನಲ್ಲೇ ಪ್ರಯತ್ನ ನಡೆದಿದೆ ಎಂದು ತಿರುಗೇಟು ನೀಡಿದ್ದಾರೆ.

ರಾಜೀನಾಮೆ ಸನ್ನಿಹಿತವಾಗಿದೆ ಎಂದು ಸಿಎಂಗೂ ಮನವರಿಕೆಯಾಗಿದೆ

ಕಾಂಗ್ರೆಸ್​ನ ಘಟಾನುಘಟಿಗಳು ಸಾವಿರಾರು ಕೋಟಿ ರೂ. ಹಣ ಇಟ್ಟುಕೊಂಡು ಕಾಂಗ್ರೆಸ್ ಶಾಸಕರನ್ನೇ ಖರೀದಿಸುತ್ತಿದ್ದಾರೆಂಬ ಮಾಹಿತಿ ನಮಗೂ ಬಂದಿದೆ. ನಮಗೆ ಮಾಹಿತಿ ಬಂದಿದೆ ಅಂತಾದರೆ ಸಹಜವಾಗಿ ಸಿಎಂಗೂ ಬಂದಿರುತ್ತೆ. ಕಾಂಗ್ರೆಸ್ ಮುಖಂಡರ ಮೇಲೆ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿಯ ಮೇಲೆ ಸಿಎಂ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜೀನಾಮೆ ಸನ್ನಿಹಿತವಾಗಿದೆ ಎಂದು ಸಿಎಂಗೂ ಮನವರಿಕೆಯಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್