ಬೆಂಗಳೂರು: ವಿಶ್ವದಲ್ಲಿ ಭಾರತ ಅತಿ ಹೆಚ್ಚು ಜನ ಸಂಖ್ಯೆ ಹೊಂದಿರುವ ಎರಡನೇ ದೇಶ. ಕಳೆದ ಎರಡು ವರ್ಷಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಇಂಡಸ್ಟ್ರಿಯಲ್ ರೋಬೋಟ್ ಟೆಕ್ನಾಲಜಿಗೆ ಮಹತ್ವ ನೀಡಿದ್ದೇವೆ. ಐಟಿಐ ಕಾಲೇಜುಗಳ ಉನ್ನತೀಕರಣ ಮಾಡಿದ್ದೇವೆ ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ವಿಶ್ವ ಯುವ ಕೌಶಲ್ಯ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಯುವಕರ ಕೌಶಲ್ಯ ಹೆಚ್ಚಿಸಲು ವರ್ಚುವಲ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದೇವೆ. ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 10 ಮಿಲಿಯನ್ ಉದ್ಯೋಗ ಸೃಷ್ಟಿ ಮಾಡುತ್ತೇವೆ. ಅದಕ್ಕಾಗಿಯೇ ಕಾರ್ಯಪಡೆ ರಚಿಸಿದ್ದು, ಕೆಲ ದಿನಗಳಲ್ಲಿ ಕಾರ್ಯಪಡೆ ವರದಿ ನೀಡಲಿದೆ. ಉದ್ಯೋಗ ಸೃಷ್ಟಿ ಕೌಶಲ್ಯ ವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಯಡಿಯೂರಪ್ಪ ತಿಳಿಸಿದರು.
ನಾಳೆ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ
ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ (ಜುಲೈ 16) ದೆಹಲಿಗೆ ತೆರಳುವ ಸಾಧ್ಯತೆಯಿದೆ. ನಾಳೆ 6 ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಬಳಿಕ ಯಡಿಯೂರಪ್ಪ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಜುಲೈ 21 ಅಥವಾ 22ರಂದು ಸಿಎಂ ಬಿಎಸ್ವೈ ಆಪ್ತ ಶಾಸಕರ ಬಣ ದೆಹಲಿಗೆ ತೆರಳಲಿದ್ದಾರೆ. ರೇಣುಕಾಚಾರ್ಯ ನೇತೃತ್ವದಲ್ಲಿ 4 ರಿಂದ 5 ಶಾಸಕರು ದೆಹಲಿಗೆ ತೆರಳಲಿದ್ದಾರೆ. ಸಿಎಂ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ವರಿಷ್ಠರಿಗೆ ಒತ್ತಾಯಿಸಲು ದೆಹಲಿಗೆ ತೆರಳಲಿದ್ದಾರೆ.
ಇದನ್ನೂ ಓದಿ
10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವುಗೊಳಿಸಿದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ
KRS Dam: ಕಬಿನಿ ಜಲಾನಯನ ಪ್ರದೇಶದಲ್ಲಿ ಬಿರುಸುಗೊಂಡ ಮಳೆ, ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಎಷ್ಟಿದೆ ಈಗ?
(We will create 10 million jobs in five years, BS Yediyurappa said)