ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ
ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದ್ದಾರೆ.
ಶಿವಮೊಗ್ಗ: ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರು (Government Employees) ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ (Karnataka Government Employees Union) ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದಾಸೀನತೆ ತೋರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದರು.
ಸರ್ಕಾರ 7ನೇ ವೇತನ ಆಯೋಗದ ಶಿಫಾರಸನ್ನು ಮಧ್ಯಂತರ ಆದೇಶ ಹೊರಡಿಸಬೇಕು. ಅಂದ್ರೆ ಮಾತ್ರ ನಮ್ಮ ಹೋರಾಟ ವಾಪಸ್ ಪಡೆಯುತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ. ಇನ್ನೂ 3-4 ದಿನ ಸಮಯವಿದೆ, ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:51 pm, Sat, 25 February 23