ಬಹುಮತ ಸರ್ಕಾರವನ್ನ ಅಭದ್ರ ಮಾಡಲ್ಲ, ಆದ್ರೆ…ಸುಮ್ನೆ ಕೂರಲ್ಲ ಎಂದ ಬಿಜೆಪಿ ನಾಯಕ

ನಾಥ್ ಮಾದರಿ ಆಪರೇಷನ್ ಎಲ್ಲಾ ಕಡೆ ಫೇಮಸ್ ಆಗಿದೆ ಅದೇ ಮಾದರಿಯ ಆಪರೇಷನ್​ಗೆ ಕರ್ನಾಟಕದಿಂದಲೂ ಆಹ್ವಾನ ಬಂದಿದೆ. ಚುನಾವಣೆ ಬಳಿಕ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದೇನೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಡಿರೋ ಇದೇ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯ ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಪ್ರತಿಕ್ರಿಯಿಸಿ ಬಹುಮತ ಇರುವ ಸರ್ಕಾರವನ್ನ ಬಿಜೆಪಿ ಅಭದ್ರ ಮಾಡಲ್ಲ. ಆದ್ರೆ, ಒಂದು ಕೈ ನೋಡುತ್ತೇವೆ ಎಂದಿದ್ದಾರೆ.

ಬಹುಮತ ಸರ್ಕಾರವನ್ನ ಅಭದ್ರ ಮಾಡಲ್ಲ, ಆದ್ರೆ...ಸುಮ್ನೆ ಕೂರಲ್ಲ ಎಂದ ಬಿಜೆಪಿ ನಾಯಕ
ಸುನಿಲ್ ಕುಮಾರ್
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: May 15, 2024 | 2:51 PM

ಬೆಂಗಳೂರು, (ಮೇ 16): ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು (Karnataka Congress Government)  ಅಲುಗಾಡಿಸುವ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಆಡಿರುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಸುನಿಲ್ ಕುಮಾರ್ (Sunil Kumar) ಪ್ರತಿಕ್ರಿಯಿಸಿ, ಬಹುಮತ ಇರುವ ಸರ್ಕಾರವನ್ನ ಬಿಜೆಪಿ ಅಭದ್ರ ಮಾಡಲ್ಲ. ಆದರೆ, ಕಾಂಗ್ರೆಸ್ ನಾಯಕತ್ವದಲ್ಲಿನ ಗೊಂದಲದ ಭಾರಕ್ಕೆ ಅವರೇ ಕುಸಿದು ಬಿದ್ದರೆ ಆಮೇಲೆ ನಾವು ನೋಡುತ್ತೇವೆ. ನಾವು ಯಾವುದೇ ಕಾರಣಕ್ಕೂ ಸರ್ಕಾರ ಅಭದ್ರ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್ ಕುಮಾರ್, ಸಿದ್ದರಾಮಯ್ಯ ವಿರುದ್ಧ ಬಹಳ ಶಾಸಕರು ಮಾತಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಅವರ ಶಾಸಕರೇ ಮಾತನಾಡುತ್ತಿದ್ದಾರೆ. ಯಾರ ಭಾರದಿಂದ ಸರ್ಕಾರ ಕುಸಿಯುತ್ತೋ ನೋಡೋಣ. ಸರ್ಕಾರ ಡಿಸಿಎಂ ಡಿಕೆ ಅವರ ಭಾರದಿಂದ ಕುಸಿಯುತ್ತೋ? ಸಿಎಂ ಭಾರದಿಂದ ಕುಸಿಯುತ್ತೋ ಬಿಜೆಪಿ ಕಾದು ನೋಡುತ್ತೆ. ಸರ್ಕಾರ ಅದರದ್ದೇ ಭಾರದಿಂದ ಕುಸಿದ್ರೆ ಸುಮ್ಮನೆ ಇರಬೇಕಾ? ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊಂಡಿರಲು ಆಗುತ್ತಾ? ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಬಿಜೆಪಿ ಸರ್ಕಾರ ರಚನೆ ಮಾಡಲು ಪ್ರಯತ್ನಿಸುತ್ತೆ ಎನ್ನುವ ಅರ್ಥದಲ್ಲಿ ಹೇಳಿದರು.

ಇದನ್ನೂ ಓದಿ: ಸರ್ಕಾರ ಪತನ: ಶಿಂಧೆ ಹೇಳಿಕೆ ಬೆನ್ನಲ್ಲೇ ಶಾಸಕರಲ್ಲಿ ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

ಇನ್ನು ಇದೇ ವೇಳೆ ಸರ್ಕಾರ ಆಡಳಿತದ ಬಗ್ಗೆ ಮಾತನಾಡಿದ ಸುನಿಲ್ ಕುಮಾರ್, ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾದ್ರೂ ಅಭಿವೃದ್ಧಿ ಶೂನ್ಯ. ಯಾವ ಯೋಜನೆಗಳಿಗೆ ಎಷ್ಟು ಅನುದಾನವೆಂದು ಬಿಡುಗಡೆ ಮಾಡಲಿ. ಶಾಸಕರು 1 ವರ್ಷದಿಂದ ಒಂದೂ ಗುದ್ದಲಿ ಪೂಜೆ ಮಾಡಲು ಆಗಿಲ್ಲ. ಇಡೀ ಸಚಿವ ಸಂಪುಟವೇ ಅಸಮರ್ಥ ಸಂಪುಟ. ಸಚಿವರ ಮೇಲೆ ಹಿಡಿತ ಇಲ್ಲದ ಸಿಎಂ ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಅಸಮರ್ಥರು. ಬ್ರ್ಯಾಂಡ್ ಬೆಂಗಳೂರು ಕೂಡ ಈಗ ದಿಕ್ಕೆಟ್ಟ ಬೆಂಗಳೂರು ಆಗಿದೆ. ಜನಪ್ರತಿನಿಧಿಗಳಿಗೆ ಅಪಮಾನವಾಗುವಂತಹ ರೀತಿ ಆಡಳಿತ ನಡೆಯುತ್ತಿದೆ. ಇದರ ವಿರುದ್ಧ ಜನಾಂದೋಲನವನ್ನು ಬಿಜೆಪಿ ಆರಂಭ ಮಾಡುತ್ತದೆ. ಗ್ಯಾರಂಟಿ ಗುಂಗಿನಲ್ಲೇ ಇರದೇ ಜನರ ನಿರೀಕ್ಷೆಯಂತೆ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ..

ಜನರು ಕೂಡ ಈ ಸರಕಾರದಿಂದ ಅನುದಾನ ಬರುವುದಿಲ್ಲ ಎಂಬಷ್ಟರ ಮಟ್ಟಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಪುಟವನ್ನು ಗಮನಿಸಿದರೆ ಇಡೀ ಸಂಪುಟವೇ ಅಸಮರ್ಥವಾಗಿದೆ. ಸಚಿವರ ಮೇಲೆ ಹಿಡಿತವಿಲ್ಲದೆ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಯೋಜನೆ ರೂಪಿಸುವುದರಲ್ಲಿ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸಮರ್ಥ ಮುಖ್ಯಮಂತ್ರಿಯ ಆಡಳಿತವನ್ನು ಕರ್ನಾಟಕದಲ್ಲಿ ನೋಡುತ್ತಿದ್ದೇವೆ ಎಂದು ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.

ಪಿಎಲ್‌ಡಿ ಬ್ಯಾಂಕ್ ಗಳಲ್ಲಿ ರೈತರಿಗೆ ಮರು ಸಾಲ‌ ಸಿಗುತ್ತಿಲ್ಲ. ಅಸಮರ್ಥ ಕಂದಾಯ, ಕೃಷಿ, ಸಹಕಾರ, ಇಂಧನ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನಗರಾಭಿವೃದ್ಧಿ ಸಚಿವರು ನಮ್ಮಲ್ಲಿದ್ದಾರೆ. ಬ್ರಾಂಡ್ ಬೆಂಗಳೂರು ಈಗ ದಿಕ್ಕೆಟ್ಟ ಬೆಂಗಳೂರು ಆಗಿದೆ. ಕರ್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಇವೆಂಟ್ ಮ್ಯಾನೇಜ್ಮೆಂಟ್ ನ ಸದಸ್ಯರು ನಡೆಸುತ್ತಿದ್ದಾರೆ. ವಿಧಾನಸೌಧದ ಆಡಳಿತ ಯಾರದೋ ಮನೆಯ ಕಿಚನ್ ನಲ್ಲಿ ನಡೆಯುತ್ತಿರುವಂತೆ ಭಾಸವಾಗುತ್ತಿದೆ. ಜನಪ್ರತಿನಿಧಿಗಳಿಗೆ ಅಪಮಾನವಾಗುವಂತಹ ರೀತಿ ಆಡಳಿತ ನಡೆಯುತ್ತಿದೆ. ಇದರ ವಿರುದ್ಧ ಜನಾಂದೋಲನವನ್ನು ಬಿಜೆಪಿ ಆರಂಭ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು