AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರು, ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್: ವಂದೇ ಭಾರತ್ ಟಿಕೆಟ್ ದರ ಇಳಿಕೆ ಸುಳಿವು ನೀಡಿದ ಸೋಮಣ್ಣ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ, ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಅಗತ್ಯವಿದೆ. ಬಡ, ಮಧ್ಯಮ ವರ್ಗದವರು ಓಡಾಡುವಂತೆ ಟಿಕೆಟ್‌ ದರ ಪರಿಷ್ಕರಣೆ ಮಾಡುತ್ತೇವೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆಗೂ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಬಡವರು, ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್: ವಂದೇ ಭಾರತ್ ಟಿಕೆಟ್ ದರ ಇಳಿಕೆ ಸುಳಿವು ನೀಡಿದ ಸೋಮಣ್ಣ
ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಮಾಡ್ತೇವೆ: ವಿ ಸೋಮಣ್ಣ
ಕಿರಣ್​ ಹನಿಯಡ್ಕ
| Edited By: |

Updated on:Jun 29, 2024 | 5:50 PM

Share

ಬೆಂಗಳೂರು, ಜೂನ್ 29: ವಂದೇ ಭಾರತ್ (Vande Bharat) ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಅಗತ್ಯವಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡ, ಮಧ್ಯಮ ವರ್ಗದ ಜನ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್‌ ದರ ಪರಿಷ್ಕರಣೆ ಮಾಡುತ್ತೇವೆ. ರೈಲು ಟಿಕೆಟ್ ದರ ಪರಿಷ್ಕರಣೆ ಸಂಬಂಧ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.

ರೈಲ್ವೆ ಇಲಾಖೆಯ ಕಾರ್ಯವೈಖರಿ ಒಂದು ರೀತಿ ಮಿಲಿಟರಿ ಇದ್ದಂತೆ

ಬೆಂಗಳೂರು ಜನ ಪ್ರತಿನಿಧಿಗಳು ಹಾಗೂ ರಾಜ್ಯ ರೈಲ್ವೆ ಇಲಾಖೆಯ ಮುಖ್ಯಸ್ಥರ ಜೊತೆಗೆ ಸಭೆ ಮಾಡಿದ್ದೇನೆ. ರೈಲ್ವೆ ಮಂತ್ರಿಗಳಾದ ಅಶ್ವಿನಿ ವೈಷ್ಣವ್ ಅವರ ಅನುಭವ ಇನ್ನಷ್ಟು ಹುಮ್ಮಸ್ಸು ಕೊಡುತ್ತಿದೆ. ರೈಲ್ವೆ ಇಲಾಖೆಯ ಕಾರ್ಯವೈಖರಿ ಒಂದು ರೀತಿಯ ಮಿಲಿಟರಿ ಇದ್ದಂತೆ. ದೇಶದಲ್ಲಿ ಮೊದಲು ಮಿಲಿಟರಿ ಪಡೆ ಆದರೆ, ಎರಡನೇ ಹಂತದಲ್ಲಿ ರೈಲ್ವೆ ಇಲಾಖೆ ಇದೆ. ಅದೇ ರೀತಿಯಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಹೆಚ್ಚಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನರನ್ನು ವಂಚಿಸಿದೆ: ವಿ ಸೋಮಣ್ಣ, ಕೇಂದ್ರ ಸಚಿವ

ಬಾಕಿ ಹಣದ ಬಗ್ಗೆ ಈಗ ಏನೂ ಮಾತಾಡಲ್ಲ, ರಾಜ್ಯದ ಬಾಕಿ ಹಣ ಬರಬೇಕಿದೆ. ರಾಜ್ಯ, ಕೇಂದ್ರಸರ್ಕಾರಗಳು ಒಗ್ಗಟ್ಟಿನಲ್ಲಿ, ಸಹಕಾರದಿಂದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. ರೈಲ್ವೆ ಅಂಡರ್​ಪಾಸ್, ಮೇಲ್ಸೇತುವೆ ಕಾಮಗಾರಿಗೆ ಹಣ ಕೊಡಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸಮಪಾಲು ಹಣ ನೀಡಬೇಕಾಗುತ್ತದೆ. ಬೆಂಗಳೂರು ಕಂಟೋನ್ಮೆಂಟ್ ಸ್ಟೇಷನ್​ ಯೋಜನಾ ಮೊತ್ತ 485 ಕೋಟಿ ರೂ. ಯಶವಂತಪುರ ನಿಲ್ದಾಣದ ಯೋಜನಾ ಮೊತ್ತ 387 ಕೋಟಿ ರೂ ಎಂದರು.

ಯಶವಂತಪುರ-ಚನ್ನಸಂದ್ರ ನಡುವೆ 25 ಕಿ.ಮೀ ಮತ್ತು ಬೈಯ್ಯಪ್ಪನಹಳ್ಳಿ-ಹೊಸೂರು ನಡುವೆ 48 ಕಿ.ಮೀ. ಹಳಿ ಡಬ್ಲಿಂಗ್​ ಯೋಜನೆಗೆ 814 ಕೋಟಿ ರೂಪಾಯಿ ವೆಚ್ಚವಾಗಲಿದೆ. ರೈಲ್ವೆ ಓವರ್ ಬ್ರಿಡ್ಜ್, ಅಂಡರ್​ಪಾಸ್​ನಲ್ಲಿ ತೊಂದರೆ ಆಗಲು ಬಿಡಲ್ಲ. ಕರ್ನಾಟಕದಲ್ಲಿ ವಿಭಿನ್ನ ರೀತಿಯಲ್ಲಿ ರೈಲ್ವೆ ವಿಭಾಗ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಿಗಳ ಜೊತೆ ಸೇರಿ ನಿಷ್ಠೆಯಿಂದ ಕೆಲಸ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ: ವಿ ಸೋಮಣ್ಣ, ಕೇಂದ್ರ ಸಚಿವ

ಇನ್ನೆರಡು ವರ್ಷಗಳಲ್ಲಿ ಕರ್ನಾಟಕ ವಿಭಿನ್ನ ರೀತಿಯಲ್ಲಿ ರೈಲ್ವೆ ವಿಭಾಗದಲ್ಲಿ ಅಭಿವೃದ್ಧಿ ಹೊಂದಲಿದೆ. ಹಿಂದೆ ರೈಲ್ವೆ ಅಂಡರ್ ಪಾಸ್ ಮತ್ತು ಮೇಲ್ಸೇತುವೆಗಳಿಗೆ ಕೇಂದ್ರ ಮತ್ತು ರಾಜ್ಯ ಸಹಯೋಗ ಇರುತ್ತಿತ್ತು. ಇದು ಎಷ್ಟರ ಮಟ್ಟಿಗೆ ಕಾರ್ಯೋನ್ಮುಖ ಆಗುತ್ತಿತ್ತೋ ಗೊತ್ತಿಲ್ಲ. ರೈಲುಗಳು ಬಂದಾಗ ಜನ, ಜಾನುವಾರುಗಳು ಪ್ರಾಣ ಕಳೆದುಕೊಳ್ಳುತ್ತಿದ್ದವು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ 5 ಕೋಟಿ ರೂ. ಬಾಕಿ ಕೊಡಬೇಕಿದೆ

ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗಕ್ಕೆ 3 ಡಿಸಿ ನೇಮಕಾತಿ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. 40 ತಿಂಗಳಲ್ಲಿ ಸಬ್ಅರ್ಬನ್ ಯೋಜನೆ ಮುಗಿಸುವುದಾಗಿ ಹೇಳಲಾಗಿತ್ತು. 2022ರಲ್ಲಿ ಮೋದಿ ಚಾಲನೆ ಕೊಟ್ಟಾಗ 40 ತಿಂಗಳು ಎಂದು ಹೇಳಲಾಗಿತ್ತು. ನಮ್ಮ ನಿರೀಕ್ಷೆಯಂತೆ ಸಬ್ಅರ್ಬನ್ ರೈಲು ಯೋಜನೆ ಕೆಲಸ ನಡೀತಿಲ್ಲ. ಮುಂದಿನ ತಿಂಗಳು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬಂದು ಪರಿಶೀಲಿಸುತ್ತಾರೆ. 11,800 ಕೋಟಿ ರೂ. ಪೈಕಿ ರಾಜ್ಯ ಸರ್ಕಾರ ಇನ್ನೂ 5 ಕೋಟಿ ರೂ. ಕೊಡಬೇಕು ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ 5 ಕೋಟಿ  ರೂ. ಬಾಕಿ ಕೊಡಬೇಕಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:13 pm, Sat, 29 June 24