AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ ಖಾಸಗಿ ಬಸ್ ಬಳಕೆಯ ಎಚ್ಚರಿಕೆ ರವಾನೆ

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಲಕ್ಷ್ಮಣ ಸವದಿ, ನಾನು ಅಧಿಕಾರಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ನಾಳೆಯಿಂದ ಖಾಸಗಿ ವಾಹನಗಳನ್ನು ಸರ್ಕಾರಿ ದರದಲ್ಲೇ ಓಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ನಡುರಾತ್ರಿ ಗಡುವು ನೀಡಿದ ಸಚಿವ ಸವದಿ, ನಾಳೆಯಿಂದ ಖಾಸಗಿ ಬಸ್ ಬಳಕೆಯ ಎಚ್ಚರಿಕೆ ರವಾನೆ
ಲಕ್ಷ್ಮಣ್​ ಸವದಿ
ರಾಜೇಶ್ ದುಗ್ಗುಮನೆ
| Edited By: |

Updated on:Dec 12, 2020 | 5:16 PM

Share

ಬೆಂಗಳೂರು: ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಪಟ್ಟು ಹಿಡಿದು ಸಾರಿಗೆ ನಿಗಮ ಮಂಡಳಿ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಸಾರ್ವಜನಿಕರು ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಮಧ್ಯೆ, ಸಾರಿಗೆ ನೌಕರರಿಗೆ ಮಾತುಕತೆ ನಡೆಸಲು ಮಧ್ಯರಾತ್ರಿಯವರೆಗೂ ಕಾಲಾವಕಾಶ ಇದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ಒಂದೊಮ್ಮೆ ಇದು ಸಾಧ್ಯವಾಗದಿದ್ದರೆ,   ನಾಳೆಯಿಂದ ಖಾಸಗಿ ವಾಹನ ಬಳಸಿ ಸಂಚಾರಕ್ಕೆ ಅನುವು ಮಾಡಿಕೊಡಲು ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಲಕ್ಷ್ಮಣ ಸವದಿ, ನಾನು ಅಧಿಕಾರಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ನಾಳೆಯಿಂದ ಖಾಸಗಿ ವಾಹನಗಳನ್ನು ಸರ್ಕಾರಿ ದರದಲ್ಲೇ ಓಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈ ಮೂಲಕ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳೋದು ನಮ್ಮ ಕರ್ತವ್ಯ. ನಾನು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯೂ ಮಾತನಾಡಿದ್ದೇನೆ ಎಂದರು.

ಬೇಡಿಕೆ ವಿಚಾರವಾಗಿ ನೌಕರರಿಗೆ ಬಂದು ಮಾತನಾಡಲು ಕೋರಿದ್ದೇನೆ. ಆದರೆ, ಯಾರೊಬ್ಬರೂ ಬಂದು ಮಾತನಾಡುತ್ತಿಲ್ಲ. ನಿಮ್ಮ ಬೇಡಿಕೆ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ನಾವು ಹೇಳಿದ್ದೇವೆ. ರಾತ್ರಿ 12 ಗಂಟೆಯವರೆಗೂ ನೌಕರರಿಗಾಗಿ ಮನೆಯಲ್ಲಿ ಕಾಯುತ್ತೇನೆ ಎಂದರು.

ನಾನು ಈಗಲೂ ನೌಕರರಿಗೆ ಮನವಿ ಮಾಡಿಕೊಳ್ಳುತ್ತೇನೆ. ನೀವು ನಮ್ಮ ಕುಟುಂಬದವರಿದ್ದಂತೆ. ಇಬ್ಬರೂ ಕೂತು ಮಾತುಕತೆ ಮಾಡಬೇಕು. ನಾವು ಮಾತನಾಡಿ ಬಗೆಹರಿಸಿಕೊಳ್ಳಬೇಕು. ಆದರೆ, ಈ ರೀತಿ ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡೋದು ಸರಿಯಲ್ಲ. ಈಗಲೂ ಕಾಲ ಮಿಂಚಿಲ್ಲ. ಬಂದು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಕೋರಿದರು.

37 ಬಸ್​ಗಳಿಗೆ ಕಲ್ಲು ತೂರಾಟ: ಇಂದು ಮುಷ್ಕರದ ವೇಳೆ ಬಸ್​ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ರಾಜ್ಯಾದ್ಯಂತ ಈ ವರೆಗೆ 37 ಬಸ್​ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

ಬಸ್​ ಸಂಚಾರ ಸ್ಥಗಿತ: ಮನೆಯಿಂದ ಹೊರಬರುವ ಮೊದಲು ಯೋಚಿಸಿ

Published On - 5:08 pm, Sat, 12 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?