ಇಂಥ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ: ಡಿಕೆ ಸುರೇಶ್

ಇವತ್ತು ಬೆಳಗ್ಗೆಯಿಂದ ಸಹೋದರ ಡಿ ಕೆ ಶಿವಕುಮಾರ್, ಮತ್ತು ತಮ್ಮ ನಿವಾಸ ಸೇರಿ 14 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಒಂದು ರಾಜಕೀಯ ಷಡ್ಯಂತ್ರ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಟ್ವೀಟ್ ಮೂಲಕ ಹೇಳಿದ್ದಾರೆ. ‘‘ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ,’’ ಎಂದು ಸುರೇಶ್ ಟ್ವೀಟ್ ಮಾಡಿದ್ದಾರೆ. ಯಾವುದೇ […]

ಇಂಥ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ: ಡಿಕೆ ಸುರೇಶ್

Updated on: Oct 05, 2020 | 5:37 PM

ಇವತ್ತು ಬೆಳಗ್ಗೆಯಿಂದ ಸಹೋದರ ಡಿ ಕೆ ಶಿವಕುಮಾರ್, ಮತ್ತು ತಮ್ಮ ನಿವಾಸ ಸೇರಿ 14 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಒಂದು ರಾಜಕೀಯ ಷಡ್ಯಂತ್ರ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಟ್ವೀಟ್ ಮೂಲಕ ಹೇಳಿದ್ದಾರೆ.

‘‘ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ,’’ ಎಂದು ಸುರೇಶ್ ಟ್ವೀಟ್ ಮಾಡಿದ್ದಾರೆ.

ಯಾವುದೇ ರಾಜಕೀಯ ಸಂಕಷ್ಟವನ್ನು ರಾಜಕೀಯವಾಗಿ ಎದುರಿಸಲು ತಾವು ಸಿದ್ಧರಿರುವುದಾಗಿ ಸುರೇಶ್ ತಮ್ಮ ಎರಡನೇ ಟ್ವೀಟ್​ನಲ್ಲಿ ಹೇಳಿದ್ದಾರೆ.

‘‘ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ,’’ ಎಂದು ಸುರೇಶ್ ಟ್ವೀಟ್ ಮಾಡಿದ್ದಾರೆ.

ತಮ್ಮ ಮೂರನೇ ಟ್ವೀಟ್​ನಲ್ಲಿ ಸುರೇಶ್, ತಮ್ಮ ಬೆಂಬಲಿಗರಿಗೆ ವಿಚಲಿತರಾಗದಂತೆ ಮನವಿ ಮಾಡಿದ್ದಾರೆ. ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೆಯೇ ಇರಲಿ, ಎಂದಿದ್ದಾರೆ.

Published On - 5:35 pm, Mon, 5 October 20

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
Follow Us