ಬೆಂಗಳೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ: ಇತಿಹಾಸದಲ್ಲೇ ಅತಿ ಹೆಚ್ಚು ತಾಪಮಾನ ದಾಖಲು
ಬೆಂಗಳೂರಿನ ಹೆಚ್ಚಾಗಿರುವ ತಾಪಮಾನಕ್ಕೆ ಎಲ್ ನಿನೋ ಪರಿಣಾಮ ಮತ್ತು ಜಾಗತಿಕ ತಾಪಮಾನವೇ ಕಾರಣ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿಗಳು ಹೇಳಿರುವುದಾಗಿ ವರದಿಯಾಗಿದೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ಮಳೆ ಕೊರತೆಯಿಂದಾಗಿ ಸಿಟಿ ಮಂದಿಗೆ ಬಿಸಿ ಗಾಳಿ ಹೆಚ್ಚಿನ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಸದ್ಯ ಬೆಂಗಳೂರಿನಲ್ಲಿ ಇಂದು 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ಇನ್ನು ಕೆಲ ದಿನಗಳವರೆಗೆ ಬಿಸಿ ಗಾಳಿ ಮುಂದುವರೆಯುತ್ತಿರುವ ಬೆನ್ನಲ್ಲೇ ನಗರದಲ್ಲಿ ಇಂದು 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಾಗುವ ಮೂಲಕ ತಾಪಮಾನದಲ್ಲಿ (Temperature) ದಾಖಲೆ ಬರೆಯಲಾಗಿದೆ. ಬೆಂಗಳೂರಿನ (Bengaluru) ಇತಿಹಾಸದಲ್ಲೇ ಅತಿ ಹೆಚ್ಚು ತಾಪಮಾನ ಇದಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ. 15 ದಿನಗಳ ಹಿಂದೆ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.
1996ರ ಮಾರ್ಚ್ 27ರಂದು 37.3 ಡಿಗ್ರಿ ಸೆಲ್ಸಿಯಸ್ ಮತ್ತು 2017ರಲ್ಲಿ ಬೆಂಗಳೂರಿನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇದಾದ ನಂತರ ಇಂದು 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಹೆಚ್ಚಳ ಸಾಧ್ಯತೆ: ಐಎಂಡಿ
ಬೆಂಗಳೂರಿನ ಹೆಚ್ಚಾಗಿರುವ ತಾಪಮಾನಕ್ಕೆ ಎಲ್ ನಿನೋ ಪರಿಣಾಮ ಮತ್ತು ಜಾಗತಿಕ ತಾಪಮಾನವೇ ಕಾರಣ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿಗಳು ಹೇಳಿರುವುದಾಗಿ ವರದಿಯಾಗಿದೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ಮಳೆ ಕೊರತೆಯಿಂದಾಗಿ ಸಿಟಿ ಮಂದಿಗೆ ಬಿಸಿ ಗಾಳಿ ಹೆಚ್ಚಿನ ಸಮಸ್ಯೆಯಾಗಿ ಪರಿಣಮಿಸುತ್ತಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ. ಬೆಂಗಳೂರು ನಗರ, ವಿಜಯಪುರ, ಹಾಸನ ಮತ್ತು ಇತರೆ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಏಪ್ರಿಲ್ 30 ರಿಂದ ಮೇ 3 ರವರೆಗೆ ಲಘು ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಹೆಚ್ಚುವರಿಯಾಗಿ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಗದಗ ಮತ್ತು ಇತರ ಜಿಲ್ಲೆಗಳಿಗೆ ಮೇ 2 ರ ಬೆಳಿಗ್ಗೆ ವರೆಗೆ ನೀಡಲಾಗಿದೆ. ಈ ಎಚ್ಚರಿಕೆಯು ಈ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಲಾಗಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನ ಮಳೆ, ಯೆಲ್ಲೋ ಅಲರ್ಟ್
ಸದ್ಯ ರಾಜ್ಯದಲ್ಲಿ ಬಿಸಿ ಗಾಳಿ ಅಲೆಯು ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಭಾಗಗಳಲ್ಲಿ ಕೆಲ ದಿನಗಳವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿನ್ನೆ ಮುನ್ಸೂಚನೆ ನೀಡಿತ್ತು. ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೀದರ್, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಮತ್ತು ಮಂಡ್ಯ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಏಪ್ರಿಲ್ 27 ರಿಂದ 30 ರವರೆಗೆ ತಾಪಮಾನ ಮತ್ತು ತೀವ್ರ ಬಿಸಿ ಗಾಳಿ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿತ್ತು.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.