
ಬೆಂಗಳೂರು, ಅಕ್ಟೋಬರ್ 15: ಕರ್ನಾಟದ ಸುಮಾರು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇಂದು ಭಾರಿ ಮಳೆಯಾಗುವ (Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಈ ಎಲ್ಲಾ ಕಡೆಯಲ್ಲಿಯೂ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ .
ಉತ್ತರ ಒಳನಾಡ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ.ನಷ್ಟು ಇರಲಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲೂ ಸಾಧಾರಣ ಮಳೆಯ ನಿರೀಕ್ಷೆ ಇದೆ. ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಹಾಸನ, ಮಂಡ್ಯ ಭಾಗದಲ್ಲೂ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ತುಂತುರು ಮಳೆ ಆಗುವ ಸಾಧ್ಯತೆ ಇದೆ. ಶೇಕಡಾ 86ರಿಂದ 100ರಷ್ಟು ಮಳೆ ಆಗಬಹುದೆಂದು ಅಂದಾಜಿಸಲಾಗಿದ್ದು, 7-18 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 8 ಕಿ.ಮೀ.ನಷ್ಟು ಇರಲಿದೆ. ನಗರದ ಗರಿಷ್ಠ ತಾಪಮಾನ 25°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:47 am, Wed, 15 October 25