AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast: ರಾಜ್ಯದ 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

Karnataka Weather Tomorrow: ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 25 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಬೆಂಗಳೂರಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Weather Forecast: ರಾಜ್ಯದ 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ
ಕರ್ನಾಟಕದ 25 ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್
ಭಾವನಾ ಹೆಗಡೆ
|

Updated on:Oct 17, 2025 | 7:53 AM

Share

ಬೆಂಗಳೂರು, ಅಕ್ಟೋಬರ್​ 17: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ (Weather Forecast) ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ .

ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡ ಜಿಲ್ಲೆಗಳಾದಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಪ್ರದೇಶಗಳಾದ ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶೇ.80ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ 22-26 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:51 am, Fri, 17 October 25

ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್