Karnataka Weather Today: ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ
Karnataka weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಅಕ್ಟೋಬರ್ 17ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು: ನಗರದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ತುಸು ಕಡಿಮೆಯಾಗಿದೆ. ಹವಾಮಾನ ವರದಿಯ ಪ್ರಕಾರ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 17ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೋಲಾರ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಭಾಗದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಮಧ್ಯಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನಿಡಿದೆ. ರಾಜ್ಯದ ಉತ್ತರ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಇಂದು ರಾಜ್ಯದಲ್ಲಿ ವಾತಾವರಣವು ಸುಮಾರು 19 ಡಿಗ್ರಿಯಿಂದ 30 ಡಿಗ್ರಿ ನಡುವೆ ಇರಲಿದೆ ಎಂದು ಅಂದಾಜಿಸಲಾಗಿದೆ.
ಜವಾದ್ ಚಂಡಮಾರುತ ಏಳುವ ಸಾಧ್ಯತೆ ಇರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 17ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕಳೆದ ತಿಂಗಳ ಅಂತ್ಯದಿಂದಲೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 17ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಮಹಾರಾಷ್ಟ್ರದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:
Gold Price Today: ಮತ್ತೆ ಹೆಚ್ಚಾಯ್ತು ಚಿನ್ನ, ಬೆಳಿ ದರ! ಬೆಂಗಳೂರಿನಲ್ಲಿ ಎಷ್ಟಿದೆ ನೋಡಿ
Petrol Price Today: ಇಂದು ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ