Karnataka Weather Report: ಕರ್ನಾಟಕದ ಬಹುತೇಕ ಕಡೆ ಮುಂಗಾರು ದುರ್ಬಲ; ಕರಾವಳಿಯಲ್ಲಿ ಮುಂದುವರಿಯಲಿರುವ ಮಳೆ

ಕರ್ನಾಟಕ ರಾಜ್ಯಾದ್ಯಂತ ಮಾನ್ಸೂನ್ ದುರ್ಬಲವಾಗಿದೆ. ಹೀಗಿದ್ದರೂ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 4 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Karnataka Weather Report: ಕರ್ನಾಟಕದ ಬಹುತೇಕ ಕಡೆ ಮುಂಗಾರು ದುರ್ಬಲ; ಕರಾವಳಿಯಲ್ಲಿ ಮುಂದುವರಿಯಲಿರುವ ಮಳೆ
ಮಳೆ
Follow us
TV9 Web
| Updated By: ganapathi bhat

Updated on:Jul 28, 2021 | 5:34 PM

ಬೆಂಗಳೂರು: ಕೆಲವು ದಿನಗಳ ಹಿಂದೆ ಕರ್ನಾಟಕದ ಬಹುತೇಕ ಎಲ್ಲಾ ಭಾಗಗಳಲ್ಲೂ ವ್ಯಾಪಕ ಮಳೆಯಾಗಿತ್ತು. ಮಾತ್ರವಲ್ಲ ಅಪಾರ ಆಸ್ತಿ ಪಾಸ್ತಿ ಹಾನಿ, ನೆರೆ, ಪ್ರವಾಹದಂತಹ ಸನ್ನಿವೇಶ ಸೃಷ್ಟಿಯಾಗಿತ್ತು. ಆದರೆ ಇದೀಗ ಮಳೆಯ ಆರ್ಭಟ ಕಡಿಮೆಯಾಗಿದೆ. ಇಂದು (ಜುಲೈ 28) ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಈ ಕುರಿತು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಮುಂದಿನ ನಾಲ್ಕು ದಿನಗಳ ಕಾಲ, ಅಂದರೆ ಜುಲೈ 28 ರಿಂದ ಆಗಸ್ಟ್ 1 ರ ವರೆಗಿನ ಹವಾಮಾನ ಸ್ಥಿತಿಗತಿಗಳ ಕುರಿತು ಸಿ.ಎಸ್. ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯಾದ್ಯಂತ ಮಾನ್ಸೂನ್ ದುರ್ಬಲವಾಗಿದೆ. ಹೀಗಿದ್ದರೂ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 4 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇಂದೀಗ ಸಂಜೆಯ ವೇಳೆಗೆ ಮಂಡ್ಯ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಯಿಂದ ಮಳೆ ಬಿಡದೇ ಮಳೆ ಸುರಿದಿದ್ದು, ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದೆ.

ಈಗಿರುವ ಸ್ಥಿತಿಗತಿ ವಿವರಿಸುತ್ತಾ ಕರಾವಳಿ ಪ್ರದೇಶದಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 28 ರಿಂದ ಆಗಸ್ಟ್ 1 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದ ಹವಾಮಾನ ಮುನ್ಸೂಚನೆ ರಾಜಧಾನಿಯಲ್ಲಿ ಮುಂದಿನ ಎರಡು ದಿನದವರೆಗೆ ಕೆಲವು ಕಡೆ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದ್ದಾರೆ.

ಬಾಗಲಕೋಟೆ: ಜಲಾವೃತ ಸ್ಥಿತಿಯಲ್ಲಿ ಜಮಖಂಡಿ ಭಾಗದ ಹಳ್ಳಿಗಳು ಕಳೆದ ಕೆಲವು ದಿನಗಳ ಹಿಂದೆ ಅಬ್ಬರಿಸಿದ ಮಳೆಯಿಂದಾಗಿ ಕೃಷ್ಣಾ ನದಿ ಪ್ರವಾಹ ಇನ್ನೂ ಕಡಿಮೆಯಾಗಿಲ್ಲ. ಇಂದಿಗೂ ಜಮಖಂಡಿ ಭಾಗದ ಹಳ್ಳಿಗಳು ಜಲಾವೃತ ಸ್ಥಿತಿಯಲ್ಲೇ ಇವೆ. ಶೂರ್ಪಾಲಿ ಗ್ರಾಮದ ಲಕ್ಷ್ಮಿ ನರಸಿಂಹ ದೇವಸ್ಥಾನ ಹಾಗೂ ಮನೆಗಳು, ಶಾಲೆ ಜಲಾವೃತವಾಗಿದೆ.

ಮತ್ತೊಂದೆಡೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ, ಗದಗ ಜಿಲ್ಲೆಯ ಕೊಣ್ಣೂರು ಮಧ್ಯೆ ಮಳೆ, ನೆರೆಯಿಂದ ಬಂದ್ ಆಗಿದ್ದ ಹೆದ್ದಾರಿ ತೆರವುಗೊಂಡಿದೆ. ತಗ್ಗಿದ ಮಲಪ್ರಭಾ ಪ್ರವಾಹ ಕಾರಣದಿಂದ ಗೋವನಕೊಪ್ಪ-ಕೊಣ್ಣೂರು ಬಳಿ‌ ಜಲಾವೃತವಾಗಿದ್ದ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ. ಪ್ರವಾಹದಿಂದ ಜಲಾವೃತವಾಗಿ ಕಿತ್ತು ಹೋಗಿದ್ದ ರಸ್ತೆ, ಮಲಪ್ರಭಾ ನದಿ ಪ್ರವಾಹದಿಂದ ಮೂರು ದಿನಗಳಿಂದ ರಸ್ತೆ ಬಂದ್ ಆಗಿತ್ತು. ಇದೀಗ ನೆರೆ ಕಡಿಮೆ ಆಗಿದ್ದು ಜೆಸಿಬಿ ಮೂಲಕ ಮಣ್ಣು ಹಾಕಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿದೆ. ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹದ ಅಬ್ಬರ; ಸಾವಿನ ಸಂಖ್ಯೆ 209ಕ್ಕೆ ಏರಿಕೆ, 8 ಜನರು ನಾಪತ್ತೆ

Karnataka Weather: ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ; ಹಲವು ಕಡೆ ಮೋಡ ಕವಿದ ವಾತಾವರಣ

(Weather Report Weather Forecast Karnataka Rain Update Bengaluru Weather Temperature)

Published On - 5:29 pm, Wed, 28 July 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್