Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ; ಮಲೆನಾಡು, ಕರಾವಳಿ ಸೇರಿ 20 ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

Weather Updates: ಇಂದು (ನವೆಂಬರ್‌ 1) ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Karnataka Rains: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ; ಮಲೆನಾಡು, ಕರಾವಳಿ ಸೇರಿ 20 ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ
ಮಳೆ
Follow us
ಸುಷ್ಮಾ ಚಕ್ರೆ
|

Updated on: Nov 01, 2024 | 7:29 AM

ಬೆಂಗಳೂರು: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಪ್ರಕಾರ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರಿನ ದಕ್ಷಿಣ ಮತ್ತು ಪೂರ್ವ ವಲಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೇ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ಉತ್ತರ ಕನ್ನಡ, ಧಾರವಾಡ, ಬೀದರ್, ಮೈಸೂರು, ದಾವಣಗೆರೆ, ಬೆಳಗಾವಿ, ಕಲಬುರಗಿ, ರಾಮನಗರ, ಮಂಡ್ಯ, ಹಾವೇರಿ, ಗದಗ, ಹಾವೇರಿ, ಗದಗ, ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ನವೆಂಬರ್‌ 1) ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಗಳೂರು ನಗರದ ಹಲವೆಡೆ ಮತ್ತೆ ಧಾರಾಕಾರ ಮಳೆ, ಟ್ರಾಫಿಕ್​ ಜಾಮ್​

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಬಾಗಲಕೋಟೆ, ಬಿಜಾಪುರ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಳದಿ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಮಳೆ ಹಾಗೂ ಗುಡುಗು ಸಹಿತ ಮಿಂಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಮಿಂಚು ಅಪ್ಪಳಿಸಲಿದೆ ಎಂದು ಸೂಚಿಸಲಾಗಿದೆ. ರಾಮನಗರ, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಇಂದು ಹಾಗೂ ಶನಿವಾರ ಹಳದಿ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಇನ್ನೂ 2 ದಿನ ಸಾಧಾರಣ ಮಳೆ ಆಗಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಮಳೆರಾಯನ ಎಂಟ್ರಿಗೆ ಮುನ್ಸೂಚನೆ: ಚಳಿಯೊಂದಿಗೆ 5 ದಿನ ಮಳೆ ಸಾಧ್ಯತೆ

ಗುರುವಾರ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ 5 ಸೆಂ.ಮೀ, ಹಾವೇರಿಯಲ್ಲಿ 4 ಸೆಂ.ಮೀ, ಧಾರವಾಡ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ತುಮಕೂರು ಜಿಲ್ಲೆಯ ತಿಪಟೂರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು ಮಧ್ಯಮವಾಗಿದ್ದು, ಗುರುವಾರ 129.0 ರೀಡಿಂಗ್ ಆಗಿದೆ. ಪಟಾಕಿಗಳನ್ನು ಸಿಡಿಸುವುದರಿಂದ ವಾಯುಮಾಲಿನ್ಯ ಜಾಸ್ತಿಯಾಗಲಿದ್ದು, ಇದಕ್ಕೆ ಕೆಲವು ನಿರ್ಬಂಧ ವಿಧಿಸಲಾಗಿದೆ. ಮಕ್ಕಳು ಮತ್ತು ಆಸ್ತಮಾದಂತಹ ಉಸಿರಾಟದ ಕಾಯಿಲೆಗಳಿರುವ ಜನರು ದೀರ್ಘಕಾಲದ ಹೊರಾಂಗಣ ಚಟುವಟಿಕೆಯನ್ನು ಮಿತಿಗೊಳಿಸಬೇಕು ಎಂದು ಸೂಚಿಸಲಾಗಿದೆ.

ಹೆಚ್ಚಿನ ಮಾಲಿನ್ಯವನ್ನು ತಪ್ಪಿಸಲು ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಜನರಿಗೆ ಸಲಹೆ ನೀಡಿದ್ದಾರೆ. ಯಾವ ರೀತಿಯ ಪಟಾಕಿ ಸಿಡಿಸಬೇಕು ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ನೀಡಿದೆ. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ರಾತ್ರಿ 8ರಿಂದ ರಾತ್ರಿ 10ರವರೆಗೆ ಸಿಡಿಸಬೇಕು ಎಂದು ಸೂಚಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್