AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬಿಸಿಲಿನ ಬೇಗೆ, ಬರಗಾಲಕ್ಕೆ ತತ್ತರಿಸಿದ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ

ಬಿಸಿಲಿ ಬೇಗೆ ಮತ್ತು ಮಳೆಯ ಕೊರತೆಯಿಂದ ಉಂಟಾದ ಬರಗಾಲಕ್ಕೆ ಕರ್ನಾಟಕವು ತತ್ತರಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬರಗಾಲದಿಂದ ನೀರಿಗಾಗಿ ಹಾಹಾಕಾರ ಎದ್ದಿದೆ. ಈ ನಡುವೆ, ರಾಜ್ಯದಲ್ಲಿ ಮಳೆಯಾಗುವ ಶುಭ ಮುನ್ಸೂಚನೆ ಲಭ್ಯವಾಗಿದೆ. ಮುಂದಿನ ಎರಡು ವಾರಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ಬಿಸಿಲಿನ ಬೇಗೆ, ಬರಗಾಲಕ್ಕೆ ತತ್ತರಿಸಿದ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ
ಬಿಸಿಲಿನ ಬೇಗೆ, ಬರಗಾಲಕ್ಕೆ ತತ್ತರಿಸಿದ ಕರ್ನಾಟಕಕ್ಕೆ ಮಳೆಯಾಗುವ ಮುನ್ಸೂಚನೆ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on:Mar 04, 2024 | 9:00 PM

Share

ಬೆಂಗಳೂರು, ಮಾ.4: ಬರಗಾಲ ಹಾಗೂ ಬಿಸಿಲಿನ ಧಗೆಗೆ ತತ್ತರಿಸಿದ್ದ ಕರ್ನಾಟಕದಲ್ಲಿ ಮಳೆಯ (Karnataka Rain) ಸಿಂಚನವಾಗುವ ಮುನ್ಸೂಚನೆಯನ್ನು ಹವಾಮನ ಇಲಾಖೆ ನೀಡಿದೆ. ಮಳೆಯ ಕೊರತೆಯಿಂದ ಉಂಟಾದ ಬರಗಾಲಕ್ಕೆ (Drought) ಕರ್ನಾಟಕವು ತತ್ತರಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬರಗಾಲದಿಂದ ನೀರಿಗಾಗಿ ಹಾಹಾಕಾರ ಎದ್ದಿದೆ. ಇದರ ಜೊತೆಗೆ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ಕಂಗೆಟ್ಟಿದ್ದಾರೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಗರಿಷ್ಠ ಉಷ್ಣಾಂಶ 37.4 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಈ ನಡುವೆ ರಾಜ್ಯದಲ್ಲಿ ಮಳೆಯಾಗಲಿದೆ ಎನ್ನುವ ಹರ್ಷದಾಯಿಕ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅಲ್ಲದೆ, ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ ತಿಂಗಳ ಮೊದಲ 10 ದಿನ ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಚಿಕ್ಕಮಗಳೂರು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಟ್ವೀಟ್

ಇದನ್ನೂ ಓದಿ: ಗದಗ: ಶುದ್ಧ ನೀರಿನ ಹರಿಕಾರ ಎಚ್​ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ

ಕರ್ನಾಟಕದಲ್ಲಿ ತಾಪಮಾನ ಹೇಗಿರಲಿದೆ?

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಗುಡುಗು ಮತ್ತು ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಹೇಗಿದೆ ತಾಪಾಮಾನ?

ಬರಗಲಾಕ್ಕೆ ಬೆಂಗಳೂರು ಕೂಡ ತತ್ತರಿಸಿದ್ದು, ಕೆಲವೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಜನರು ಕುಡಿಯುವ ನೀರಿಗಾಗಿ ಟ್ಯಾಂಕರ್ ಮೊರೆ ಹೋಗಿದ್ದಾರೆ. ಮುಂದಿನ 48 ಗಂಟೆಗಳ ಬೆಂಗಳೂರಿನ ತಾಪಾಮಾನದ ಹೇಗಿರಲಿದೆ ಎಂಬುದನ್ನು ನೋಡುವುದಾದರೆ, ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Mon, 4 March 24

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ