ಬೆಂಗಳೂರು, ಮಾ.4: ಬರಗಾಲ ಹಾಗೂ ಬಿಸಿಲಿನ ಧಗೆಗೆ ತತ್ತರಿಸಿದ್ದ ಕರ್ನಾಟಕದಲ್ಲಿ ಮಳೆಯ (Karnataka Rain) ಸಿಂಚನವಾಗುವ ಮುನ್ಸೂಚನೆಯನ್ನು ಹವಾಮನ ಇಲಾಖೆ ನೀಡಿದೆ. ಮಳೆಯ ಕೊರತೆಯಿಂದ ಉಂಟಾದ ಬರಗಾಲಕ್ಕೆ (Drought) ಕರ್ನಾಟಕವು ತತ್ತರಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬರಗಾಲದಿಂದ ನೀರಿಗಾಗಿ ಹಾಹಾಕಾರ ಎದ್ದಿದೆ. ಇದರ ಜೊತೆಗೆ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ಕಂಗೆಟ್ಟಿದ್ದಾರೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಗರಿಷ್ಠ ಉಷ್ಣಾಂಶ 37.4 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಈ ನಡುವೆ ರಾಜ್ಯದಲ್ಲಿ ಮಳೆಯಾಗಲಿದೆ ಎನ್ನುವ ಹರ್ಷದಾಯಿಕ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲ್ಲದೆ, ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ ತಿಂಗಳ ಮೊದಲ 10 ದಿನ ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಚಿಕ್ಕಮಗಳೂರು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆಗಳು:
Cumulative Rainfall Forecast Maps for the next 2 weeks over the State. pic.twitter.com/xHqFG27HQB— Karnataka State Natural Disaster Monitoring Centre (@KarnatakaSNDMC) March 4, 2024
ಇದನ್ನೂ ಓದಿ: ಗದಗ: ಶುದ್ಧ ನೀರಿನ ಹರಿಕಾರ ಎಚ್ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಗುಡುಗು ಮತ್ತು ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬರಗಲಾಕ್ಕೆ ಬೆಂಗಳೂರು ಕೂಡ ತತ್ತರಿಸಿದ್ದು, ಕೆಲವೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಜನರು ಕುಡಿಯುವ ನೀರಿಗಾಗಿ ಟ್ಯಾಂಕರ್ ಮೊರೆ ಹೋಗಿದ್ದಾರೆ. ಮುಂದಿನ 48 ಗಂಟೆಗಳ ಬೆಂಗಳೂರಿನ ತಾಪಾಮಾನದ ಹೇಗಿರಲಿದೆ ಎಂಬುದನ್ನು ನೋಡುವುದಾದರೆ, ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:56 pm, Mon, 4 March 24